ಮಣಿಪಾಲ KMC ಮತ್ತು ಉಡುಪಿ TMAಪೈ ಆಸ್ಪತ್ರೆಗಳಲ್ಲಿ ನಾಳೆಯಿಂದ ಒಪಿಡಿ ಸೇವೆಗಳು ಸಂಪೂರ್ಣ ಬಂದ್
ಉಡುಪಿ ಜಿಲ್ಲೆಯ ಈ ಎರಡೂ ಆಸ್ಪತ್ರೆಗಳಲ್ಲಿ ಎಪ್ರಿಲ್ 15ರವರೆಗೆ ಒಪಿಡಿ ಸೇವೆಗಳು ಲಭ್ಯ ಇರುವುದಿಲ್ಲ ; ಮಕ್ಕಳಿಗೆ ಕೊಡಲಾಗುವ ಲಸಿಕಾ ಸೌಲಭ್ಯ ಕೂಡಾ 15 ಏಪ್ರಿಲ್ 2020ರವರೆಗೆ ಇರುವುದಿಲ್ಲ.
Team Udayavani, Mar 26, 2020, 3:55 PM IST
ಉಡುಪಿ: ಮಣಿಪಾಲದಲ್ಲಿರುವ ಕಸ್ತೂರ್ಬಾ ಆಸ್ಪತ್ರೆ ಹಾಗೂ ಉಡುಪಿಯಲ್ಲಿರುವ ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಮಾರ್ಚ್ 27ರ ಶುಕ್ರವಾರದಿಂದ ಅನ್ವಯವಾಗುವಂತೆ ಎಪ್ರಿಲ್ 15ರವರೆಗೆ ಎಲ್ಲಾ ರೀತಿಯ ಹೊರ ರೋಗಿ ಚಿಕಿತ್ಸಾ ಸೇವೆಗಳನ್ನು (ಒ.ಪಿ.ಡಿ.) ರದ್ದುಗೊಳಿಸಲಾಗಿದೆ. ಕೋವಿಡ್ 19 ವೈರಸ್ ಪ್ರಕರಣಗಳು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಈ ನಿರ್ಧಾರವನ್ನು ಇಂದು ಪ್ರಕಟಿಸಿದ್ದಾರೆ.
ಆದರೆ, ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಳು ಅಗತ್ಯವಿರುವ ರೋಗಿಗಳಿಗೆ ಲಭ್ಯವಿರುತ್ತದೆ. ಆದರೆ ಉಡುಪಿಯಲ್ಲಿರುವ ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಹೊರ ರೋಗಿ, ಒಳ ರೋಗಿ ಮತ್ತು ತುರ್ತು ಸೇವಾ ವಿಭಾಗಗಳನ್ನು ಈ ಮೇಲೆ ತಿಳಿಸಿದ ದಿನಾಂಕದವರೆಗೆ ಮುಚ್ಚಲಾಗುವುದು.
ಜ್ವರ, ಕೆಮ್ಮು ಸೇರಿದಂತೆ ಬೇರಿನ್ಯಾವುದೇ ಆರೋಗ್ಯ ಸಮಸ್ಯೆಗಳ ತಪಾಸಣೆಗೆ ಬರುವ ರೋಗಿಗಳು ನೇರವಾಗಿ ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡತಕ್ಕದ್ದು. ಅಲ್ಲಿಂದ ಬಳಿಕ ಅವರಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಆಸ್ಪತ್ರೆಯ ಸಂಬಂಧಿತ ವಿಭಾಗಗಳಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು.
ಕಿಮೋಥೆರಪಿ ಮತ್ತು ರೇಡಿಯೋಥೆರಪಿಗಾಗಿ ಆಗಮಿಸುವ ರೋಗಿಗಳು ನೇರವಾಗಿ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಗೆ ಬರತಕ್ಕದ್ದು. ಗರ್ಭಿಣಿಯರು ನೇರವಾಗಿ ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ ಬರತಕ್ಕದ್ದು. ಡಯಾಲಿಸಿಸ್‍ನಲ್ಲಿರುವವರು ನೇರವಾಗಿ ಡಯಾಲಿಸಿಸ್ ಕೇಂದ್ರಕ್ಕೆ ಬರತಕ್ಕದ್ದು. ಪ್ರಯೋಗಾಲಯ ಪರೀಕ್ಷಾ ಸೇವೆಯು ತುರ್ತು ಸಂದರ್ಭಕ್ಕೆ ಮಾತ್ರ ಅನ್ವಯಿಸುವುದು. ಮಕ್ಕಳಿಗೆ ಕೊಡಲಾಗುವ ಲಸಿಕಾ ಸೌಲಭ್ಯ ಕೂಡಾ 15 ಏಪ್ರಿಲ್ 2020ರವರೆಗೆ ಇರುವುದಿಲ್ಲ.
27 ಮಾರ್ಚ್ 2020 ಶುಕ್ರವಾರದಿಂದ ಅನ್ವಯವಾಗುವಂತೆ ಡಾ. ಟಿಎಂಎ ಪೈ ಆಸ್ಪತ್ರೆ, ಉಡುಪಿಯಲ್ಲಿ ಎಲ್ಲಾ ಹೊರರೋಗಿ, ಒಳರೋಗಿ ಮತ್ತು ತುರ್ತುಸೇವೆ ವಿಭಾಗವನ್ನು ಮುಚ್ಚಲಾಗುವುದು. ತುರ್ತುಸೇವೆ ಅವಶ್ಯವಿರುವ ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯ ಎಲ್ಲಾ ರೋಗಿಗಳು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಭೇಟಿ ನೀಡುವಂತೆ ಈ ಮೂಲಕ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.