ಕೋಟೆ: ಪಶು ಆಸ್ಪತ್ರೆ ಬಳಿಯಲ್ಲಿ ತ್ಯಾಜ್ಯದ ರಾಶಿ
Team Udayavani, Jan 18, 2021, 4:20 AM IST
ಕಟಪಾಡಿ: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆ ಸಂಪರ್ಕದ ಪ್ರಮುಖ ರಸ್ತೆಯ ಪಶು ಆಸ್ಪತ್ರೆಯ ಬಳಿಯಲ್ಲಿ ತ್ಯಾಜ್ಯದ ರಾಶಿಯು ಕಂಡು ಬರುತ್ತಿದ್ದು ಪ್ರಾಣಿಯ ಕಳೇಬರವು ದುರ್ವಾಸನೆಯನ್ನು ಬೀರುತ್ತಿದ್ದು
ಪರಿಸರವು ಅಸಹ್ಯ ವಾತಾವರಣದಿಂದ ಕೂಡಿದೆ. ಈ ಭಾಗದಲ್ಲಿ ಸಾರ್ವಜನಿಕರು ತಮ್ಮ ಮನೆಯ ತ್ಯಾಜ್ಯದ ಜತೆಗೆ ಕೊಳೆತು ನಾರುವ ಆಹಾರದ ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ಕೂಡಾ ಎಸೆಯುತ್ತಿರುವುದರಿಂದ ಪರಿಸರ ದುರ್ನಾತ ಬೀರುತ್ತಿದೆ. ಕುಡಿದು ಬಿಸಾಡಿದ ಮದ್ಯದ ಬಾಟಲಿಗಳೂ ರಸ್ತೆಯ ಅಂಚಿನಲ್ಲಿಯೇ ಕಂಡು ಬರುತ್ತಿದ್ದು ಪಾದಚಾರಿಗಳಿಗೆ ಸಾಕಷ್ಟು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.
ಸ್ಥಳೀಯವಾಗಿ ಸಾಕಷ್ಟು ಮನೆಗಳನ್ನು ಹೊಂದಿರುವ ಕಾಲನಿ ಸಮೀಪದಲ್ಲಿದ್ದು ಯಾವುದೇ ಕ್ಷಣದಲ್ಲಿಯೂ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯು ಹೆಚ್ಚಿದ್ದು ಕತ್ತಲಾಗುತ್ತಿದ್ದಂತೆ ಗಾಳಿಯಿಂದಾಗಿ ಹೆಚ್ಚು ದುರ್ನಾತ ಜತೆಗೆ ವಿಪರೀತ ಸೊಳ್ಳ ಕಾಟವೂ ಇದ್ದು ಮನೆಮಂದಿಯು ಸಮಸ್ಯೆಯನ್ನು ಎದುರಿಸುವಂತಾಗಿದೆ.
ಈ ಭಾಗದಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಯು ಇಲ್ಲದೇ ಇದ್ದು ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯುತ್ ಟ್ರಾನ್ಸ್ ಫಾರ¾ರ್ ಕೂಡ ಇಲ್ಲಿಯೇ ಇರುವುದರಿಂದ ಒಂದು ಬಾರಿ ಸ್ವತ್ಛಗೊಳಿಸಿ ಇಂಟರ್ಲಾಕ್ ಅಳವಡಿಸಿ ಸುರಕ್ಷತೆಯನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಸೂಕ್ತ ರೀತಿಯಲ್ಲಿ ಮುನ್ನೆಚ್ಚರಿಕೆಯ ಜತೆಗೆ ಕಸ ಎಸೆಯುವವರ ವಿರುದ್ಧ ಕಾನೂನು ರೀತ್ಯಾ ಕ್ರಮಕ್ಕೆ ಮುಂದಾದಲ್ಲಿ ಇಲ್ಲಿನ ತ್ಯಾಜ್ಯ ಸಮಸ್ಯೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಸಾಧ್ಯ ಎಂದು ಸಾರ್ವಜನಿಕರು ತಿಳಿಸುತ್ತಿದ್ದಾರೆ.
ಈ ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ಎಚ್ಚೆತ್ತು ಈ ಭಾಗದಲ್ಲಿನ ಸ್ವತ್ಛತೆಗೆ ಆದ್ಯತೆಯನ್ನು ನೀಡುವ ಮೂಲಕ ಸ್ವತ್ಛ ಪರಿಸರ ಹಾಗೂ ಆರೋಗ್ಯಪೂರ್ಣ ವಾತಾವರಣವನ್ನು ಕಲ್ಪಿಸುವಂತೆ ಸಾರ್ವಜನಿಕರು, ಪಾದ ಚಾರಿಗಳು ಆಗ್ರಹಿಸುತ್ತಿದ್ದಾರೆ.
ಕಟಪಾಡಿ ಮತ್ತು ಕೋಟೆ ಗ್ರಾ.ಪಂ. ವ್ಯಾಪ್ತಿಯ ಸರಹದ್ದು ಇದಾಗಿದೆ. ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಜನರು ಹೆಚ್ಚಾಗಿ ಕೋಟೆ ವ್ಯಾಪ್ತಿಯ ಭಾಗದಲ್ಲಿ ತ್ಯಾಜ್ಯ ಎಸೆಯುತ್ತಿದ್ದಾರೆ. ಈ ಬಗ್ಗೆ ಕಟಪಾಡಿ ಗ್ರಾ.ಪಂ.ಗೆ ಮಾಹಿತಿಯನ್ನೂ ನೀಡಲಾಗಿದೆ. ಪ್ರಸ್ತುತ ಇರುವ ತ್ಯಾಜ್ಯದ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಲಾಗಿದ್ದು, ಕೂಡಲೇ ತೆರವುಗೊಳಿಸಲಾಗುತ್ತದೆ. ಬಳಿಕ ಸಿ.ಸಿ.ಕೆಮರಾ ಕಣ್ಗಾವಲು ಇರಿಸಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.-ಶ್ರುತಿ ಕಾಂಚನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕೋಟೆ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.