ಸಮಾಜಮುಖೀ ಕೆಲಸಗಳು ಸ್ತುತ್ಯರ್ಹ: ಡಾ| ಎಚ್.ಎಸ್. ಬಲ್ಲಾಳ್
Team Udayavani, Dec 6, 2018, 11:10 PM IST
ಉಡುಪಿ: ಆರ್ಥಿಕ ಅಶಕ್ತತೆಯಿಂದ ಬಳಲುತ್ತಿರುವ ರೋಗಿಗಳಿಗೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವರ್ಷಂಪ್ರತಿ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಮಾದರಿ ಕಾರ್ಯಗಳನ್ನು ನಿರ್ವಹಿಸುತ್ತಾ ಬರುತ್ತಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಅಧ್ಯಕ್ಷ ಡಾ| ಎಚ್.ಎಸ್. ಬಲ್ಲಾಳ್ ಅವರು ಹೇಳಿದರು. ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ನಡೆದ ಮೂರು ದಿನಗಳ ಸ್ಮಾರಕ ದತ್ತಿನಿಧಿ ಉಪನ್ಯಾಸದಲ್ಲಿ ಅಂತಿಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಥಮ ದಿನದ ಉಪನ್ಯಾಸದಲ್ಲಿ ದೇಶೀ ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಎಂಬ ವಿಷಯದ ಮೇಲೆ ಮುಂಬಯಿ ಐಐಟಿಬಿಯ ಮೊನಾಷ್ ರೀಸರ್ಚ್ ಸಿ.ಇ.ಒ. ಡಾ| ಮುರಳಿ ಶಾಸ್ತ್ರಿ ಅವರು ಉಪನ್ಯಾಸ ನೀಡಿ ದೇಶೀಯ ತಂತ್ರಜ್ಞಾನಗಳ ಆವಿಷ್ಕಾರಗಳ ಸಂಖ್ಯೆ ಹೆಚ್ಚಾಗಬೇಕು ಮತ್ತು ನಮ್ಮ ಯುವ ತಂತ್ರಜ್ಞರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ರಿಜಿಸ್ಟಾರ್ ಡಾ| ನಾರಾಯಣ ಸಭಾತ್ ಅವರು ವಹಿಸಿದ್ದರು.
ಎರಡನೇ ದಿನದ ಉಪನ್ಯಾಸವನ್ನು ನೀಡಿದ ನ್ಯಾಯವಾದಿ ಎ.ಎಸ್.ಎನ್. ಹೆಬ್ಟಾರ್ ಅವರು ಕರಾವಳಿ ಕರ್ನಾಟಕದಲ್ಲಿ ಪ್ರಕಟನಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ತೇಜಕ ಎಂಬ ವಿಷಯದ ಕುರಿತಾಗಿ ಮಾತನಾಡಿ ಕಳೆದ ಹಲವಾರು ದಶಕಗಳಿಂದ ಕರಾವಳಿಯಲ್ಲಿ ಆಗಿರುವ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಅದರಲ್ಲಿ ಆಗಿರುವ ಪಲ್ಲಟಗಳ ಕುರಿತಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಆಫ್ ಮಣಿಪಾಲ ಇದರ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಅವರು ವಹಿಸಿದ್ದರು.
ಮೂರನೇ ಮತ್ತು ಅಂತಿಮ ದಿನದ ದತ್ತಿನಿಧಿ ಉಪನ್ಯಾಸವನ್ನು ಸಮುದಾಯ ಸೇವೆಗಳಿಗೆ ಆರೋಗ್ಯ ಸೇವೆಗಳು ಎಂಬ ವಿಷಯದ ಮೇಲೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಉಪ ಕುಲಪತಿ ಡಾ| ಎಚ್. ವಿನೋದ್ ಭಟ್ ನೀಡಿದರು. ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಪ್ರೊ| ಚಾನ್ಸ್‌ಲರ್ ಡಾ| ಹೆಚ್.ಎಸ್. ಬಲ್ಲಾಳ್ ಅವರು ವಹಿಸಿದ್ದರು.
ಟ್ರಸ್ಟ್ ನ ಸಂಚಾಲಕರಾಗಿರುವ ಡಾ. ನಯನಾಭಿರಾಮ ಉಡುಪ ಅವರು ಟ್ರಸ್ಟ್ ನ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಕಾರ್ಯದರ್ಶಿ ಹಾಗೂ ಯುಗಪುರುಷ ಪತ್ರಿಕೆಯ ಸಂಪಾದಕ ಕೆ. ಭುವನಾಭಿರಾಮ ಉಡುಪ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.