20 ವರ್ಷಗಳಿಂದ ಅಭಿವೃದ್ಧಿ ಕಾಣದ ಕುಕ್ಕುದಕಟ್ಟೆ-ಕಾನಂಗಿ ರಸ್ತೆ
Team Udayavani, Oct 6, 2018, 6:00 AM IST
ಅಜೆಕಾರು: ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆಯಿಂದ ಕಾನಂಗಿಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆಯ ಡಾಮರೆಲ್ಲಾ ಕಿತ್ತು ಹೋಗಿ ಬೃಹತ್ ಹೊಂಡ ಗುಂಡಿಗಳು ನಿರ್ಮಾಣವಾಗಿವೆ.ಜತೆಗೆ ಜಲ್ಲಿಕಲ್ಲುಗಳ ರಾಶಿಯಿಂದಾಗಿ ವಾಹನ ಚಾಲನೆಯೇ ಸವಾಲಾಗಿದೆ.
20 ವರ್ಷಗಳಿಂದ ಅಭಿವೃದ್ಧಿಯಿಲ್ಲ
ಸುಮಾರು 20 ವರ್ಷಗಳ ಹಿಂದೆ ಈ ರಸ್ತೆಯು ಡಾಮರೀಕರಣಗೊಂಡಿದ್ದು ನಂತರ ಡಾಮರು ಭಾಗ್ಯವನ್ನು ಕಂಡಿಲ್ಲ. ಕಳೆದ 5-6 ವರ್ಷಗಳಿಂದ ತೇಪೆ ಕಾರ್ಯವೂ ನಡೆದಿಲ್ಲ. ಪೆಲತ್ತಿಜೆ, ಕಾನಂಗಿ, ಪಾಲಿಜೆ, ಎಲ್ಲಿಬೆಟ್ಟು, ಬೆಂಗಾಲ್ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ರಸ್ತೆಯುದ್ದಕ್ಕೂ ಹೊಂಡಗಳು ನಿರ್ಮಾಣವಾಗಿವೆ.
ಸಂಚಾರ ಅಸಾಧ್ಯ
ಪಾಲಿಜೆ ಭಾಗದಲ್ಲಿ ಪರಿಶಿಷ್ಟ ಜಾತಿಯ ಕಾಲನಿ ಇದ್ದು ಈ ಕಾಲನಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಸುಮಾರು 4 ಕಿ.ಮೀ.ನಷ್ಟು ಉದ್ದವಿರುವ ಈ ರಸ್ತೆಯಲ್ಲಿ ಡಾಮಾರು ಎಲ್ಲಿದೆ ಎಂದು ಹುಡುಕಿ ನೋಡಬೇಕಾದ ಪರಿಸ್ಥಿತಿ ಇದೆ. ರಸ್ತೆಯಲ್ಲಿ ನಿರ್ಮಾಣವಾಗಿರುವ ಬೃಹತ್ ಹೊಂಡಗಳಲ್ಲಿ ಮಳೆಯ ನೀರು ಶೇಖರಣೆಗೊಂಡು ನಡೆದಾಡಲೂ ಕಷ್ಟವಾಗಿದೆ ಎನ್ನುವುದು ಸ್ಥಳೀಯರ ಅಳಲು.
300 ಕುಟುಂಬಗಳ ಪರದಾಟ
ಕಾನಂಗಿ ಭಾಗದ ಜನತೆ ತಮ್ಮ ನಿತ್ಯ ವ್ಯವಹಾರಕ್ಕಾಗಿ ಕಾರ್ಕಳ, ಹಿರ್ಗಾನ ಪೇಟೆಗೆ ತೆರಳಬೇಕಾಗಿದ್ದು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಸುಮಾರು 300 ಕುಟುಂಬಗಳು ವಾಸಿಸುತ್ತಿದ್ದು ಪ್ರತಿನಿತ್ಯ ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಸಂಚಾರ ನಡೆಸುತ್ತಿದ್ದು ಮಳೆಗಾಲದಲ್ಲಿ ಪ್ರತಿ ನಿತ್ಯ ಕೆಸರಿನ ಅಭಿಷೇಕವಾಗುತ್ತಿದೆ. ಸಂಚಾರ ಅಸಾಧ್ಯವಾದ್ದರಿಂದ ಪಂಚಾಯತ್ ಪ್ರತಿವರ್ಷ ಹೊಂಡಗಳಿಗೆ ಮಣ್ಣು ಹಾಕುತ್ತಿದೆ. ಆದರೆ ಮಳೆಗೆ ಅದು ಫಲಕಾರಿಯಾಗದೆ ಮತ್ತೆ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.
ರಸ್ತೆ ಸಮಸ್ಯೆ ಹಿನ್ನೆಲೆಯಲ್ಲಿ ಆಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲು ಸ್ಥಳೀಯರು ಸಿದ್ಧತೆ ನಡೆಸುತ್ತಿದ್ದಾರೆ.
ಕೇಂದ್ರೀಯ ರಸ್ತೆ ನಿಧಿಯಿಂದ 2 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕಳೆದ ಒಂದು ವರ್ಷದಿಂದ ಭರವಸೆ ನೀಡಲಾಗುತ್ತಿದೆಯಾದರೂ ಈವರೆಗೆ ಟೆಂಡರ್ ಪ್ರಕ್ರಿಯೆ ನಡೆದಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಸ್ಪಂದನೆ ದೊರೆತಿಲ್ಲ
ಅತೀ ಅಗತ್ಯವಾಗಿರುವ ಕುಕ್ಕುದಕಟ್ಟೆ ಕಾನಂಗಿ ರಸ್ತೆ ಅಭಿವೃದ್ಧಿಪಡಿಸುವಂತೆ ದಶಕಗಳಿಂದ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಾ ಬಂದಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ರಸ್ತೆಗೆ ಹೆಚ್ಚಿನ ಅನುದಾನ ಬೇಕಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.
– ಸಂತೋಷ್ ಕುಮಾರ್ ಶೆಟ್ಟಿ, ಅಧ್ಯಕ್ಷರು, ಗ್ರಾ.ಪಂ. ಹಿರ್ಗಾನ
ಪ್ರಸ್ತಾವನೆ ಸಲ್ಲಿಕೆ
ಹಿರ್ಗಾನ ಗ್ರಾಮ ಪಂಚಾಯತ್‌ನ ಮನವಿಯಂತೆ ಕುಕ್ಕುದಕಟ್ಟೆ ಕಾನಂಗಿ ರಸ್ತೆ ದುರಸ್ತಿಗಾಗಿ ಪ್ರಾಕೃತಿಕ ವಿಕೋಪದಡಿ ಅನುದಾನ ಮಂಜೂರು ಮಾಡುವಂತೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ಶ್ರೀಧರ ನಾಯಕ್,
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಕಾರ್ಕಳ
– ಜಗದೀಶ್ ರಾವ್ ಅಂಡಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.