ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ


Team Udayavani, Apr 25, 2024, 4:03 PM IST

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಉಡುಪಿ: ಕರಾವಳಿಯ ಸಮಸ್ಯೆಗಳನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತರುವ ಅಭಿವೃದ್ಧಿಗೆ ಪೂರಕವಾಗುವ ಸಂಸದರು ಇಲ್ಲಿಗೆ ಬೇಕಾಗಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಕಿರಣ್‌ ಕುಮಾರ್‌ ಉದ್ಯಾವರ ಅವರು ಹೇಳಿದ್ದಾರೆ .

ಜಿಲ್ಲಾ ಅಭಿವೃದ್ಧಿ ಕೆಲಸದಲ್ಲಿ 10 ವರ್ಷ ಹಿಂದೆ ಬಿದ್ದಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಇರುವ ಉಡುಪಿಯಲ್ಲಿ ಒಂದೇ ಒಂದು ಐಟಿ ಅಥವಾ ಯುವಕ ಯುವತಿಯರಿಗೆ ಒಳ್ಳೆಯ ಉದ್ಯೋಗ ನೀಡುವಂತಹ ಯಾವುದೇ ಕಂಪನಿ ಕಾಣಸಿಗುವುದಿಲ್ಲ. ಇಲ್ಲಿನ ಯುವಕರು ಯುವತಿಯರು ಉದ್ಯೋಗ ಅರಸಿ ಇತರ ಕಡೆಗೆ ಹೋಗುತ್ತಿದ್ದಾರೆ. ಅದು ನಿಲ್ಲಬೇಕು .ಇಲ್ಲಿಯೇ ಇಲ್ಲಿನ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಸಿಗುವಂತಾಗಬೇಕು ಎಂದರು . ಈಗಾಗಲೇ ನಾವು ಉಡುಪಿ ನಗರದ ಹೊರವಲಯದಲ್ಲಿರುವ ಸಂತೆಕಟ್ಟೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ನಮ್ಮಕಣ್ಣ ಮುಂದಿದೆ .ಅಲ್ಲದೇ ಮಲ್ಪೆ ಮೀನುಗಾರಿಕಾ ಬಂದರಿಗೆ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮಲ್ಪೆ ಬೀಚ್‌ ಗೆ ಹೋಗುವ ರಸ್ತೆಯ ಕಾಮಗಾರಿಯು ಇನ್ನೂ ಕುಂಠಿತವಾಗಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ .

ಕರಾವಳಿಯ ಮೀನುಗಾರರ ನಿರ್ಲಕ್ಷé ಮಾಡಲಾಗುತ್ತಿದೆ . ಈ ಹಿಂದೆ ಮುಳುಗಡೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಇನ್ನೂ ನೀಡಿಲ್ಲ. ಇದಕ್ಕೆ ಕಾರಣ ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ಈ ಬಗ್ಗೆ ಸರಿಯಾದ ಮಾಹಿತಿ ಪ್ರಧಾನಿಗಳ ಗಮನಕ್ಕೆ ತಂದಿಲ್ಲ. ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ತಮ್ಮ ಹೆಸರಿನಿಂದ ತಮ್ಮ ಅಭಿವೃದ್ಧಿ ಕಾರ್ಯದಿಂದಗೆಲ್ಲದೇ ಬರೀ ಪ್ರಧಾನಮಂತ್ರಿಗಳ ಹೆಸರಲ್ಲಿಗೆದ್ದಿದ್ದಾರೆ. ಹೀಗಾಗಿ ಇಲ್ಲಿನ ಯಾವುದೇ ಸಮಸ್ಯೆಗಳು ಪ್ರಧಾನ ಮಂತ್ರಿಗಳವರೆಗೆ ಹೋಗುವುದಿಲ್ಲ. ಮುಂದೆ ಬರುವ ಸಂಸದರು ಕೂಡ ಪ್ರಧಾನಿಗಳ ಹೆಸರಲ್ಲಿಗೆದ್ದರೆ ಕರಾವಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ . ಮುಂದೆ ಓರ್ವ ಉತ್ತಮ ನಾಯಕನನ್ನು ನಾವು ಗೆಲ್ಲಿಸಿದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಪ್ರಧಾನಿಗಳ ಬಳಿ ಮಾತನಾಡಲು ಸಾಧ್ಯವಾಗುತ್ತದೆ .ಆದುದರಿಂದ ಶಾಸಕರಾಗಿ, ಮಂತ್ರಿಗಳಾಗಿ, ಲೋಕಸಭಾ ಸದಸ್ಯರಾಗಿ ಅನುಭವ ಇರುವ ಜಯಪ್ರಕಾಶ್‌ ಹೆಗ್ಡೆ ಅವರನ್ನು ಆರಿಸಿ ಕಳಿಸಿದರೆ ಕರಾವಳಿ ಭಾಗದಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ . ಕೋಟ ಶ್ರೀನಿವಾಸ ಪೂಜಾರಿ ಅವರು ಓರ್ವ ಉತ್ತಮ ನಾಯಕ ಅವರು ರಾಜ್ಯದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿದ್ದಾರೆ . ಮತ್ತೂಂದೆಡೆ ಜಯಪ್ರಕಾಶ್‌ ಹೆಗ್ಡೆ ಅವರು ಕೂಡಾ ಓರ್ವ ಅಭಿವೃದ್ಧಿಗೆ ಪೂರಕವಾಗಿರುವ ಅಭ್ಯರ್ಥಿಯಾಗಿದ್ದಾರೆ. ಅವರು ಸಂಸದರಾಗಿ ದೇಶದ ಹಾಗೂ ಉಡುಪಿ ಚಿಕ್ಕಮಗಳೂರಿನ ಅಭಿವೃದ್ಧಿಗೆ ಬೇಕಾಗಿದ್ದಾರೆ .

