Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಸೇನಾ ವಾಹನ

Team Udayavani, Dec 26, 2024, 1:38 AM IST

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಕೋಟೇಶ್ವರ: ಜಮ್ಮು ಕಾಶ್ಮೀರದ ಪೂಂಛನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕುಂದಾಪುರ ತಾಲೂಕು ಬೀಜಾಡಿಯ ಅನೂಪ್‌ ಪೂಜಾರಿ (31) ಸಹಿತ ಭಾರತೀಯ ಸೇನೆಯ ಐವರು ಯೋಧರು ದುರ್ಮರಣಕ್ಕೀಡಾಗಿದ್ದಾರೆ.

ಡಿ. 24ರ ಸಂಜೆ 11 ಮರಾಠ ಲಘು ಪದಾತಿ ದಳದ ಸಿಬಂದಿ ನೀಲಂ ಕೇಂದ್ರ ಕಚೇರಿಯಿಂದ ಗಡಿ ನಿಯಂತ್ರಣ ರೇಖೆ ಯಲ್ಲಿರುವ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ತಿರುವಿನಲ್ಲಿ ಸೇನಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300ರಿಂದ 350 ಅಡಿ ಆಳದ ಕಂದಕಕ್ಕೆ ಉರುಳಿ ಬಿತ್ತು.

ಬಾಲ್ಯದಿಂದಲೇ ಸೇನೆಯ ತವಕ
ಬೀಜಾಡಿ ನಿವಾಸಿ ಚಂದು ಪೂಜಾರಿ¤ ಹಾಗೂ ನಾರಾಯಣ ಪೂಜಾರಿ ದಂಪತಿ ತಮ್ಮ ಏಕೈಕ ಪುತ್ರನನ್ನು ಸೇನೆಗೆ ಸೇರಿಸಿದ್ದರು. ಅವರಿಗೆ ಇನ್ನಿಬ್ಬರು ಪುತ್ರಿಯರಿದ್ದು, ಅವರಿಗೆ ಮದುವೆಯಾಗಿದೆ.

ಅನೂಪ್‌ಗೆ ಬಾಲ್ಯದಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹಂಬಲವಿತ್ತು. ಶಾಲಾ ವಿದ್ಯಾಭ್ಯಾಸವನ್ನು ಬೀಜಾಡಿ ಪಡು ಸರಕಾರಿ ಶಾಲೆಯಲ್ಲಿ ಮುಗಿಸಿ, ಭಾರತೀಯ ಸೇನೆಗೆ ಸೇರಿದ್ದ ಅವರು ದೇಶದ ವಿವಿದೆಢೆಯಲ್ಲಿ ಸೇವೆ ಸಲ್ಲಿಸಿದ್ದರು. ಸೇನೆಗೆ ಸೇರಿದ ಅನಂತರ 13 ವರ್ಷಗಳ ಕಾಲ ಹವಾಲ್ದಾರರಾಗಿ ಸೇವೆ ಸಲ್ಲಿಸಿದ್ದು, ಮುಂದಿನ 2 ವರ್ಷಗಳಲ್ಲಿ ನಿವೃತ್ತಿ ಹೊಂದಿ ಊರಿಗೆ ಬಂದು ನೆಲೆಸುವ ಯೋಚನೆ ಹೊಂದಿದ್ದರು.

ಮೌನವಾದ ಬೀಜಾಡಿ ಪರಿಸರ
ಅನೂಪ್‌ ಪೂಜಾರಿ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಸಹಿತ ನೂರಾರು ಜನರು ಮೃತರ ಮನೆಗೆ ತೆರಳಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸ್ಮಾರಕ ನಿರ್ಮಾಣ
ಮೃತ ಅನೂಪ್‌ ಪೂಜಾರಿ ಸ್ಮರಣಾರ್ಥ ಬೀಜಾಡಿ ಕಡಲ ತೀರದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಬೀಜಾಡಿ ಗ್ರಾ. ಪಂ. ಅಧ್ಯಕ್ಷ ಪ್ರಕಾಶ ಜಿ.ಪೂಜಾರಿ, ಗ್ರಾ.ಪಂ. ಸದಸ್ಯರು, ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ, ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಕುಂದರ್‌ ಚಾತ್ರಬೆಟ್ಟು ಮತ್ತು ಗ್ರಾಮಸ್ಥರ ಉಪಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ನಿರ್ಣಯ ಕೈಗೊಳ್ಳಲಾಯಿತು.

