ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ
Team Udayavani, Jun 9, 2023, 5:15 PM IST
ಕಾಪು: ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದ ಕಾಮಗಾರಿಗೆ ಅನುಗುಣವಾಗಿ ಅಗ್ರಸಭೆ, ಮುಖ ಮಂಟಪ ನಿರ್ಮಾಣವಾಗಬೇಕಿದ್ದು ಅದಕ್ಕೆ ಪೂರ್ವಭಾವಿಯಾಗಿ ಪ್ರಸ್ತುತ ಇರುವ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ಗುಡಿಗಳನ್ನು ವಿಸರ್ಜಿಸಬೇಕಾಗಿದೆ. ಈ ಉದ್ದೇಶದಿಂದ ಅಮ್ಮನ ಅಭಯ ನುಡಿ ಮತ್ತು ಪ್ರಾಜ್ಞರ ಪ್ರಶ್ನಾ ಚಿಂತನೆಯಂತೆ ತಾತ್ಕಾಲಿಕ ಗುಡಿಗಳನ್ನು ನಿರ್ಮಿಸಲಾಗಿದ್ದು ಜೂ. 11ರಂದು ಬೆಳಿಗ್ಗೆ ಗಂಟೆ 8 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು, 11 ಕ್ಕೆ ಪೂರ್ಣಾಹುತಿ, ಪ್ರಸಾದ ವಿತರಣೆ ನಡೆಯಲಿದೆ.
ಜೂ. 12ರಂದು ಅಮ್ಮನ ಗದ್ದುಗೆ ಸಾನ್ನಿಧ್ಯ ಚಲನೆ ನಡೆಯಲಿದ್ದು ಬೆಳಿಗ್ಗೆ ಗಂಟೆ 7 ರಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆದು 8.30 ಕ್ಕೆ ನೂತನ ತಾತ್ಕಾಲಿಕ ಗುಡಿಯಲ್ಲಿ ಸಾನಿಧ್ಯ ಪ್ರತಿಷ್ಠೆ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ಜ್ಯೋತಿರ್ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ, ಜ್ಯೋತಿರ್ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಅವರ ಸಹಕಾರದೊಂದಿಗೆ ಚಂಡಿಕಾಯಾಗ, ಸಾನಿಧ್ಯ ಚಲನೆ, ಮತ್ತು ಸಾನಿಧ್ಯ ಪ್ರತಿಷ್ಠಾಪೂರ್ವಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಬೆಳಿಗ್ಗೆ 10 ಗಂಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮಿತಿ ಮುಖಂಡರಾದ ಸರ್ವೋತ್ತಮ ಶೆಟ್ಟಿ ಅಬುದಾಭಿ, ಮಲ್ಲಾರು ಶಶಿಧರ್ ಶೆಟ್ಟಿ ಮಸ್ಕತ್, ಮೂಳೂರು ಸುಧಾಕರ ಹೆಗ್ಡೆ ಮುಂಬಯಿ, ರವಿ ಸುಂದರ್ ಶೆಟ್ಟಿ ಮುಂಬಯಿ, ಸಂತೋಷ್ ಶೆಟ್ಟಿ ಇನ್ನಾ ಬಾಳಿಕೆ ಕುರ್ಕಿಲಬೆಟ್ಟು, ಉಪೇಂದ್ರ ಶೆಟ್ಟಿ ಬೆಂಗಳೂರು, ವಿವಿಧ ಸಮಾಜದ ಗಣ್ಯರಾದ ಎಂ.ಬಿ. ಪುರಾಣಿಕ್, ಆನಂದ್ ಎಂ. ಶೆಟ್ಟಿ, ಡಾ| ಜಿ. ಶಂಕರ್, ಬಿ.ಎನ್. ಶಂಕರ ಪೂಜಾರಿ, ಧರ್ಮಪಾಲ್ ಯು. ದೇವಾಡಿಗ, ಗಂಗಾಧರ ಆಚಾರ್ಯ, ರಾಮದಾಸ್ ಶೆಟ್ಟಿಗಾರ್, ಗೋಕುಲ್‌ದಾಸ್ ಬಾರ್ಕೂರು, ಜಯ ರಾಣ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಮಾರಿಯಮ್ಮನ ಕ್ಷೇತ್ರವು ಊರ ಪರವೂರ ಭಕ್ತಾದಿಗಳು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಶಿಲಾಸೇವೆಯೆಂಬ ವಿನೂತನ ಕಲ್ಪನೆಯ ಸಾಕಾರದೊಂದಿಗೆ ತ್ವರಿತಗತಿಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದೆ. ದೇಶ-ವಿದೇಶಗಳಲ್ಲಿರುವ ಅಮ್ಮನ ಭಕ್ತಾದಿಗಳು ಮತ್ತು ಸ್ವಯಂ ಸೇವಕರು ಕಂಕಣಬದ್ಧರಾಗಿ ಅಹರ್ನಿಶಿ ದುಡಿದು ಶಿಲಾ ಸೇವೆಯ ಮುಖೇನ ಸೇವೆಗೈಯ್ಯುತ್ತಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಕೆಲಸ ಕಾರ್ಯಗಳಲ್ಲೂ ಎಲ್ಲರ ಸಹಕಾರವನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯನ್ನು ತಾತ್ಕಾಲಿಕ ಗುಡಿಯಲ್ಲಿ ಸಾನಿಧ್ಯ ಪ್ರತಿಷ್ಠೆಯಾದ ಬಳಿಕ ತಾತ್ಕಾಲಿಕ ಗುಡಿಯಲ್ಲಿ ಹರಕೆ ಮಾರಿಪೂಜೆ, ಹರಕೆ ಚಂಡಿಕಾಯಾಗ ಹೊರತು ಪಡಿಸಿ ಮಂಗಳವಾರದಂದು ನಡೆಯುವ ಪೂಜೆ, ಸೇವೆ ಮತ್ತು ದರ್ಶನ ಸೇವೆ ಹಾಗೂ ಕಾಲಾವಧಿ ಮಾರಿಪೂಜೆ, ನವರಾತ್ರಿ ಉತ್ಸವ ನಡೆಯಲಿದೆ. ಮುಂದಿನ ನವರಾತ್ರಿ ಉತ್ಸವದ ಕಾಲದಲ್ಲಿ ನವ ನಿರ್ಮಾಣಗೊಳ್ಳುತ್ತಿರುವ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ ನಡೆಸಿ, 2024ರ ಸುಗ್ಗಿ ಮಾರಿಪೂಜಾ ಮಹೋತ್ಸವಕ್ಕೆ ಮುನ್ನ ನೂತನ ಗರ್ಭಗುಡಿಯ ಸ್ವರ್ಣ ಗದ್ದುಗೆಯಲ್ಲಿ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿಯ ಪ್ರತಿಷ್ಠೆ ನಡೆಯಲಿದೆ.
ಸುದ್ಧಿಗೋಷ್ಠಿಯಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.