KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Team Udayavani, Nov 21, 2024, 4:35 PM IST
ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ ಗುರುವಾರ (ನ.21) ನಡೆಯಿತು.
ರೋಗಿಗಳು ಮತ್ತು ಸಂದರ್ಶಕರಿಗೆ ಉತ್ತಮ ಸೇವೆ ನೀಡುವ, ಉತ್ತಮವಾಗಿ ವಿನ್ಯಾಸಗೊಳಿಸಲಾದ ವೈಟಿಂಗ್ ಕೋಣೆಯೊಂದಿಗೆ ಆರಾಮದಾಯಕ ಸಮಾಲೋಚನೆ ಸೌಲಭ್ಯಗಳನ್ನು ನವೀಕರಿಸಲಾಗಿವೆ. ಡೇ ಕೇರ್ ಕೇಂದ್ರವು ಕೀಮೋಥೆರಪಿ ಮತ್ತು ಇತರ ವಿಶೇಷ ಆಂಕೊಲಾಜಿ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.
ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅವರು ಸುಧಾರಿತ ಡೇ ಕೇರ್ ಸೆಂಟರ್ ಅನ್ನು ಉದ್ಘಾಟಿಸಿ ಮಾತನಾಡಿ ಅತ್ಯಾಧುನಿಕ ವೈದ್ಯಕೀಯ ಆರೈಕೆಯನ್ನು ಒದಗಿಸಲು ಮತ್ತು ರೋಗಿಗಳ ಸೌಕರ್ಯವನ್ನು ಹೆಚ್ಚಿಸಲು ಸಂಸ್ಥೆಯ ಬದ್ಧತೆಯನ್ನು ಒತ್ತಿ ಹೇಳಿದರು.
ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನಗಳ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್, ಅವರು ನವೀಕರಿಸಿದ ಹೊರ ರೋಗಿ ವಿಭಾಗವನ್ನು ಉದ್ಘಾಟಿಸಿದರು. ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳನ್ನು ಸುಧಾರಿಸಲು ತೆಗೆದುಕೊಂಡ ಸಮಗ್ರ ವಿಧಾನವನ್ನು ಶ್ಲಾಘಿಸಿದರು.
ವೈದ್ಯಕೀಯ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕರುಗಳಾದ ಡಾ. ಕಾರ್ತಿಕ್ ಉಡುಪ ಮತ್ತು ಡಾ. ಅನಂತ್ ಪೈ ಅವರು ನವೀಕರಿಸಿದ ಕೇಂದ್ರದಲ್ಲಿ ಲಭ್ಯವಿರುವ ಸೇವೆಗಳ ಶ್ರೇಣಿ ಮತ್ತು ವರ್ಧಿತ ರೋಗಿಗಳ ಆರೈಕೆ ಸಾಮರ್ಥ್ಯಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು.
ಸಮಾರಂಭದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ; ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಸಿ ಓಓ ಡಾ. ಆನಂದ್ ವೇಣುಗೋಪಾಲ್; ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ, ಕೆ ಎಂ ಸಿ ಮಣಿಪಾಲದ ಸಹ ಡೀನ್ ಮತ್ತು ಮಣಿಪಾಲ್ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ (MCCCC) ನ ಸಂಯೋಜಕರಾದ ಡಾ. ನವೀನ್ ಸಾಲಿನ್ಸ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.