ಪತ್ನಿ, ಪುಟ್ಟ ಮಗಳನ್ನು ಅಗಲಿದ ಯೋಧ
ಪೆರ್ಡೂರು ಮುಳ್ಳುಗುಡ್ಡೆಯ ಮಂಜುಶ್ರೀಯನ್ನು ಮದುವೆಯಾಗಿದ್ದ ಅನೂಪ್‌ ಅವರಿಗೆ ಒಂದೂವರೆ ವರ್ಷದ ಇಶಾನಿ ಹೆಸರಿನ ಹೆಣ್ಣು ಮಗುವಿದೆ.

ದೇಶಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದ ಎಂಬ ಸಿದ್ದಾಂತವನ್ನು ಹೊಂದಿದ್ದ ಅನೂಪ್‌ ಅವರು ಡಿಸೆಂಬರ್‌ನಲ್ಲಿ ರಜೆ ಪಡೆದು ಊರಿಗೆ ಬಂದು ಕೋಟೇಶ್ವರದ ಕೊಡಿಹಬ್ಬದಲ್ಲಿ ಪಾಲ್ಗೊಂಡು ಮಿತ್ರರೊಡನೆ ಸಮಯ ಕಳೆದಿದ್ದರು. ಸ್ನೇಹಮಯಿಯಾಗಿದ್ದ ಅವರು ಬೀಜಾಡಿ, ಕೋಟೇಶ್ವರ ಪರಿಸರದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು. ಕೊಡಿಹಬ್ಬಕ್ಕೆ ಬಂದವರು ಅದೇ ಸಂದರ್ಭದಲ್ಲಿ ಮಗಳ ಹುಟ್ಟುಹಬ್ಬವನ್ನು ಕೂಡ ಆಚರಿಸಿದ್ದರು.

ಕುಟುಂಬದ ಆಧಾರಸ್ತಂಭ
ಸೇನಾಧಿಕಾರಿಯೋರ್ವರು ಬುಧವಾರ ಬೆಳಗ್ಗೆ ಅನೂಪ್‌ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಅಪಘಾತದಲ್ಲಿ ಮೃತಪಟ್ಟಿರುವ ಕುರಿತಂತೆ ಮನೆಯವರಿಗೆ ವಿಷಯ ತಿಳಿಸಿದರು. ಮೃತರ ತಾಯಿ ಸಹಿತ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತರ ತಾಯಿ ಚಂದು ಪೂಜಾರಿ ಮಾತನಾಡಿ, ಪುತ್ರನನ್ನು ಅವಲಂಬಿಸಿ ಬದುಕಿದ್ದೆ. ಆತ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ. ಹತ್ತಾರು ಕನಸು ಕಂಡಿದ್ದ. ಕುಟುಂಬದ ಸದಸ್ಯರೊಡನೆ ಬದುಕಿನ ತನ್ನ ಮುಂದಿನ ಯೋಜನೆಗಳನ್ನು ಹಂಚಿಕೊಳ್ಳುತ್ತಿದ್ದ. ಅವನು ಇನ್ನಷ್ಟು ಕಾಲ ದೇಶಸೇವೆಗಾಗಿ ಬದುಕಬೇಕಿತ್ತು ಎಂದು ಕಣ್ಣೀರು ಸುರಿಸುತ್ತಲೇ ಹೇಳಿದರು. ಸಮೀಪದ ಸಂಬಂಧಿ  ಶಿವರಾಮ ಮಾತನಾಡಿ, ಇಡೀ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಎಲ್ಲರ ನೋವು ನಲಿವಿಗೆ ಧೈರ್ಯ ತುಂಬುತ್ತಿದ್ದ. ಸೇನೆಯ ಕರ್ತವ್ಯದಲ್ಲಿರುವಾಗಲೇ ದೇಶಕ್ಕಾಗಿ ಹುತಾತ್ಮನಾದ ಆತ ಎಂದೆಂದೂ ಅಮರ
ಎಂದು ಹೇಳಿದರು.

