ನ. 19 ರಿಂದ 20ರವರೆಗೆ ಮಣಿಪಾಲದಲ್ಲಿ ಸ್ಮಾರಕ ದತ್ತಿನಿಧಿ ಉಪನ್ಯಾಸ


Team Udayavani, Nov 16, 2018, 8:22 PM IST

kodethoor-trust-16-11.jpg

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಸಹ ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್ ಟ್ರಸ್ಟ್ ನವಂಬರ್ 18, 19 ಮತ್ತು 20ರಂದು ಸ್ಮಾರಕ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ.

ಕಾರ್ಯಕ್ರಮಗಳ ವಿವರಗಳು ಈ ಕೆಳಗಿನಂತಿವೆ:
ನವಂಬರ್ 18, ರವಿವಾರ
: ‘ಭಾರತೀಯ ಸನ್ನಿವೇಶದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ’ ಎಂಬ ವಿಷಯದ ಮೇಲೆ ಐಐಟಿಬಿ, ಮೊನಾಶ್ ರಿಸರ್ಚ್ ಅಕಾಡೆಮಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (CEO) ಡಾ. ಮುರಳಿ ಶಾಸ್ತ್ರಿ ಅವರು ಶ್ರೀ ವಾಸುದೇವ ಉಡುಪ, ಶ್ರೀ ರಾಮಕೃಷ್ಣ ಉಡುಪ ಮತ್ತು ಶ್ರೀ ಕೆ.ಜಿ. ಉಡುಪ ಸ್ಮಾರಕ ಉಪನ್ಯಾಸವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ರಿಜಿಸ್ಟ್ರಾರ್ ಆಗಿರುವ ಡಾ. ನಾರಾಯಣ ಸಭಾಹಿತ್ ಅವರು ವಹಿಸಿಕೊಳ್ಳಲಿದ್ದಾರೆ. ಈ ಉಪನ್ಯಾಸ ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ, ಮಣಿಪಾಲದ ಇಂಟರಾಕ್ಟ್ LH ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಸಭಾಂಗಣದಲ್ಲಿ ನಡೆಯಲಿದೆ.

ನವಂಬರ್ 19, ಸೋಮವಾರ : ‘ಕರಾವಳಿ ಕರ್ನಾಟದಲ್ಲಿ ಪ್ರಕಟನಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ತೇಜಕ’ ಎಂಬ ವಿಷಯದ ಕುರಿತಾಗಿ ಕುಂದಾಪುರದ ನ್ಯಾಯವಾದಿ ಹಾಗೂ ರೋಟರಿ ಮಾಜೀ ಜಿಲ್ಲಾ ಗವರ್ನರ್ ಆಗಿರುವ, ರೊಟೇರಿಯನ್ PHF A.S.N. ಹೆಬ್ಬಾರ್ ಅವರು ಶ್ರೀ ಶ್ರೀನಿವಾಸ ಉಡುಪ ಮತ್ತು ಶ್ರೀ ಕೆ.ಎ. ಉಡುಪ ಸ್ಮಾರಕ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಆಫ್ ಮಣಿಪಾಲ ಇದರ ಆಡಳಿತಾಧಿಕಾರಿಯಾಗಿರುವ ಡಾ. ಹೆಚ್. ಶಾಂತರಾಮ್ ಅವರು ವಹಿಸಿಕೊಳ್ಳಲಿದ್ದಾರೆ. ಈ ಉಪನ್ಯಾಸ ಕಾರ್ಯಕ್ರಮವು ಸಾಯಂಕಾಲ 04.00 ಗಂಟೆಯಿಂದ 05.00 ಗಂಟೆಯವರೆಗೆ, MGM ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ನವಂಬರ್ 20, ಮಂಗಳವಾರ : ‘ಸಮುದಾಯ ಸೇವೆಗಳಿಗೆ ಆರೋಗ್ಯ ಸೇವೆಗಳು’ ಎಂಬ ವಿಷಯದ ಕುರಿತಾಗಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಉಪ ಕುಲಪತಿಗಳಾಗಿರುವ ಡಾ. ಹೆಚ್. ವಿನೋದ್ ಭಟ್ ಅವರು ಡಾ. ಕೆ.ಎನ್. ಉಡುಪ ಸ್ಮಾರಕ ಉಪನ್ಯಾಸವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ ಪ್ರೊ ಚಾನ್ಸ್ ಲರ್ ಡಾ. ಹೆಚ್.ಎಸ್. ಬಲ್ಲಾಳ್ ಅವರು ವಹಿಸಿಕೊಳ್ಳಲಿದ್ದಾರೆ. ಈ ಉಪನ್ಯಾಸ ಕಾರ್ಯಕ್ರಮವು ಸಾಯಂಕಾಲ 04.00 ಗಂಟೆಯಿಂದ 05.00 ಗಂಟೆಯವರೆಗೆ, ಮಣಿಪಾಲದ ಇಂಟರಾಕ್ಟ್ LH ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಸಭಾಂಗಣದಲ್ಲಿ ನಡೆಯಲಿದೆ.


ಶಿಕ್ಷಣ ಮತ್ತು ಬೋಧನೆ, ಸಮುದಾಯ, ಆರೋಗ್ಯ ಪಾಲನೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು, ಬ್ಯಾಂಕಿಂಗ್, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರಗಳು ಹಾಗೂ ಸಂಶೋಧನೆ, ಸಂವಹನ ಮತ್ತು ಪತ್ರಿಕೋದ್ಯಮ, ಸಾಹಿತ್ಯ, ಸಾಹಿತ್ಯಕ ಪ್ರಕಟನೆಗಳು ಮುಂತಾದ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿರುವ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುವ ಉದ್ದೇಶದಿಂದ ಕೊಡೆತ್ತೂರು ಉಡುಪ ಕುಟುಂಬದ ಸದಸ್ಯರು ಟ್ರಸ್ಟ್ ಒಂದನ್ನು ಸ್ಥಾಪಿಸಿರುತ್ತಾರೆ. ಇದು ಮಾತ್ರವಲ್ಲದೆ ಈ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿದ್ದು ಚಿಕಿತ್ಸಾ ವೆಚ್ಚವನ್ನು ಭರಿಸಲಾಗದಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸಾ ವೆಚ್ಚವನ್ನು ಭರಿಸುವ ಕಾರ್ಯವನ್ನೂ ಸಹ ಈ ಟ್ರಸ್ಟ್ ಮಾಡಿಕೊಂಡು ಬರುತ್ತಿದೆ. ಇದೆಲ್ಲದರ ಜೊತೆಗೆ ಈ ಟ್ರಸ್ಟ್ ಪ್ರತೀ ವರ್ಷ ಮೂರು ಸ್ಮಾರಕ ದತ್ತಿನಿಧಿ ಉಪನ್ಯಾಸವನ್ನು ನಡೆಸಿಕೊಂಡು ಬರುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳ ಸದುಪಯೋಗವನ್ನು ಆಸಕ್ತರು ಪಡೆದುಕೊಳ್ಳಬೇಕು ಎಂಬ ಉದ್ದೇಶವನ್ನು ಟ್ರಸ್ಟ್ ಸದಸ್ಯರು ಪತ್ರಿಕಾ ಪ್ರಕಟನೆಯ ಮೂಲಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.