ಕೆದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೂ ತತ್ವಾರ !
ಅವಧಿಗೂ ಮುನ್ನವೇ ಬತ್ತಿದ ಜಲಮೂಲಗಳು
Team Udayavani, Mar 31, 2019, 6:30 AM IST
ತೆಕ್ಕಟ್ಟೆ : ಬಿಸಿಲ ದಾಹಕ್ಕೆ ಕುಂದಾಪುರ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೆರೆ, ಮದಗ, ಬಾವಿಗಳು ಸಂಪೂರ್ಣ ಬತ್ತಿ ಹೋಗುತ್ತಿದ್ದು ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಕೆದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಅವಧಿಗೂ ಮೊದಲೇ ಕುಡಿಯುವ ನೀರಿನ ಸಮಸ್ಯೆಗಳು ಉಲ್ಬಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತ ಖಾಸಗಿ ಟ್ಯಾಂಕರ್‌ನ ಮೂಲಕ ನೀರು ಸರಬರಾಜು ಮಾಡುವ ಬಗ್ಗೆ ಚಿಂತನೆ ನಡೆಸಿದೆ.
ಉಳೂ¤ರಿನಲ್ಲಿ ಬತ್ತಿದ ಜಲ ಮೂಲ
ಗ್ರಾ.ಪಂ. ವ್ಯಾಪ್ತಿಯ ಉಳೂ¤ರು ತೆಂಕಬೆಟ್ಟು, ದೇವಸ್ಥಾನ ಬೆಟ್ಟು, ಉಳೂ¤ರು ನವಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈಗಾಗಲೇ ಕಾಡತೊಡಗಿದ್ದು, ಅಂತರ್ಜಲ ಮಟ್ಟ ಸಂಪೂರ್ಣ ಕುಸಿತ ಕಂಡಿದೆ. ಪರಿಣಾಮವಾಗಿ ಕೆದೂರು ಪ್ರತಾಪ ನಗರ, ಜನತಾ ಕಾಲನಿ, ಮೂಡು ಕೆದೂರು ಭಾಗದಲ್ಲಿ ಈಗಾಗಲೇ ನೀರಿನ ತತ್ವಾರ ಎದುರಾಗಿದೆ.
ಕುಡಿಯುವ ನೀರಿನ ಸರಬರಾಜು ಹೇಗೆ ?
ಕಳೆದ ಬಾರಿಯೂ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಎಚ್ಚೆತ್ತುಕೊಂಡಿದ್ದ ಸ್ಥಳೀಯಾಡಳಿತ ಮುಂಜಾಗ್ರತವಾಗಿ ಖಾಸಗಿ ಟ್ಯಾಂಕರ್ ಮೂಲಕ ನೀಡುವ ಸರಕಾರದ ಮಾನದಂಡದಂತೆ ಪ್ರತಿ ವ್ಯಕ್ತಿಗೆ 45 ಲೀ. ನೀರಿನಂತೆ ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮೀಣ ಭಾಗಗಳಿಗೆ ಒಟ್ಟು 25 ಸಾವಿರ ಲೀಟರ್ ನೀರನ್ನು ಸರಬರಾಜು ಮಾಡಿತ್ತು. ಆದರೆ ಈ ಬಾರಿ ಎಪ್ರಿಲ್ ತಿಂಗಳ ಆರಂಭದಲ್ಲಿಯೇ ಗ್ರಾಮದಲ್ಲಿ ನೀರಿನ ತತ್ವಾರ ಎದುರಾಗಿದ್ದು ಈ ಬಾರಿಯೂ ಅದೇ ಕ್ರಮವನ್ನು ಮುಂದುವರಿಸಲು ನಿರ್ಧರಿಸಲಾಗಿದೆ.
ವಾರಾಹಿ ನೀರು ಬಂದರೆ ಶಾಶ್ವತ ಪರಿಹಾರ
ಮಾರ್ಚ್‌ನಲ್ಲಿಯೇ ನೀರಿನ ಅಭಾವ ಎದುರಾಗಿರುವ ಕಾರಣ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ. ಹೂವಿನಕೆರೆಯ ವರೆಗೆ ಬಂದಿರುವ ವಾರಾಹಿ ಕಾಲುವೆ ನೀರು ನಮ್ಮ ಗ್ರಾಮಗಳಿಗೂ ಮುಂದಿನ ದಿನಗಳಲ್ಲಿ ಹರಿಸುವ ಮಹತ್ವದ ಕಾರ್ಯವಾದರೆ ಗ್ರಾಮಸ್ಥರ ಬೇಡಿಕೆಯಂತೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
-ಕೆದೂರು ಸತೀಶ್ ಕಾಮತ್, ಸ್ಥಳೀಯರು
ಟೆಂಡರ್ ಪ್ರಕ್ರಿಯೆ
ಗ್ರಾ.ಪಂ.ನ ಸದಸ್ಯರ ನಿರ್ಣಯದಂತೆ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳಿರುವ ಗ್ರಾಮೀಣ ಭಾಗಗಳಿಗೆ ಪರಿಶುದ್ಧ ನೀರು ಸರಬರಾಜು ಮಾಡಲಾಗುತ್ತದೆ.
-ಜಯರಾಮ ಶೆಟ್ಟಿ , ಪ್ರಭಾರ ಪಿಡಿಒ, ಕೆದೂರು ಗ್ರಾ.ಪಂ.
– ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.