ಸರಕಾರದ ಗೌರವದೊಡನೆ ಇಂದು ಅಂತಿಮ ಸಂಸ್ಕಾರ
ಮೃತರ ಪಾರ್ಥಿವ ಶರೀರ ಬುಧವಾರ ತಡರಾತ್ರಿ 12 ಗಂಟೆಯ ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಡಿ. 26ರ ಬೆಳಗ್ಗೆ 9ಕ್ಕೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತಂದು ಮನೆಯಲ್ಲಿ ಸಕಲ ವಿಧಿ ಗಳನ್ನು ನೆರವೇರಿಸಿ, ಅಂತಿಮ ಸಂಸ್ಕಾರಕ್ಕೆ ಮೊದಲು ಬೀಜಾಡಿ ಪಡು ಶಾಲೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಅನಂತರ ಬೀಜಾಡಿ ಕಡಲ ಕಿನಾರೆಯ ಸರಕಾರಿ ಜಾಗದಲ್ಲಿ ಸರಕಾರದ ಗೌರವದೊಡನೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ.

ಅನಾಥವಾದ ಯೋಧನ ಬೈಕ್‌
ಹುಟ್ಟೂರಿಗೆ ಬಂದಾಗ ತಿರುಗಾಡಲು ಅನೂಪ್‌ ಕೆಲವು ಸಮಯದ ಹಿಂದೆ ಬೈಕ್‌ ಖರೀದಿಸಿ ದ್ದರು. ಅದಕ್ಕೆ ಸೇನೆಯ ಚಿಹ್ನೆ ಕೂಡ ಹಾಕಿದ್ದರು. ಇದೀಗ ಮನೆಯ ವರಾಂಡದಲ್ಲಿ ಅನಾಥವಾಗಿ ನಿಂತಿದೆ.

ರಾಜ್ಯದ ಇನ್ನಿಬ್ಬರು
ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಒಟ್ಟು ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಬೆಳಗಾವಿ ಪಂತ ನಗರದ ಬಾಳೆಕುಂದ್ರಿ ದಯಾನಂದ ತಿರಕ್ಕನವರ್‌ (44) ಮತ್ತು ಬಾಗಲಕೋಟೆಯ ಮಹಾಲಿಂಗಪುರದ ಮಹೇಶ ಮರಿಗೊಂಡ (25). ಮಹೇಶ ಅವರಿಗೆ ಮೂರು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಅವರು ಆರು ವರ್ಷಗಳ ಹಿಂದೆಯಷ್ಟೇ ಸೇನೆಗೆ ಸೇರಿದ್ದರು.

ಸದ್ಯ ದಯಾನಂದ 11ನೇ ಎಂಎಲ್‌ಐಆರ್‌ಸಿಯ ಮಿಂಡರ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸೇವಾವ ಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, 19ನೇ ವಯಸ್ಸಿನಲ್ಲಿಯೇ ಸೇನೆಗೆ ಸೇರಿದ್ದರು. ಎರಡು ತಿಂಗಳ ಹಿಂದೆಯಷ್ಟೇ ರಜೆ ಮೇಲೆ ಮನೆಗೆ ಬಂದಿದ್ದರು. 27 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿರುವ ದಯಾನಂದ ಇನ್ನೆರಡು ವರ್ಷದಲ್ಲಿ ನಿವೃತ್ತಿಯಾಗಲಿದ್ದರು.

 

ಟಾಪ್ ನ್ಯೂಸ್

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.