ಕೆರ್ವಾಶೆ: ಅಂಗವಿಕಲ ಮಗನನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಂದೆ
Team Udayavani, Jun 18, 2022, 7:36 PM IST
ಅಜೆಕಾರು: ಅಂಗವಿಕಲ ಮಗನನ್ನು ಬಾವಿಗೆ ತಳ್ಳಿ ಬಳಿಕ ತಂದೆ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ಜೂ. 18ರಂದು ನಡೆದಿದೆ.
ಕೆರ್ವಾಶೆ ಗ್ರಾಮದ ಶೆಟ್ಟಿಬೆಟ್ಟು ಸಮೀಪದ ಪಾಚರಬೆಟ್ಟು ನಿವಾಸಿ ಕೃಷ್ಣ ಪೂಜಾರಿ(55)ಅವರು ವಿಕಲಚೇತನ ಮಗ ದೀಪೇಶ್ (26) ಅವರನ್ನು ಬಾವಿಗೆ ತಳ್ಳಿ ಆತ ಮೃತಪಟ್ಟ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷ್ಣ ಪೂಜಾರಿ ಅವರು ಪತ್ನಿ ಹಾಗೂ ಅಂಗವಿಕಲ ಮಗ ದೀಪೇಶ್ ಜತೆ ವಾಸವಿದ್ದು, ಇತ್ತೀಚಿನ ಕೆಲವು ವರ್ಷಗಳಿಂದ ಪತ್ನಿಯೂ ಕೂಡ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೃಷ್ಣ ಪೂಜಾರಿಯವರು ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡಬೇಕಿತ್ತು. ಆದರೆ ಇಬ್ಬರ ಆರೈಕೆ ಮಾಡಿ ಕೆಲಸಕ್ಕೆ ಹೋಗುವುದು ಅಸಾಧ್ಯವಾಗಿತ್ತು. ಜೀವನ ನಿರ್ವಹಣೆ ಕಷ್ಟವಾಗಿದ್ದು, ಇದ್ದರಿಂದ ಜೀವನದಲ್ಲಿ ನೊಂದು ಜೂ. 18ರಂದು ಮಗ ದೀಪೇಶ್‌ನನ್ನು ಬಾವಿಗೆ ತಳ್ಳಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.