ಕೆ.ಪಿ. ಮಂಜುನಾಥ ಸಾಗರ್ ಅವರಿಗೆ ಗುಲ್ವಾಡಿ ಸ್ಮಾರಕ ಗೌರವ ಪುರಸ್ಕಾರ
Team Udayavani, Apr 14, 2017, 12:04 PM IST
ಬಸ್ರೂರು: ಗುಲ್ವಾಡಿ ಗೌರವ ಪುರಸ್ಕಾರ ಕಾರ್ಯಕ್ರಮ ಆಯೋಜಿಸುವ ಮೂಲಕ ಸಂತೋಷ್ ಕುಮಾರ್ ಗುಲ್ವಾಡಿ ಅವರ ಹೆಸರನ್ನು ಚಿರಸ್ಥಾಯಿಯಾಗಿಸಿದ ಕೀರ್ತಿ ಯಾಕೂಬ್ ಖಾದರ್ ಅವರಿಗೆ ಸಲ್ಲುತ್ತದೆ, ಗುಲ್ವಾಡಿಯ ಮಣ್ಣಿನಲ್ಲಿಯೇ ಒಂದು ವಿಶೇಷತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್.ಜಿ. ಸಿದ್ಧರಾಮಯ್ಯ ಹೇಳಿದರು.
ಅವರು ರವಿವಾರ ಸಂಜೆ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಗುಲ್ವಾಡಿಯ ತೋಟದ ಮನೆ ವಠಾರದಲ್ಲಿ ಪತ್ರಕರ್ತ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ಪಿ. ಮಂಜುನಾಥ ಸಾಗರ್ ಅವರಿಗೆ ಪತ್ರಕರ್ತ ಸಂತೋಷ್ ಕುಮಾರ್ ಗುಲ್ವಾಡಿ ಸ್ಮಾರಕ ಗೌರವ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.
ಸಮ್ಮಾನ
ಗುಲ್ವಾಡಿ ಟಾಕೀಸ್ ನಿರ್ಮಾಣದ ಕಲಾತ್ಮಕ ಚಿತ್ರ ರಿಸರ್ವೇಶನ್ ಟ್ರೈಲರ್ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ರಿಸರ್ವೇಶನ್ ಚಿತ್ರದ ನಾಯಕಿ ಮಾನಸಿ ಅವರನ್ನು ಗೌರವಿಸಲಾಯಿತು. ನೂತನ ಗುಲ್ವಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಈ ಸಂದರ್ಭ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ| ಪ್ರಕಾಶ್ ತೋಳಾರ್, ನಾಗರಾಜ ಹೆಗ್ಡೆ ಗುಲ್ವಾಡಿ, ಭುಜಂಗ ಕೊರಗ ಮರವಂತೆ, ಸಂತೋಷ್ ಬಳ್ಕೂರು ಅವರನ್ನು ಸಮ್ಮಾನಿಸಲಾಯಿತು.
ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ನ್ಯಾಯವಾದಿ ಎ.ಎಸ್.ಎನ್. ಹೆಬ್ಟಾರ್, ಉದ್ಯಮಿ ದೇವೇಂದ್ರ ಬಡಿಗೇರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ| ಕೆ.ಮುರಳೀಧರ್ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಮಹಮ್ಮದ್ ಆಲಿ ಉಪಸ್ಥಿತರಿದ್ದರು.ಪ್ರತಿಷ್ಠಾನದ ಕಾರ್ಯದರ್ಶಿ ಯಾಕೂಬ್ ಖಾದರ್ ಗುಲ್ವಾಡಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.