Kaup ಹೊಸ ಮಾರಿಗುಡಿ: ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ
Team Udayavani, Oct 4, 2024, 6:40 AM IST
ಕಾಪು: ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿಯ ನೇತೃತ್ವದಲ್ಲಿ ಭಕ್ತರ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅ. 3ರಂದು ಮುಹೂರ್ತ ನೆರವೇರಿಸಲಾಯಿತು.
ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಗುಜ್ಜಾಡಿ ಸ್ವರ್ಣ ಜುವೆಲರ್ನಲ್ಲಿ ಸುಮಾರು 20 ಕೆ.ಜಿ. ಚಿನ್ನ ಮತ್ತು 160 ಕೆ.ಜಿ. ಬೆಳ್ಳಿಯೊಂದಿಗೆ ಸ್ವರ್ಣ ಗದ್ದುಗೆ ನಿರ್ಮಾಣಗೊಳ್ಳಲಿದೆ. ಟೆಂಡರ್ ಮೂಲಕ ಗುತ್ತಿಗೆ ಪಡೆದುಕೊಂಡಿರುವ ಗುಜ್ಜಾಡಿ ಸ್ವರ್ಣ ಜುವೆಲರ್ನ ದೀಪಕ್ ನಾಯಕ್ ಮತ್ತು ಶೈಲೇಶ್ ನಾಯಕ್ ಅವರಿಗೆ ಕಾಪು ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಸ್ವರ್ಣ ಗದ್ದುಗೆಯ ಕೆಲಸ ಆರಂಭಿಸಲು ಮುಹೂರ್ತ ನೆರವೇರಿಸಿ ಪ್ರಸಾದ ನೀಡಲಾಯಿತು.
ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಕೆ., ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ, ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಕಾರ್ಯದರ್ಶಿ ರವಿ ಭಟ್ ಮಂದಾರ, ಪ್ರಮುಖರಾದ ಮನೋಹರ್ ಶೆಟ್ಟಿ, ಮಾಧವ ಪಾಲನ್, ಜಯರಾಮ ಆಚಾರ್ಯ, ಬೀನಾ ಶೆಟ್ಟಿ, ಅನುರಾಧ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಸಾವಿತ್ರಿ ಗಣೇಶ್, ಜಯಲಕ್ಷಿ$¾à ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಅ. 29ರ ವರೆಗೆ ಸ್ವರ್ಣ ಸಮರ್ಪಣೆಗೆ ಅವಕಾಶ
ನವದುರ್ಗಾ ಐಕ್ಯ ಸ್ವರೂಪಿಣೀ ಕಾಪು ಮಾರಿಯಮ್ಮನ ದೇವಸ್ಥಾನದ ನವ ನಿರ್ಮಾಣ ಕಾರ್ಯಗಳೊಂದಿಗೆ ನೂತನ ಸ್ವರ್ಣ ಗದ್ದುಗೆ ಸಮರ್ಪಣೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅ. 29ರ ವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.