ಕೇರಳದಿಂದ ಮೆಕ್ಕಾ ಯಾತ್ರೆಗೆ ಕಾಲ್ನಡಿಗೆ‌ ಮೂಲಕ ಹೊರಟ ಯುವಕನಿಗೆ ಕಾಪುವಿನಲ್ಲಿ ಸ್ವಾಗತ

ಕೇರಳದಿಂದ ಕಾಲ್ನಡಿಗೆ ಮೂಲಕ ಹಜ್ ಯಾತ್ರೆಗೆ ಹೊರಟ ಕೇರಳದ ಯುವಕ

Team Udayavani, Jun 11, 2022, 5:14 PM IST

Untitled-1

ಕಾಪು: ಕಳೆದ ಜೂನ್ 2ರಂದು ಕೇರಳದ ಮಲ್ಲಪ್ಪುರಂ ಜಿಲ್ಲೆಯಿಂದ ಕಾಲ್ನಡಿಗೆಯಿಂದ 2023ರ ಪವಿತ್ರ ಹಜ್ ಯಾತ್ರೆಗೆ ಹೊರಟ ಶಿಹಾಬ್ ಚೊಟ್ಟೂರು ಶನಿವಾರ ಉಡುಪಿ ಜಿಲ್ಲೆ ಪ್ರವೇಶಿಸಿದ್ದಾರೆ.

ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಗೆ ಆಗಮಿಸಿದ ಅವರನ್ನು ಕಣ್ಣಂಗಾರ್ ಜುಮ್ಮಾ ಮಸೀದಿಯ ಖತೀಬ್ ಅಶ್ರಫ್ ಸಖಾಫಿ ಕಿನ್ಯ ಹಾಗೂ ಮುಸ್ಲಿಮ್ ಬಾಂಧವರು ಸ್ವಾಗತಿಸಿದರು.

ಮೂಳೂರು ಕೇಂದ್ರ ಜುಮ್ಮಾ ಮಸೀದಿಯಲ್ಲಿ ಬೆಳಗ್ಗಿನ ಉಪಹಾರ ಸೇವಿಸಿದ ಅವರು ಸುಮಾರು ಅರ್ಧ ಗಂಟೆಗಳ ಕಾಲ ವಿಶ್ರಾಂತಿ ಹೊಂದಿ ತಮ್ಮ ಕಾಲ್ನಡಿಗೆ ಯಾತ್ರೆಯನ್ನು ಮುಂದುವರಿಸಿದರು. ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಜನರು ಅವರನ್ನು ಕುತೂಹಲದಿಂದ ನೋಡಲು ಸಾಲುಗಟ್ಟಿ ನಿಂತಿದ್ದರು. ಯುವಕರು, ವೃದ್ಧರೂ, ಮಕ್ಕಳು ಅವರೊಂದಿಗೆ ಹೆಜ್ಜೆ ಹಾಕಿ ಅವರ ಯಾತ್ರೆಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಿಹಾಬ್, ಕಾಲ್ನಡಿಗೆಯಲ್ಲಿ ತೆರಳಿ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ನನ್ನ ಏಳು ವರ್ಷದ ಕನಸಾಗಿತ್ತು. ಮುಂದಿನ ವರ್ಷದ ಹಜ್‌ಗಾಗಿ ಕಾಲ್ನಡಿಗೆಯಲ್ಲಿ ಯಾತ್ರೆ ಕೈಗೊಂಡಿದ್ದೇನೆ. ಪಾಕಿಸ್ಥಾನ, ಇರಾನ್, ಇರಾಕ್, ಕುವೈತ್, ಸೌದಿ ಅರೇಬಿಯಾ ಮೂಲಕ ಮೆಕ್ಕಾ ತಲುಪಲಿದ್ದು, 8640 ಕಿಮೀ ಕ್ರಮಿಸಲಿದ್ದೇನೆ ಎಂದರು.

