ಎತ್ತರ ಜಿಗಿತದಲ್ಲಿ ಸಾಧನೆ ಮಾಡಿದ ಕುಕ್ಕುಜೆಯ ಅಭಿನಯಾ ಶೆಟ್ಟಿ
Team Udayavani, Jun 11, 2018, 6:05 AM IST
ಅಜೆಕಾರು: ಬಡ ರೈತ ಕುಟುಂಬದಲ್ಲಿ ಬೆಳೆದು ಬಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯ ಮೆಟ್ಟಿ ಲೇರುತ್ತಿರುವ ಗ್ರಾಮೀಣ ಪ್ರತಿಭೆ ಕುಕ್ಕುಜೆಯ ಅಭಿನಯಾ ಶೆಟ್ಟಿ ಕಾರ್ಕಳ ತಾಲೂಕಿನ ಕಡ್ತಲ ಗ್ರಾ.ಪಂ. ವ್ಯಾಪ್ತಿಯ ದೊಂಡೇರಂಗಡಿ ಕುಕ್ಕುಜೆಯ ಕೃಷಿಕ ಸುಧಾಕರ ಶೆಟ್ಟಿ ಹಾಗೂ ಸಂಜೀವಿ ಶೆಟ್ಟಿ ದಂಪತಿಯ ಪುತ್ರಿ .
ಕೃಷಿ ಹಾಗೂ ಹೈನುಗಾರಿಕೆಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ಕುಟುಂಬದಿಂದ ಬಂದ ಇವರು ಎಳವೆ ಯಲ್ಲಿಯೇ ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ತನ್ನ ಪ್ರಾಥಮಿಕ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕಾರ,ಪ್ರೌಢ ಶಿಕ್ಷಣ ಸಂದರ್ಭ ಕ್ರೀಡಾ ಕೂಟದಲ್ಲಿ ಉಚಿತ ಶಿಕ್ಷಣದ ಅವಕಾಶ ಪಡೆದ ಪ್ರತಿಭೆ.
1ರಿಂದ 5ನೇ ತರಗತಿಯವರೆಗೆ ಕುಕ್ಕುಜೆ ಮೂಡಬೆಟ್ಟು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದು
5ರಿಂದ 7ನೇ ತರಗತಿಯ ವರೆಗೆ ಕುಕ್ಕುಜೆ ದೊಂಡೇರಂಗಡಿ ಸರಕಾರಿ ಮಾದರಿ ಹಿ.ಪ್ರಾ. ಶಾಲೆ ಯಲ್ಲಿ ಶಿಕ್ಷಣ ಪಡೆದರು. ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾದ ಶಂಕರ್ ನಾಯ್ಕ ಅವರು ಅಭಿನಯಾ ಶೆಟ್ಟಿ ಅವರಿಗೆ ಕ್ರೀಡೆಗೆ ಆವಶ್ಯಕವಾದ ಪೂರಕ ವಾತಾವರಣವನ್ನು ಕಲ್ಪಿಸಿ ಕ್ರೀಡೆಯಲ್ಲಿ ಗುರಿ ಸಾಧಿಸಲು ಅವಕಾಶ ಮಾಡಿಕೊಟ್ಟರು. ಅನಂತರ ಪ್ರೌಢ ಶಿಕ್ಷಣಕ್ಕಾಗಿ ಅಜೆಕಾರು ಚರ್ಚ್ ಶಾಲೆಗೆ ಸೇರಿದ ಸಂದರ್ಭ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದ ಸಾಧನೆ ಮಾಡಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ಇವರ ಪ್ರತಿಭೆಯನ್ನು ಗಮನಿಸಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು 2013-14ನೇ ಸಾಲಿ ನಿಂದ ಅಭಿನಯಾ ಶೆಟ್ಟಿಯವರಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಿ ಕ್ರೀಡೆ
ಯಲ್ಲಿ ಹೆಚ್ಚಿನ ಸಾಧನೆಗೈಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಪ್ರಸ್ತುತ ಪ್ರಥಮ ವರ್ಷದ ಪದವಿ ಮುಗಿಸಿರುವ ಇವರು ಇತ್ತೀಚೆಗೆ ಶ್ರೀಲಂಕಾ ದಲ್ಲಿ ನಡೆದ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇವರು 2013-14ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ನಡೆದ ಕ್ರೀಡಾಕೂಟ ದಲ್ಲಿ ಎತ್ತರ ಜಿಗಿತದಲ್ಲಿ ಚಿನ್ನದ ಪದಕ
ಗಳಿಸಿ ಝಾರ್ಖಂಡ್‌ನ ರಾಂಚಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. 2014-15, 2015-16, 2016-17ನೇ ಸಾಲಿನಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರು.
2017-18ನೇ ಸಾಲಿನಲ್ಲಿ ಟ್ರಿವೇಂಡ್ರಂನಲ್ಲಿ ಜರಗಿದ ಸೌತ್ ಝೊàನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ ಇವರು ಆಂಧ್ರಪ್ರದೇಶದಲ್ಲಿ ನಡೆದ ಕ್ರೀಡಾಕೂಟ
ದಲ್ಲಿ ಕಂಚಿನ ಪದಕ ಪಡೆದಿದ್ದರು.
2017-18ನೇ ಸಾಲಿನಲ್ಲಿ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಆ್ಯತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
2018-19ನೇ ಸಾಲಿನಲ್ಲಿ ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಸಾಧನೆ ಇವರದ್ದು.ಅಭಿನಯಾ ಶೆಟ್ಟಿ ವಸಂತ್ ಜೋಗಿ ಅವರಲ್ಲಿ ಕ್ರೀಡಾ ತರಬೇತಿ ಪಡೆಯುತ್ತಿದ್ದು, ಹುಟ್ಟೂರಿನ ಜನರ ನಿರಂತರ ಪ್ರೋತ್ಸಾಹ ಇವರ ಸಾಧನೆಗೆ ಬೆಂಬಲವಾಗಿ ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.