Kaup ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ ಇನ್ನಿಲ್ಲ
Team Udayavani, Nov 13, 2023, 10:00 AM IST
ಕಾಪು: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದಾಗಿ ನಿಧನ ಹೊಂದಿದರು.
ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಸೋಮವಾರ ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದು, ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.
ಅಜ್ಜ ಇಮಾಮ್ ಸಾಹೇಬ್, ತಂದೆ ಬಾಬನ್ ಸಾಹೇಬ್ ಅವರಿಂದ ಬಳುವಳಿಯಾಗಿ ಬಂದ ನಾಗಸ್ವರ ವಾದನವನ್ನು ಕಳೆದ 40 ವರ್ಷಗಳಿಂದ ಮುಖ್ಯ ವೃತ್ತಿಯನ್ನಾಗಿಸಿ ಕೊಂಡು ಬಂದಿದ್ದ ಜಲೀಲ್ ಸಾಹೇಬ್ ಅವರು ಮುಸ್ಲಿಂ ವಾದ್ಯ ವಾದಕರಾಗಿದ್ದರೂ ಹಿಂದೂ ಧರ್ಮ, ಸಂಪ್ರಧಾಯ, ಸಂಸ್ಕೃತಿಯನ್ನು ಪ್ರೀತಿಸುತ್ತಿದ್ದರು, ಗೌರವಿಸುತ್ತಿದ್ದರು. ಅವರ ಪೂರ್ವಜರಿಂದ ಪರಂಪರಾಗತವಾಗಿ ಬಳುವಳಿಯಾಗಿ ಬಂದಿದ್ದ ನಾಗಸ್ವರ ವಾದನವನ್ನು ಅನೂಚಾನವಾಗಿ ನಡೆಸಿಕೊಂಡು ಬರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ನಾಗಸ್ವರ ವಾದಕ ಜಲೀಲ್ ಸಾಹೇಬ್ ಅವರ ಅಕಾಲಿಕ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ., ದೇಗುಲದ ತಂತ್ರಿ ವೇ.ಮೂ. ಅನಂತರಾಮ ತಂತ್ರಿ, ಕೆ.ಪಿ. ಶ್ರೀನಿವಾಸ ತಂತ್ರಿ ಮಡುಂಬು, ಗಣ್ಯರಾದ ಕೆ.ಪಿ. ಆಚಾರ್ಯ, ಕೆ. ವಾಸುದೇವ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಪ್ರಸಾದ್ ಗೋಕುಲ್ ದಾಸ್ ಶೆಣೈ, ಮೋಹನ್ ಬಂಗೇರ, ನಡಿಕೆರೆ ರತ್ನಾಕರ ಹೆಗ್ಢೆ, ಪ್ರಭಾಕರ ಪೂಜಾರಿ, ಮಾಧವ ಆರ್. ಪಾಲನ್, ವಿಕ್ರಂ ಕಾಪು, ಸಖೇಂದ್ರ ಸುವರ್ಣ, ಗಂಗಾಧರ ಸುವರ್ಣ, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ವೇ. ಮೂ. ಕೇಂಜ ಶ್ರೀಧರ ತಂತ್ರಿ, ಸುಧಾಕರ ಡಿ. ಅಮೀನ್ ಪಾಂಗಾಳ, ಸುರೇಶ್ ಶೆಟ್ಟಿ ಅಯೋಧ್ಯಾ, ಅನಿಲ್ ಬಲ್ಲಾಳ್, ಶ್ರೀಕರ ಶೆಟ್ಟಿ ಕಲ್ಯ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ರಘುರಾಮ ಶೆಟ್ಟಿ ಕೊಪ್ಪಲಂಗಡಿ, ಮನೋಹರ ಶೆಟ್ಟಿ ಕಾಪು, ಕೆ. ಲೀಲಾಧರ ಶೆಟ್ಟಿ, ಡಾ. ಪ್ರಶಾಂತ್ ಶೆಟ್ಟಿ, ವಿಶ್ವನಾಥ ಪೂಜಾರಿ ಮೂಳೂರು, ನವೀನ್ ಚಂದ್ರ ಜೆ. ಶೆಟ್ಟಿ, ನವೀನ್ ಚಂದ್ರ ಸುವರ್ಣ, ಸೇರಿದಂತೆ ವಿವಿಧ ದೇವಸ್ಥಾನ, ದೈವಸ್ಥಾನಗಳ ಮುಖ್ಯಸ್ಥರು, ಆಡಳಿತ ಮಂಡಳಿ, ಗುರಿಕಾರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.