ಕೋಟೇಶ್ವರ: ಅಗ್ನಿ ಶಾಮಕ ತರಬೇತಿ, ಪ್ರಾತ್ಯಕ್ಷಿಕೆ ಉದ್ಘಾಟನೆ
Team Udayavani, Aug 1, 2017, 7:55 AM IST
ಕೋಟೇಶ್ವರ: ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಕುಂದಾಪುರ ಅಗ್ನಿ ಶಾಮಕ ಠಾಣೆ ಇವರ ನೇತೃತ್ವದಲ್ಲಿ ಗ್ರಾಮ ಮಟ್ಟದಲ್ಲಿ ಫೈಯರ್ ವಾರ್ಡ್‌ನ್ ಸಂಘಟನೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಅಗ್ನಿ ಪ್ರಾತ್ಯಕ್ಷಿಕೆ ಕಾರ್ಯಕ್ರಮದ ಉದ್ಘಾಟನೆ ಇಲ್ಲಿನ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಜು.30ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಗಳೂರು ವಿಭಾಗದ ಮುಖ್ಯ ಅಗ್ನಿ ಶಾಮಕ ಅಧಿಕಾರಿ ಟಿ.ಎನ್. ಶಿವಶಂಕರ ಅವರು ಮಾತನಾಡಿ ಮೂರು ಜಿಲ್ಲೆಗಳಲ್ಲಿ ಪ್ರಥಮ ಕಾರ್ಯಕ್ರಮವನ್ನು ಕೋಟೇಶ್ವರದಲ್ಲಿ ಆಯೋಜಿಸಲಾಗಿದ್ದು ಅಗ್ನಿ ಅನಾಹುತ ಸಹಿತ ಇನ್ನಿತರ ದುರಂತದ ಸಂದರ್ಭ ನಿಯೋಜಿಸಲಾದ ಪ್ರತಿ ಗ್ರಾಮದ ಫೈಯರ್ ವಾರ್ಡನ್‌ಗಳ ತಂಡ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ತುರ್ತು ಸೇವೆಯಲ್ಲಿ ಜೀವ ರಕ್ಷಣೆ, ಆತ್ಮ ರಕ್ಷಣೆ ಮುಂತಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯೋಪಾಯಗಳ ಬಗ್ಗೆ ಮೊನಿಟರ್ ಮೂಲಕ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಜಾನಕಿ ಬಿಲ್ಲವ, ಬೀಜಾಡಿ ಗ್ರಾ.ಪಂ. ಅಧ್ಯಕ್ಷೆ ಸಾಕು, ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷ ಶೇಖರ ಕಾಂಚನ್, ಹಂಗಳೂರು ಗ್ರಾ.ಪಂ. ಅಧ್ಯಕ್ಷೆ ಜಲಜಾ ಚಂದನ್, ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಜಿ. ತಿಪ್ಪೇಸ್ವಾಮಿ, ಬೀಜಾಡಿ ಮೀನುಗಾರ ಸಂಘದ ಅಧ್ಯಕ್ಷ ಗಣಪತಿ ಶ್ರೀಯಾನ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕುಂದಾಪುರ ಅಗ್ನಿ ಶಾಮಕ ದಳದಿಂದ ನಾನಾ ಅನಾಹುತ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಪೂರ್ಣ ಮಾಹಿತಿ ನೀಡಿದರು. ಕೋಟೇಶ್ವರದಲ್ಲಿ ಮಹಿಳೆಯರು ಸಮೇತ 100ಕ್ಕೂ ಮಿಕ್ಕಿ ಗ್ರಾಮಸ್ಥರು ಫೈಯರ್ ವಾರ್ಡ್‌ನ್ ತಂಡದಲ್ಲಿ ಸೇರ್ಪಡೆಗೊಂದರು.
ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ವಸಂತ ಕುಮಾರ್ ಸ್ವಾಗತಿಸಿದರು. ಗಣಪತಿ ಶ್ರೀಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಅಗ್ನಿ ಶಾಮಕ ದಳದ ಅಧಿಕಾರಿ ವೆಂಕಟರಮಣ ಮೊಗೇರ ವಂದಿಸಿದರು. ಗಣಪತಿ ಶ್ರೀಯಾನ್ ಅವರ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.