ಕೊಲ್ಲೂರಿನಲ್ಲಿ ದಾಖಲೆ ಸಂಖ್ಯೆಯ ಭಕ್ತರು
Team Udayavani, Sep 30, 2019, 5:10 AM IST
ಕೊಲ್ಲೂರು: ನವರಾತ್ರಿ ಆರಂಭದ ದಿನವಾದ ರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ 10 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು ಹಬ್ಬದ ಸಡಗರದಲ್ಲಿ ಭಾಗಿಗಳಾದರು.
ಬೆಳಗ್ಗೆ ಕಂಬದ ಗಣಪತಿ ಪೂಜೆ ಹಾಗೂ ಕಲಶ ಸ್ಥಾಪನೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಇದೇ ವೇಳೆ ಚಾಲನೆ ನೀಡಲಾಯಿತು.
ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ ಕುಮಾರ್ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಅವರು ನಡೆದ ವಿಶೇಷ ಪೂಜೆಯ ಸಂಕಲ್ಪದಲ್ಲಿ ಪಾಲ್ಗೊಂಡರು.
ಸೆ. 29ರಿಂದ ಅ. 8ರ ತನಕ ಶರನ್ನವರಾತ್ರಿ ಉತ್ಸವ ನಡೆಯಲಿದೆ. ದೇಗುಲದ ಅಧೀಕ್ಷಕ ರಾಮಕೃಷ್ಣ ಅಡಿಗ, ಸಮಿತಿ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ರಾಜೇಶ ಕಾರಂತ, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ಜಯಂತಿ, ಅಭಿಲಾಷ್, ವಂಡಬಳ್ಳಿ ಜಯರಾಮ ಶೆಟ್ಟಿ, ಅರ್ಚಕ ಕೆ.ವಿ. ಶ್ರೀಧರ ಅಡಿಗ, ಕೆ.ಎನ್. ನರಸಿಂಹ ಅಡಿಗ, ಕೆ.ಎನ್. ಗೋವಿಂದ ಅಡಿಗ ಉಪಸ್ಥಿತರಿದ್ದರು.ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ತಂತ್ರಿಗಳು, ಅರ್ಚಕರು, ಉಪಾಧಿವಂತ ಕ್ಷೇತ್ರ ಪುರೋಹಿತರು, ಸಿಬಂದಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
ಸ್ವರ್ಣಮುಖೀ ಸಭಾಭವನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ ಕುಮಾರ್ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.
ವಿದ್ಯಾರಂಭಕ್ಕೆ ಸಾವಿರಾರು ಭಕ್ತರ ನಿರೀಕ್ಷೆ
ಆ. 8ರಂದು ಬೆಳಗ್ಗಿನ ಜಾವದಿಂದ ಸರಸ್ವತಿ ಮಂಟಪದಲ್ಲಿ ನಡೆ ಯುವ ವಿದ್ಯಾರಂಭಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಮಕ್ಕಳ ನಾಲಗೆಯ ಮೇಲೆ ಚಿನ್ನದುಂಗುರದಿಂದ ಓಂಕಾರ ಬರೆಸುವುದಲ್ಲದೇ ಅಕ್ಕಿಯಲ್ಲಿ ಅಕ್ಷರಾಭ್ಯಾಸ ನಡೆಸುವ ಪದ್ಧತಿ ಹಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೊಲ್ಲೂರಿನಲ್ಲಿ ವಿದ್ಯಾರಂಭ ಮಾಡಿದ ಮಕ್ಕಳು ಮೇಧಾವಿಗಳಾಗುವರು ಎಂಬುದು ನಂಬಿಕೆ. ಪ್ರತಿ ವರ್ಷ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಸಾಕ್ಷಿ. ಆ ದಿನ ಮಕ್ಕಳಿಗೆ ನವಾನ್ನ ಪ್ರಾಶನ ಕೂಡ ಮಾಡಲಾಗುತ್ತದೆ.
ಅ. 7ರ ಮಹಾನವಮಿಯಂದು ಬೆಳಗ್ಗೆ 11.30ಕ್ಕೆ ಚಂಡಿಕಾ ಯಾಗ ಹಾಗೂ ಮಧ್ಯಾಹ್ನ ರಥೋತ್ಸವದಲ್ಲಿ ಎಸೆಯುವ ನಾಣ್ಯಗಳನ್ನು ಸಂಗ್ರಹಿಸಲು ಸಾವಿರಾರು ಭಕ್ತರು ಮುಗಿ ಬೀಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.