ಕಾಪು : ಪೊಲಿಪುವಿನಲ್ಲಿ ಕಡಲ್ಕೊರೆತ ಭೀತಿ, ಕಾಮಗಾರಿ ವಿಳಂಬ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ
Team Udayavani, May 20, 2022, 3:35 PM IST
ಕಾಪು : ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡ್ ನ ಸಮುದ್ರ ತೀರದಲ್ಲಿ ಕಡಲ್ಕೊರೆತ ತಡೆಗೆ ತಡೆಗೋಡೆ ರಚಿಸುವ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದ್ದು ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಈ ಪರಿಸರದ 8ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರು ಪಾಲಾಗುವ ಹಂತದಲ್ಲಿವೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರಕಾರ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ವಿವಿಧ ರೀತಿಯ ಅಕ್ರಮಗಳನ್ನು ಬೆಂಬಲಿಸುತ್ತಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಇಲ್ಲಿನ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪುರಸಭಾ ಸದಸ್ಯೆ ರಾಧಿಕಾ ಸುವರ್ಣ ಮಾತನಾಡಿ, ಇಲ್ಲಿನ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿ, ಕಾರ್ಯ ನಿರ್ವಾಹಕ ಅಭಿಯಂತರರು, ಗುತ್ತಿಗೆದಾರರು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿದೆ. ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿ ಮೂರು ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಮನೆ ಮರಗಳು ಸಮುದ್ರ ಪಾಲಾಗುವ ಭೀತಿಯಿರುವುದರಿಂದ ಎಲ್ಲರನ್ನೂ ಎಚ್ಚರಿಸುವ ಸಲುವಾಗಿ ಸಾಂಕೇತಿಕವಾಗಿ ಪ್ರತಿಭಟನೆ ಆಯೋಜಿಸಲಾಗಿದೆ.
ಇದನ್ನೂ ಓದಿ : ಆಸಕ್ತಿಯೇ ನಮ್ಮನ್ನು ಮುನ್ನಡೆಸುವ ದೊಡ್ಡ ಶಕ್ತಿ : ಘಟಂ ವಾದಕ ಗಿರಿಧರ್ ಉಡುಪ ಮನದ ಮಾತು…
ಪುರಸಭಾ ಸದಸ್ಯರಾದ ಫರ್ಜಾನಾ, ಶೋಭಾ ಬಂಗೇರ, ಕಾಂಗ್ರೆಸ್ ಮುಖಂಡರಾದ ರಾಜೇಶ್ ಮೆಂಡನ್, ಸುಧಾಕರ ಸಾಲ್ಯಾನ್, ಅಶ್ವಿನಿ ಬಂಗೇರ, ಲವ ಕರ್ಕೇರ, ದೇವರಾಜ್ ಕೋಟ್ಯಾನ್ , ಅರುಣ್ ಶೆಟ್ಟಿ, ಅಶೋಕ್ ನಾಯಿರಿ, ಸ್ಥಳೀಯರಾದ ಸದಾನಂದ ಸುವರ್ಣ, ರತ್ನಾಕರ ಮೆಂಡನ್, ಲಕ್ಷ್ಮಣ ಸುವರ್ಣ, ಸದಾಶಿವ ಸುವರ್ಣ, ಅಶೋಕ್ ಸುವರ್ಣ, ಉದಯ ಸುವರ್ಣ, ಮನೋಜ್ ಪುತ್ರನ್, ದಿನೇಶ್ ಕುಂದರ್, ದಿನೇಶ್ ಮೆಂಡನ್, ಸೂರ್ಯನಾರಾಯಣ್, ಅಖಿಲ್, ರೋಹಿಣಿ, ಸುಧಾಕರ ಸುವರ್ಣ, ರಿತೇಶ್, ಕೃಷ್ಣ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.