Kota Srinivas Poojary: ವಕ್ಫ್ ಬೋರ್ಡ್ ರೈತರ ಆಸ್ತಿ ಕಬಳಿಸುವುದು ನಿಲ್ಲಿಸಲಿ
Team Udayavani, Oct 29, 2024, 9:00 PM IST
ಉಡುಪಿ: ಈ ಹಿಂದೆ ಕಾಂಗ್ರೆಸ್ ಸರಕಾರ ಮಾಡಿದ್ದ ಒಂದು ತಪ್ಪಿನಿಂದ ಪ್ರಸ್ತುತ ವಿಜಯಪುರ ಜಿಲ್ಲೆಯ ರೈತರು 11,500 ಎಕರೆ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ರೈತರ ಹೆಸರಿನಲ್ಲಿದ್ದ ಪಹಣಿಯನ್ನು ಏಕಾಏಕಿ ವಕ್ಫ್ ಮಂಡಳಿ ಹೆಸರಿಗೆ ಮಾಡಲಾಗಿದೆ. ಇದು ವಿಜಯಪುರ ಜಿಲ್ಲೆ ಮಾತ್ರಲ್ಲದೇ ಉಡುಪಿ, ದ.ಕ. ಸಹಿತ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಗಿರುವ ಸಾಧ್ಯತೆಯಿದೆ. ಸರಕಾರ ಈ ಕೂಡಲೇ ರೈತರ ಹೆಸರಿಗೆ ಪಹಣಿ ವಾಪಸ್ ಮಾಡಬೇಕು, ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿಜಯಪುರ ಜಿಲ್ಲೆಯ ರೈತಾಪಿ ವರ್ಗಕ್ಕೆ ಸಂಕಷ್ಟ ಎದುರಾಗಿದೆ. 11,500 ಎಕರೆ ರೈತರ ಭೂಮಿ ವಕ್ಫ್ ಬೋರ್ಡ್ ಸ್ವಾಧೀನಪಡಿಸಿಕೊಂಡಿದೆ. 1988ರಿಂದ 2018ರ ವರೆಗೂ ಪಹಣಿಯಲ್ಲಿ ರೈತರ ಹೆಸರು ಇತ್ತು. ಪಹಣಿ ವಕ್ಫ್ ಬೋರ್ಡ್ ಪಾಲಾಗಿದೆ. ಈ ಹಿಂದೆ ಕಾಂಗ್ರೆಸ್ ಸರಕಾರ ರೂಪಿಸಿದ್ದ ಕಾನೂನಿನಿಂದ ಇದೆಲ್ಲ ಸಾಧ್ಯವಾಗಿದೆ. ಒಮ್ಮೆ ವಕ್ಫ್ ಬೋರ್ಡ್ ಇದು ನಮ್ಮ ಆಸ್ತಿ ಎಂದು ಗೊತ್ತುಪಡಿಸಿದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮೂಲಕ ಆ ಆಸ್ತಿಯನ್ನು ವಕ್ಫ್ ಬೋರ್ಡ್‌ಗೆ ನೀಡುವಂತೆ ಮಾಡಿದೆ. ಒಂದು ಸಮುದಾಯವನ್ನು ಓಲೈಸಲು ರಾಜ್ಯ ಸರಕಾರ ಹೀಗೆ ಮಾಡುತ್ತಿದೆ. ಜನರು ದಂಗೆ ಏಳುವುದೊಂದು ಬಾಕಿಯಿದೆ.
ಕಂದಾಯ ಸಚಿವರು ಮಾತನಾಡಿ 124 ರೈತರಿಗೆ ಕಣ್ತಪ್ಪಿನಿಂದ ನೋಟಿಸ್ ಹೋಗಿದೆ ಎಂದಿದ್ದಾರೆ. ಇದು ಗಂಭೀರ ತಪ್ಪು ಅಲ್ಲ ಎಂದಾದರೆ ಜನರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.
