ಕಾಪು: ಸ್ಕೂಟಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಚಿತ್ರಗ್ರಾಹಕ ಸಾವು
Team Udayavani, Feb 9, 2023, 9:14 PM IST
ಕಾಪು : ಐದು ದಿನಗಳ ಹಿಂದೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹಸವಾರ, ಕಾಪು ಪೊಲಿಪು ನಿವಾಸಿ, ಯುವ ಛಾಯಾಗ್ರಾಹಕ ಪ್ರೀತೇಶ್ (38) ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ ಮತ್ತು ಮೂರು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಪ್ರೀತೇಶ್ ಛಾಯಾಚಿತ್ರಗ್ರಾಹಕ ವೃತ್ತಿಯ ಬಿಡುವಿನ ವೇಳೆ ಮಲ್ಪೆಗೆ ಮೀನುಗಾರಿಕೆಗೆ ತೆರಳುತ್ತಿದ್ದು, ಫೆ. 4ರಂದು ಸಂಜೆ ಪಡುಕರೆ – ಕಾಪು ರಸ್ತೆಯಲ್ಲಿ ಸ್ನೇಹಿತ ಪ್ರಶಾಂತ್ ಕುಮಾರ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿತ್ತು. ರಸ್ತೆಗೆ ಬಿದ್ದು ತಲೆಗೆ ಗಂಭೀರ ಏಟಾಗಿ, ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಿತೇಶ್ ಮತ್ತು ಸಣ್ಣಪುಟ್ಟ ಗಾಯಗೊಂಡಿದ್ದ ಪ್ರಶಾಂತ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ವೈದ್ಯರ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸಾ ವೆಚ್ಚ ಹೆಚ್ಚಿದ ಪರಿಣಾಮ ಅಲ್ಲಿಂದ ಮತ್ತೆ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಯುವ ಕ್ರಿಯಾಶೀಲ ಛಾಯಾಚಿತ್ರಗ್ರಾಹಕನಾಗಿದ್ದ ಪ್ರೀತೇಶ್ ಸುವರ್ಣ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್‌ನ ಅಜೀವ ಸದಸ್ಯರಾಗಿ, ಕಾಪು ವಲಯದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಸ್ಥಳೀಯ ಸರ್ಕಲ್ ಫ್ರೆಂಡ್ಸ್, ಪೊಲಿಪು ಗಣೇಶೋತ್ಸವ ಸಮಿತಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಕ್ರಿಯಾಶೀಲರಾಗಿದ್ದರು.
ಪ್ರೀತಿಸಿ ವಿವಾಹ
ಪ್ರಿತೇಶ್ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯ ಬಳಿಕವೂ ಪತ್ನಿಯ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ಆಕೆ ಪ್ರಸ್ತುತ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮೂರು ವರ್ಷದ ಪುಟ್ಟ ಬಾಲೆ ಇದ್ದಾಳೆ.
ಗಣ್ಯರ ಸಂತಾಪ
ಪ್ರಿತೇಶ್ ಅವರ ನಿಧನಕ್ಕೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಎಸ್‌ಕೆಪಿಎ ಕಾಪು ವಲಯ ಅಧ್ಯಕ್ಷ ವಿನೋದ್ ಕಾಂಚನ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ವಿಜಯ ಕರ್ಕೇರ, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ: ಸಚಿವರಿಂದ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.