ಯಾವುದೇ ರಾಜಕೀಯ ಪಕ್ಷದ ಪ್ರಚಾರ ಕಾರ್ಯದಲ್ಲಿ ಹಿಂದುಳಿದ ವರ್ಗದವರನ್ನು ಕಾಣಬಹುದು. ಎಲ್ಲ ಕೆಲಸಕಾರ್ಯದಲ್ಲು ಹಿಂದುಳಿದ ವರ್ಗದವರಿಗೆ ಮುಂದೆ ಅದೇ ರೀತಿ ಅನ್ಯಾಯ ಕೂಡ ಆಗುವುದು ಹಿಂದುಳಿದ ವರ್ಗದವರಿಗೆ ಮಾತ್ರ. ಇದನ್ನು ಯಾರು ಅರ್ಥ ಮಾಡಿಕೊಳ್ಳುವುದಿಲ್ಲ.ಇತರರ ಹಾಗೇ ನಮ್ಮ ಮುಂದಿನ ಮಕ್ಕಳಿಗೆ ಉತ್ತಮ ಭವಿಷ್ಯ, ವಿದ್ಯಾಭ್ಯಾಸ, ಉದ್ಯೋಗ ಸಿಗುವಂತಾಗಬೇಕು.

ಮೊಗವೀರರಿಗೆ ಬಿಲ್ಲವ ಮತ್ತು ಬಂಟರು ಎರಡು ಕಣ್ಣುಗಳಿದ್ದಂತೆ .ಇದರಲ್ಲಿ ನಾವು ನಮ್ಮ ಎರಡೂ ಕಣ್ಣುಗಳನ್ನು ಉಳಿಸಿಕೊಳ್ಳುವುದು ಅತೀಮುಖ್ಯ .ಇಬ್ಬರನ್ನು ರಾಜಕೀಯದ ಮುಂಚೂಣಿಯಲ್ಲಿರಿಸಬೇಕಾದರೆ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದಲ್ಲಿ ಹಾಗೂ ಜಯಪ್ರಕಾಶ್‌ ಹೆಗ್ಡೆ ಅವರು ಸಂಸದರಾಗಿ ದೇಶದಲ್ಲಿರುವುದು ಅತಿಮುಖ್ಯ. ಮೊಗವೀರರಿಗೆ ದೇಶದಲ್ಲಿ ಸಂಸದರಾಗಿ ಜಯಪ್ರಕಾಶ್‌ ಹೆಗ್ಡೆ ಮತ್ತು ರಾಜ್ಯದಲ್ಲಿ ನಮ್ಮ ಪರವಾಗಿ ಹೋರಾಡಲು ಎರಡು ಶಕ್ತಿ ಸಿಕ್ಕಂತಾಗುತ್ತದೆ. ಆದುದರಿಂದ ನಾವು ಯೋಚಿಸಿ ಮತ ಹಾಕಬೇಕಾಗಿದೆ ಎಂದು ಕಿರಣ್‌ಕುಮಾರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.