ಕೋಟೇಶ್ವರ: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ

ರಾಜ್ಯದೆಲ್ಲೆಡೆಯಿಂದ ಹರಿದು ಬಂತು ಜನಸಾಗರ

Team Udayavani, Dec 29, 2019, 4:56 AM IST

bg-19

ಕುಂದಾಪುರ: ಅವಿಭಜಿತ ದ.ಕ. ಕನ್ನಡ ಜಿಲ್ಲೆಯಲ್ಲಿಯೇ ಇದೇ ಮೊದಲ ಬಾರಿಗೆ ನಡೆಯುತ್ತಿರುವ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಆಶ್ರಯದಲ್ಲಿ ಕೋಟೇಶ್ವರದ ಕಾಳಾವರ ಶ್ರೀ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜನೆಗೊಂಡಿರುವ 10ನೇ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನವು ಶನಿವಾರ ವಿಧ್ಯುಕ್ತವಾಗಿ ಆರಂಭಗೊಂಡಿತು.

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್‌. ವೆಂಕಟನಾರಾಯಣ ಅವರು ಈ ಮಹಾಸಮಾವೇಶದ ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ ವರೇಣ್ಯ ಗಾಯತ್ರೀ ಯಾಗಶಾಲೆಯಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ವೇ|ಮೂ| ಪಿ. ಲೋಕೇಶ ಅಡಿಗ ಬಡಾಕೆರೆ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಬ್ರಹ್ಮಶ್ರೀ ಲಕ್ಷ್ಮೀನಾರಾಯಣ ಭಟ್‌ಸಹಕಾರದೊಂದಿಗೆ ಶ್ರೀ ಗಾಯತ್ರಿ ಯಜ್ಞ ಪ್ರಾರಂಭಗೊಂಡು, ಬಳಿಕ ಮಹಾಯಜ್ಞದ ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು.

ಸಹಸ್ರಾರು ಮಂದಿ ಭಾಗಿ
ಈ ಮಹಾಸಮ್ಮೇಳನಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಿಪ್ರ ಸಮಾಜ ಬಾಂಧವರು ಆಗಮಿಸಿದ್ದರು. ಬೆಂಗಳೂರು, ಶಿವಮೊಗ್ಗ, ಹೊಸನಗರ, ಶೃಂಗೇರಿ, ಹುಬ್ಬಳ್ಳಿ, ಉತ್ತರ ಕನ್ನಡ, ಮಂಗಳೂರು ಸಹಿತ ರಾಜ್ಯದೆಲ್ಲೆಡೆಯಿಂದ ಅಂದಾಜು 30 ಸಾವಿರಕ್ಕೂ ಮಿಕ್ಕಿ ಮಂದಿ ಭಾಗವಹಿಸಿದ್ದರು.

ವಿವಿಧ ಮಳಿಗೆಗಳು
ಮಹಾ ಸಮ್ಮೇಳನದಲ್ಲಿ ಪುಸ್ತಕ, ತಿಂಡಿ – ತಿನಿಸುಗಳು, ವಸ್ತ್ರ, ಯಂತ್ರೋಪಕರಣಗಳ ಹತ್ತಾರು ಮಳಿಗೆಗಳನ್ನು ಹಾಕಲಾಗಿದ್ದು, ಜನರು ಖರೀದಿಗೆ ಮುಗಿ ಬೀಳುತ್ತಿರುವುದು ಕಂಡು ಬಂತು.

ವಿಶೇಷ ಬಸ್‌
ಇನ್ನೂ ಸಮ್ಮೇಳನಕ್ಕೆ ತೆರಳಲು ಅನುಕೂಲ ವಾಗುವಂತೆ ಕುಂದಾಪುರದಿಂದ ಕೋಟೇಶ್ವರದ ಕಾಲೇಜುವರೆಗೆ ವಿಶೇಷ ಬಸ್‌ ವ್ಯವಸ್ಥೆಗಳನ್ನು ಕೂಡ ಕಲ್ಪಿಸಲಾಗಿತ್ತು.

