![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, May 5, 2021, 7:49 PM IST
ಕಾಪು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯ ಪಾವತಿಗೆ ನೀಡಲಾಗುತ್ತಿರುವ ಶೇ. 5ರ ರಿಯಾಯಿತಿ ಅವಧಿಯನ್ನು ಕೋವಿಡ್ ಸಂಕಷ್ಟದ ಕಾರಣದಿಂದಾಗಿ ಜೂ. 30ರವರೆಗೆ ವಿಸ್ತರಿಸಲಾಗಿದ್ದು, ಕಾಪು ಪುರಸಭೆ ವ್ಯಾಪ್ತಿಯಲ್ಲೂ ಇದೇ ನಿಯಮಾವಳಿ ಜಾರಿಗೆ ಬರಲಿದೆ ಎಂದು ಪುರಸಭೆಯ ಪ್ರಕಟಣೆ ತಿಳಿಸಿದೆ.
ಈ ಹಿಂದೆ 2020-21 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಎಪ್ರಿಲ್ 30ರವರೆಗೆ ಶೇ. 5 ರ ರಿಯಾಯಿತಿ ಸಹಿತವಾಗಿ ತೆರಿಗೆ ಪಾವತಿಗೆ ನಿರ್ದೇಶನ ನೀಡಲಾಗಿದ್ದು, ಇದೀಗ ಈ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಿ ಸರಕಾರ ಹೊಸ ಆದೇಶ ಹೊರಡಿಸಿದೆ.
ಕೋವಿಡ್ 19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಗೆ ಹೆಚ್ಚಿನ ಗಮನ ಹರಿಸಬೇಕಾಗಿರುವುದರಿಂದ ಸರಕಾರ ಅಗತ್ಯ ಸೇವೆಗಳನ್ನು ಹೊರತು ಪಡಿಸಿ, ಉಳಿದ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಮತ್ತು ಆರ್ಥಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಬಿಬಿಎಂಪಿ ಹೊರತು ಪಡಿಸಿ) ಈ ಆದೇಶದಂತೆ ತೆರಿಗೆ ವಿನಾಯಿತಿ ಸಹಿತ ಪಾವತಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಸರಕಾರದ ವಿನಾಯಿತಿ ಸಹಿತ ತೆರಿಗೆ ಪಾವತಿಗೆ ಕಾಲಾವಧಿ ವಿಸ್ತರಣೆಯ ಅವಕಾಶವನ್ನು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸ್ವಾಗತಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.