ಇಕ್ಬಾಲ್ ಕಟಪಾಡಿ ಮಾತನಾಡಿ, ನೂರು ವರ್ಷಗಳ ಹಿಂದೆ ಅಂದು ಈಗಿನಷ್ಟು ಸಂಪರ್ಕ ವ್ಯವಸ್ಥೆ ಇಲ್ಲದ ಸಮಯದಲ್ಲಿ ನಮ್ಮ ಹಿರಿಯರು ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಕೈಗೊಂಡಿದ್ದರು. ಇತ್ತೀಚಿನ ಆಧುನಿಕ ವ್ಯವಸ್ಥೆ ಇರುವ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿ ಹಜ್‌ಗೆ ಯಾತ್ರೆ ಕೈಗೊಂಡಿರುವುದು ನಮಗೆ ತಿಳಿದಿಲ್ಲ. 8000 ಕಿಮೀ ನಷ್ಟು ದೂರ ಕಾಲ್ನಡಿಗೆಯಲ್ಲಿ ತೆರಳುವುದು ಸಾಹಸವಾಗಿದೆ. ಇವರ ಯಾತ್ರೆ ಒಳ್ಳೆಯ ರೀತಿಯಲ್ಲಿ ನಡೆಯಲಿದೆ ಎಂದು ಹಾರೈಸಿದರು.

ಮೂಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮೂಳೂರು ಜುಮ್ಮಾ ಮಸೀದಿ ಮುದರ್ರಿಸ್ ಅಶ್ರಫ್ ಸಖಾಫಿ ಕಕ್ಕಿಂಜೆ ಅಭಿನಂದಿಸಿದರು. ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರು, ಉಡುಪಿ ಜಿಲ್ಲಾ ಕರ್ನಾಟಕ ಮುಸ್ಲಿಮ್ ಜಮಾಅತ್ ಉಡುಪಿ ಜಿಲ್ಲಾ ಅಧ್ಯಕ್ಷ ಬಿ.ಎಸ್.ಎಫ್ ರಫೀಕ್, ಅಲ್ ಇಹ್ಸಾನ್ ಸಂಸ್ಥೆಯ ಮ್ಯಾನೇಜರ್ ಮುಸ್ತಫಾ ಸಅದಿ, ಮೂಳೂರು ಮಸೀದೊ ಅಧ್ಯಕ್ಷ ಸಯ್ಯದ್ ಮುರಾದರ್‌ ಅಲಿ, ಕಟಪಾಡಿ ಜುಮಾ ಮಸೀದಿಯ ಅಧ್ಯಕ್ಷ ಮುಹಿಯುದ್ದೀನ್ , ಕಾರ್ಯದರ್ಶಿ ಎಸ್.ಆರ್ ರಫೀಕ್, ಕೋಶಾಧಿಕಾರಿ ಎನ್.ಎಸ್. ಅಬ್ದುಲ್ ರಹ್ಮಾನ್ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕಡೆಗಳಲ್ಲಿ ಅಭಿನಂದನೆ: ಪಡುಬಿದ್ರಿಯಲ್ಲಿ ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ಶಾಲು ಹೊಂದಿಸಿ ಅಭಿನಂದಿಸಿದರು. ಉಚ್ಚಿಲದಲ್ಲಿ ಸಾಮಾಜಿಕ ಕಾರ್ಯಕರ್ತ ನಿಸಾರ್ ಅಹಮದ್ ಮೂಲ್ಕಿ ರಾಷ್ಟ್ರಧ್ವಜ ನೀಡಿ ಸ್ವಾಗತಿಸಿದರು. ಅಲ್‌ಇಹ್ಸಾನ್ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಸಂಸ್ಥೆಯ ಮ್ಯಾನೇಜರ್ ಮುಸ್ತಫಾ ಸಅದಿ ಶಾಲು ಹೊದಿಸಿ ಅಭಿನಂದಿಸಿದರು. ಕಾಪುವಿನಲ್ಲಿ ಖಾಜಿ ಪಿ.ಬಿ. ಅಹ್ಮದ್ ಮುಸ್ಲಿಯಾರ್, ಖತೀಬ್ ಇರ್ಷಾದ್ ಸ ಅದಿ, ಅಬ್ಸುಲ್ ರಶೀದ್ ಸಖಾಪಿ, ಎಚ್ಮ ಅಬ್ದುಲ್ಲಾ ಸೇರಿದಂತೆ ವಿದ್ಯಾರ್ಥಿಗಳು ದಫ್ ಮೂಲಕ ಸ್ವಾಗತಿಸಿದರು.

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.