ಸರ್ವ ಜನಾಂಗದವರು ನಮ್ಮ ಸರಕಾರಕ್ಕೆ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಬಡವರು, ರೈತರ ಭೂಮಿಯನ್ನು ವಕ್ಫ್ ಆಸ್ತಿ ಎನ್ನುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ. ಹೀಗಾಗಿಯೇ ವಕ್ಫ್ ವಿಚಾರದಲ್ಲಿ ಪಾರದರ್ಶಕತೆಗೆ ಕೇಂದ್ರ ಸರಕಾರ ಕಾನೂನು ರೂಪಿಸಿದೆ. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಕಾಯ್ದೆ ಜಾರಿಯಾದ ಅನಂತರದಲ್ಲಿ ಪಾರದರ್ಶಕತೆ ಬರಲಿದೆ. ವಕ್ಫ್ ಬೋರ್ಡ್ ಅಕ್ರಮವಾಗಿ ಭೂಮಿ ವಶಪಡಿಸಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಹೋರಾಟ
ರೈತರು ಒಂದು ತುಂಡು ಭೂಮಿ ಕಳೆದುಕೊಳ್ಳಬಾರದು. ಬಿಜೆಪಿ ಇದನ್ನು ಹೋರಾಟವಾಗಿ ಕೈಗೆತ್ತಿಕೊಳ್ಳುತ್ತದೆ. ತಪ್ಪು ಮಾಡಿದವರ ಮೇಲೆ ಸರಕಾರ ಏನು ಕ್ರಮ ತೆಗೆದುಕೊಂಡಿದೆ? ತತ್‌ಕ್ಷಣವೇ ರೈತರಿಗೆ ಭೂಮಿ ಹಿಂದಿರುಗಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾ.ಪಂ.ಗಳಿಗೆ ಅಧಿಕಾರ ನೀಡಿ
9/11 ಹಂಚಿಕೆಯ ಅಧಿಕಾರ ಈ ಹಿಂದೆ ಗ್ರಾಮ ಪಂಚಾಯತಿಗಳಿಗೆ ಇದ್ದವು. ಅದನ್ನು ಈಗ ಪ್ರಾಧಿಕಾರಕ್ಕೆ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸರಕಾರ ತತ್‌ಕ್ಷಣವೇ ಈ ಅಧಿಕಾರವನ್ನು ಪುನಃ ಗ್ರಾಮ ಪಂಚಾಯತಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.
ರೇಷನ್ ಕಾರ್ಡ್ ಪರಿಶೀಲನೆ ಕೈಬಿಡಿ
ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡುವುದು ಅಥವಾ ಇನ್ನಾéವುದೋ ಉದ್ದೇಶದಿಂದ ಬಿಪಿಎಲ್ ಕಾರ್ಡ್ ಪರಿಶೀಲನೆಗೆ ಮುಂದಾಗಿರುವುದನ್ನು ಸರಕಾರ ತತ್‌ಕ್ಷಣ ನಿಲ್ಲಿಸಬೇಕು. ಬಿಪಿಎಲ್ ಕಾರ್ಡ್ ರದ್ದತಿಯಿಂದ ಕೇಂದ್ರ ಸರಕಾರದ ಅಕ್ಕಿ, ಆಯುಷ್ಮಾನ್ ಯೋಜನೆಯ ಫಲ ಅನೇಕರಿಗೆ ಸಿಗುವುದಿಲ್ಲ. ಸರಕಾರ ಇದರಿಂದ ಹಿಂದೆ ಸರಿಯದಿದ್ದರೆ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ, ವಿಧಾನಸೌಧ ಮುತ್ತಿಗೆ ಹಾಕಲಿದೆ ಎಂದು ಎಚ್ಚರಿಕೆ ನೀಡಿದರು.
ಬಿ.ಕೆ. ಹರಿಪ್ರಸಾದ್ ಕ್ಷಮೆ ಯಾಚಿಸಲಿ
ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಬಗ್ಗೆ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ನೀಡಿರುವ ಹೇಳಿಕೆ ಖಂಡನೀಯ. ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ. ಶ್ರೀಪಾದರು ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದವರು, ಜನಾಂದೋಲನ ಮಾಡಿದವರು. ಶ್ರೀಪಾದರ ಬಗ್ಗೆ ಇಡೀ ರಾಷ್ಟ್ರದಲ್ಲಿಯೇ ವಿಶೇಷ ಗೌರವ ಇದೆ. ತತ್‌ಕ್ಷಣವೇ ಬಿ.ಕೆ. ಹರಿಪ್ರಸಾದ್ ಅವರು ಕ್ಷಮೆ ಕೇಳಬೇಕು ಎಂದವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.