ಕುಚ್ಚಾರು: ಶಾಂತಿನಿಕೇತನ ಕಲಾ ಸಮ್ಮಿಲನ, ಸಮ್ಮಾನ
Team Udayavani, Dec 20, 2018, 2:25 AM IST
ಹೆಬ್ರಿ: ಶಾಂತಿನಿಕೇತನ ಯುವವೃಂದ ಕುಡಿಬೈಲು ಕುಚ್ಚಾರು ಇದರ ಕಲಾ ಸಮ್ಮಿಲನ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಡಿ.17ರಂದು ಕುಚ್ಚಾರು ಹೆರ್ಗ ವಿಟ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಜಿಲ್ಲಾ ಪಂ.ಸದಸ್ಯೆ ಜ್ಯೋತಿ ಹರೀಶ್ ಉದ್ಘಾಟಿಸಿ ಮಾತನಾಡಿ, ಶಾಂತಿ ನಿಕೇತನ ಯುವವೃಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. ಉದಯ್ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಯುವ ಜನತೆಯೊಂದಿಗ ಸೇರಿಕೊಂಡು ಗ್ರಾಮೀಣ ಭಾಗವಾದ ಕುಚ್ಚಾರಿನಲ್ಲಿ ಸದ್ದಿಲ್ಲದೆ ಸೇವಾ ಚಟುವಟಿಕೆಗಳನ್ನು ಮಾಡುತ್ತಿದ್ದು ನಿಮ್ಮೊಂದಿಗೆ ಸದಾ ನಮ್ಮ ಟ್ರಸ್ಟ್ ಇದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಕುಚ್ಚಾರು ಗ್ರಾ.ಪಂ. ಅಧ್ಯಕ್ಷ ರಾಮಣ್ಣ ಪೂಜಾರಿ ವಹಿಸಿದ್ದರು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕ ಡಾ| ಗಣಪತಿ ಎಚ್.ಎ, ಉದ್ಯಾವರ ಬೋಳಾರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಪಿ, ತೆಕ್ಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಕೇಶವ್, ಕುಚ್ಚಾರು ಹೆರ್ಗ ವಿಟ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಎಸ್.ಸುಬ್ರಹ್ಮಣ್ಯ ಭಟ್, ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ, ಕುಚ್ಚಾರು -11 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಶಶಿಧರ ಶೆಟ್ಟಿ, ನಿವೃತ್ತ ಸೈನಿಕ ಟಿ.ಎನ್.ಕೃಷ್ಣಮೂರ್ತಿ, ಶಂಕರ್ ಶೆಟ್ಟಿ ,ಪ್ರಕಾಶ್ ಬಾಯರ್ ಹಾಗೂ ಕುಚ್ಚಾರು ಕುಡಿಬೈಲು ಶಾಂತಿನಿಕೇತನ ಯುವವೃಂದದ ಗೌರವಾಧ್ಯಕ್ಷ ಕಲಾವತಿ ಆರ್. ಮೊದಲಾದವರನ್ನು ಸಮ್ಮಾನಿಸಲಾಯಿತು. ಶಾಂತಿನಿಕೇತನ ವಿದ್ಯಾಸಾಧಕ ಪ್ರಶಸ್ತಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸಮ್ಮಾನ, ವಿವಿಧ ಶಾಲೆಗಳಲ್ಲಿ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಹಾಗೂ ಸದಸ್ಯ ಅರುಣ್ ಕುಮಾರ್ ರಚಿಸಿರುವ ಇಂಡಿಯನ್ ಫೈನಾನ್ಸಿಯಲ್ ಸಿಸ್ಟಮ್ ಪುಸ್ತಕ ಬಿಡುಗಡೆಗೊಂಡಿತು. ತಾ. ಪಂ.ಸದಸ್ಯ ಅಮೃತ್ ಕುಮಾರ್ ಶೆಟ್ಟಿ ,ಉದ್ಯಮಿ ದಿನೇಶ್ ಪೈ,ಯುವ ವೃಂದದ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ರವೀಶ್ ಶೆಟ್ಟಿ , ಸುಧೀರ್ ನಾಯಕ್,ಸಂದೀಪ್ ಮೊದಲಾದವರು ಉಪಸಿತ್ಥರಿದ್ದರು. ಕಾರ್ಯದರ್ಶಿ ರಾಜಶ್ರೀ ವರದಿ ವಾಚಿಸಿದರು. ಪ್ರ.ಕಾರ್ಯದರ್ಶಿ ರಾಜೇಶ್ ಬಹುಮಾನಿತರ ಪಟ್ಟಿ ವಾಚಿಸಿದರು. ಯುವವೃಂದದ ಅಧ್ಯಕ್ಷ ನಾಗರಾಜ್ ಸ್ವಾಗತಿಸಿ, ನಿತ್ಯಾನಂದ ಶೆಟ್ಟಿ ನಿರೂಪಿಸಿ, ರಶ್ಮಿ ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.