ಸದಾಚಾರ ಮೈಗೂಡಿಸಿಕೊಳ್ಳಿ: ಶೃಂಗೇರಿ ಶ್ರೀ ಉದ್ಘಾಟನ ಸಮಾರಂಭಕ್ಕೂ ಮುನ್ನ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಎಲ್ಲ ವೇದಗಳನ್ನು ಅಧ್ಯಯನ ಮಾಡಿದರೂ, ಸದಾಚಾರಗಳನ್ನು ಮೈಗೂಡಿಸಿಕೊಳ್ಳದಿದ್ದರೆ ಏನೂ ಪ್ರಯೋಜನವಿಲ್ಲ. ಲೋಕದ ಕ್ಷೇಮಕ್ಕಾಗಿ ಗಾಯತ್ರಿ ಮಹಾಯಜ್ಞವನ್ನು ನೆರವೇರಿಸಲಾಗಿದೆ. ಒಳ್ಳೆಯ ಕೆಲಸ – ಕಾರ್ಯಗಳು ಯಾರಿಂದಲಾದರೂ ನಡೆಯುತ್ತಿದ್ದರೆ ಅದನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರ ಕ್ಷೇಮ ಬಯಸುವುದರಿಂದ ಸಮಾಜದ ಕ್ಷೇಮವೂ ಒಲಿಯುತ್ತದೆ ಎಂದವರು ಹೇಳಿದರು.

ಜಿಲ್ಲೆಯ ಪ್ರಥಮ ಸಮ್ಮೇಳನ
ಧ್ವಜಪುರ ಖ್ಯಾತಿಯ ಕೋಟೇಶ್ವರದಲ್ಲಿ 10ನೇ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ನಡೆಯುತ್ತಿದ್ದು, 2016ರಲ್ಲಿ ಬೆಳಗಾವಿಯಲ್ಲಿ 9ನೇ ಸಮ್ಮೇಳನ ಆಯೋಜನೆಗೊಂಡಿದ್ದರೆ, ಅದಕ್ಕೂ ಮೊದಲು 7 ಬಾರಿ ಬೆಂಗಳೂರಿನಲ್ಲಿ ಹಾಗೂ 1 ಸಲ ಹುಬ್ಬಳ್ಳಿಯಲ್ಲಿ ಈ ಮಹಾಸಮ್ಮೇಳನ ನಡೆದಿತ್ತು. ಇದು ಉಡುಪಿ ಜಿಲ್ಲೆ ಮಾತ್ರವಲ್ಲದೆ ಕರಾವಳಿಯಲ್ಲಿ ನಡೆಯುತ್ತಿರುವ ಮೊದಲ ಮಹಾ ಸಮ್ಮೇಳನ ಎನ್ನುವುದು ಇಲ್ಲಿನ ವೈಶಿಷ್ಟ್ಯ.

ಮಹಾ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು
ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನದಲ್ಲಿ ವಿವಿಧ ವಿಚಾರ ಗೋಷ್ಠಿಗಳು, ಚಿಂತನ – ಮಂಥನ ನಡೆಯಿತು. ಶನಿವಾರ ಮಧ್ಯಾಹ್ನ ಬ್ರಾಹ್ಮಣ್ಯ ಆಚರಣೆ – ರಕ್ಷಣೆ – ಸಂಘಟನೆ ವಿಚಾರವಾಗಿ ಧಾರ್ಮಿಕ ವಿಚಾರ ಗೋಷ್ಠಿ ನಡೆಯಿತು.
ಬಳಿಕ ಬ್ರಾಹ್ಮಣ ಸಮಾಜ ಸಂಘಟನೆ – ಸವಾಲುಗಳು, ಮಾಧ್ಯಮ, ಸಂಘ-ಸಂಸ್ಥೆಗಳ ಪಾತ್ರದ ಕುರಿತು ವಿಚಾರಗೋಷ್ಠಿ ನಡೆಯಿತು.
ಬಳಿಕ ಗುರುವಂದನೆ, ಸಂಜೆ ಯುವ ಜನರಿಗೆ ಸಂದೇಶ, ಬಳಿಕ ಚಿಂತನ ಮಂಥನ, ಸಂಜೆ 7 ಗಂಟೆಯಿಂದ ಆಳ್ವಾಸ್‌ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿತು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.