ಆಕಸ್ಮಿಕ ಬೆಂಕಿ ಅವಘಡ: 2 ಲಕ್ಷ ರೂ. ನಗದು, ಅಂಗಡಿ ಸುಟ್ಟು ಭಸ್ಮ
Team Udayavani, Jan 10, 2023, 11:50 PM IST
ಕೋಟೇಶ್ವರ : ಕೋಟೇಶ್ವರ ಪೇಟೆಯ ಎಸ್‌ಬಿಐ ಬ್ಯಾಂಕ್ ಸನಿಹದ ತಿರುವಿನ ಸಂಕೀರ್ಣದ ಮಹಾಲಕ್ಷ್ಮೀ ಕಂಗನ್ ಸ್ಟೋರ್‌ನಲ್ಲಿ ಜ.10ರಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಅಲ್ಲಿನ ಬೆಳೆಬಾಳುವ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಸ್ಟೋರ್‌ನ ಮಾಲಕ ಸುಧಾಕರ ಜೋಗಿ ಅವರು ಜ.10ರಂದು ಮಧ್ಯಾಹ್ನ ಕಾರ್ಯನಿಮಿತ್ತ ಅಂಗಡಿ ಮುಚ್ಚಿ ಕೋಟಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ಹೊತ್ತಿಕೊಂಡು ಬೆಲೆಬಾಳುವ ಬಳೆ, ಆಟಿಕೆ ಸಾಮಾನುಗಳು, ಮನೆಬಳಕೆಯ ವಸ್ತುಗಳು ಬೆಂಕಿಗೆ ಆಹುತಿಯಾಯಿತು. ಅಂಗಡಿಯ ಒಂದು ಪಾರ್ಶ್ವದಲ್ಲಿ ಹೊಗೆ ಹೊತ್ತಿಕೊಳ್ಳುತ್ತಿದ್ದಂತೆ ಆಸುಪಾಸಿನವರು ಬೆಂಕಿ ಆರಿಸಲು ಪ್ರಯತ್ನಪಟ್ಟರೂ ಅಷ್ಟರಲ್ಲೇ ಸಂಪೂರ್ಣವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದರು. ಗ್ರಾಮಸ್ಥರು ಸಹಕರಿಸಿದರು.
ನಗದು ಬೆಂಕಿಗೆ ಆಹುತಿ: ಅಂಗಡಿ ಬಾಡಿಗೆ ಸಹಿತ ವ್ಯವಹಾರಕ್ಕಾಗಿ ಇಟ್ಟಿದ್ದ 2 ಲಕ್ಷ ರೂ. ನಗದು ಹಣ ಬೆಂಕಿಗೆ ಆಹುತಿಯಾಗಿರುವುದಾಗಿ ಸುಧಾಕರ ಜೋಗಿ ಉದಯವಾಣಿಗೆ ತಿಳಿಸಿದ್ದಾರೆ. ಬೆಂಕಿ ಹತ್ತಿ ಉರಿದ ಪರಿಣಾಮ ಕಟ್ಟಡವು ಬಿರುಕು ಬಿಟ್ಟಿದೆ.
ಇದನ್ನೂ ಓದಿ: ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ… ತಪ್ಪಿದ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.