![Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ](https://www.udayavani.com/wp-content/uploads/2025/02/kadukona-415x278.jpg)
![Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ](https://www.udayavani.com/wp-content/uploads/2025/02/kadukona-415x278.jpg)
Team Udayavani, Feb 12, 2019, 1:00 AM IST
ಕೋಟ: ಕೋಟದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಉಡುಪಿ ಜಿ.ಪಂ. ಕೋಟ ಕ್ಷೇತ್ರದ ಸದಸ್ಯ, ಬಿಜೆಪಿಯ ರಾಘವೇಂದ್ರ ಕಾಂಚನ್ ತತ್‌ಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೆ.11ರಂದು ಕೋಟ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ವ್ಯಾಪಕ ವಾಗ್ಧಾಳಿ ನಡೆಸಿದರು.
ಬಿಜೆಪಿ ಕೊಲೆಗಡುಕರ ಪಕ್ಷ ಸಾಬೀತು ಸೊರಕೆ
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷ ಕೊಲೆಗಡುಕರ ಪಕ್ಷ ಎಂದು ಅಪಪ್ರಚಾರವನ್ನು ಮಾಡಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗರು ಗೆಲುವು ಸಾಧಿಸಿದ್ದಾರೆ. ಆದರೆ ಕೊಲೆಗಾರರಿಗೆ ಸಹಕಾರ ನೀಡುವಲ್ಲಿ ಹಾಗೂ ಪ್ರಕರಣವನ್ನು ಮುಚ್ಚಿಹಾಕುವಲ್ಲಿ ಬಿಜೆಪಿ ಎತ್ತಿದ ಕೈ ಎನ್ನುವುದು ಈ ಪ್ರಕರಣದಿಂದ ಸಾಬೀತಾಗಿದೆ.
ಇಲ್ಲಿ ಆರೋಪಿ ತಮ್ಮದೇ ಪಕ್ಷದ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌ನನ್ನು ಬಿಜೆಪಿಗರು ಕಾಪಾಡಲು ಯತ್ನಿಸುತ್ತಿದ್ದಾರೆ ಹಾಗೂ ಕರಾವಳಿಯಲ್ಲಿ ನಡೆದ ಬಹುತೇಕ ಕೊಲೆಗಳಲ್ಲಿ ಬಿಜೆಪಿ ಮುಖಂಡರ ಪಾತ್ರವಿದೆ ಎಂದರು. ಮೃತ ಯುವಕರ ಕುಟುಂಬಕ್ಕೆ ಸರಕಾರದಿಂದ ನೆರವು ನೀಡಲು ಒತ್ತಾಯಿಸುವುದಾಗಿ ತಿಳಿಸಿದರು.
ಕಾಂಚನ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆ : ರಾಕೇಶ್ ಮಲ್ಲಿ
ಪ್ರಕರಣದಲ್ಲಿ ರಾಘವೇಂದ್ರ ಕಾಂಚನ್ ಪಾತ್ರವಿದೆ ಎಂದು ಪೊಲೀಸರಿಗೆ ಪ್ರಥಮವಾಗಿ ತಿಳಿಸಿದ್ದೇ ನಾನು. ಪೊಲೀಸರು ಈ ಮೊದಲೇ ಅವನ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈಗಲೂ ಕಾಲ ಮಿಂಚಿಲ್ಲ, ಈ ಕೇಸ್‌ನಲ್ಲಿ ಅವನು ಹೊರಗೆ ಬಾರದ ರೀತಿ ಮಾಡಬೇಕು ಎಂದು ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ತಿಳಿಸಿದರು. ಬಿಜೆಪಿಯ ಎಲ್ಲ ಮುಖಂಡರು ಮೌನವಾಗಿರುವಾಗ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಘಟನೆಯನ್ನು ಖಂಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಕರಾವಳಿಯಲ್ಲಿ ಶಾಂತಿ, ನೆಮ್ಮದಿ ಹಾಳಾಗುವುದಕ್ಕೆ ಸಂಸದೆ ಶೋಭಾ ಪ್ರಮುಖ ಕಾರಣ ಎಂದು ಪಕ್ಷದ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಗೋಪಾಲ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಚನ್ ರಾಜೀನಾಮೆಗೆ ಆಗ್ರಹ
ಪ್ರಕರಣದ ಆರೋಪಿಯಾಗಿರುವ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ತತ್‌ಕ್ಷಣ ರಾಜೀನಾಮೆ ನೀಡಬೇಕು. ಬಿಜೆಪಿಯವರಿಗೆ ನೈತಿಕತೆ ಇದ್ದರೆ ಆತನಿಂದ ರಾಜೀನಾಮೆ ಕೊಡಿಸಿ ಪಕ್ಷದಿಂದ ಉಚ್ಚಾಟಿಸಬೇಕು. ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಎಂದು ಪೋಸು ಕೊಡುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕಾಂಚನ್‌ನನ್ನು ಇದುವರೆಗೆ ಬೆಂಬಲಿಸಿ, ಬೆಳೆಸಿದ್ದಕ್ಕೆ ಸಾರ್ವಜನಿಕರಲ್ಲಿ ಕ್ಷಮೆ ಕೇಳಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಈ ಕುರಿತು ಪ್ರತಿಭಟನೆ ನಡೆಸುವುದಾಗಿ ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಹಾಗೂ ಮುಖಂಡರಾದ ಗೋಪಾಲ ಭಂಡಾರಿ, ಅಮೃತ್ ಶೆಣೈ, ವಿಕಾಸ್ ಹೆಗ್ಡೆ, ತಿಮ್ಮ ಪೂಜಾರಿ ಕೋಟ, ಮಲ್ಯಾಡಿ ಶಿವರಾಮ್ ಶೆಟ್ಟಿ ತಿಳಿಸಿದರು.
ಸಭೆಯಲ್ಲಿ ರಾಜಾರಾಮ್ ಸಾಸ್ತಾನ, ಇಸ್ಮಾಯಿಲ್ ಅತ್ರಾಡಿ ಹಾಗೂ ಕೊಲೆಯಾದ ಯುವಕರ ಕುಟುಂಬದವರು ಉಪಸ್ಥಿತರಿದ್ದರು.
ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಪ್ರಾಸ್ತಾವಿಕ ಮಾತನಾಡಿದರು. ಶ್ರೀನಿವಾಸ್ ಅಮೀನ್, ಗಣೇಶ್ ನೆಲ್ಲಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಆರೋಪಿಗಳಿಗೆ ಕಠಿನ ಶಿಕ್ಷೆಯಾಗುವ ರೀತಿ ಮುಂದಿನ ಕ್ರಮಗಳನ್ನು ಕೈಗೊಳ್ಳುವಂತೆ ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿ ಅವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಹಾಗೂ ಮೌನಾಚರಣೆಯ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಪೊಲೀಸ್ ಇಲಾಖೆಗೆ ಅಭಿನಂದನೆಯ ಮಹಾಪೂರ
ಎಷ್ಟೇ ರಾಜಕೀಯ ಒತ್ತಡವಿದ್ದರೂ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ ಎಸ್.ಪಿ. ಹಾಗೂ ಅವರ ತಂಡಕ್ಕೆ ವ್ಯಾಪಕ ಅಭಿನಂದನೆಗಳು ಸಭೆಯಲ್ಲಿ ವ್ಯಕ್ತವಾಯಿತು.
Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
You seem to have an Ad Blocker on.
To continue reading, please turn it off or whitelist Udayavani.