Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Team Udayavani, Nov 21, 2024, 10:21 PM IST
ತೆಕ್ಕಟ್ಟೆ: ಇಲ್ಲಿನ ಕುಂಭಾಶಿ ರಾ.ಹೆ. 66ರಲ್ಲಿ ಬುಧವಾರ ಇನ್ನೋವಾ ಕಾರಿಗೆ ಹಿಂದಿನಿಂದ ಅತೀ ವೇಗದಿಂದ ಇನ್ಸುಲೇಟರ್ ಲಾರಿ ಢಿಕ್ಕಿ ಹೊಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇರಳದ ಪಯ್ಯನೂರು ಮೂಲದ ನಾರಾಯಣನ್, ವಾತ್ಸಲ, ಅನಿತಾ, ಚೈತ್ರಾ ಅವರು ಕೆಎಂಸಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಸಾದ್ ಅವರು ತಿಳಿಸಿದ್ದಾರೆ.
ಇನ್ನುಳಿದ ಗಾಯಾಳು ಮಧುಸೂದನ್, ಭಾರ್ಗವನ್, ಚಾಲಕ ಫೈಝಲ್ ಹಾಗೂ ಇನ್ಸುಲೇಟರ್ ಚಾಲಕ ಹೊನ್ನಾವರದ ಮಹೇಶ್ ಗಾಯಾಳುಗಳು ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತವಾದ ತತ್‌ಕ್ಷಣ ಸ್ಥಳೀಯರು ಕ್ಷಿಪ್ರಗತಿಯಲ್ಲಿ ಸ್ಪಂದಿಸಿ ಗಾಯಾಳುಗಳನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದೇ ಗಾಯಾಳುಗಳು ಬದುಕುಳಿಯಲು ಕಾರಣವಾಯಿತು ಎನ್ನಲಾಗಿದೆ.
ಅಪಘಾತದ ಭೀಕರತೆ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ಅಪಘಾತದಲ್ಲಿ ಇನ್ಸುಲೇಟರ್ ಲಾರಿ ಮಗುಚಿ ಬಿದ್ದಿತ್ತು. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿತ್ತು.
ಮರಗಳನ್ನು ಕಡಿಯಲು ಒತ್ತಾಯ
ರಾ.ಹೆ. 66ರಲ್ಲಿ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುವ ಮಾರ್ಗದಲ್ಲಿ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲವಿದೆ. ಇದರ ರಾಜಗೋಪುರದ ಸಮೀಪದಲ್ಲೇ ಮರಗಳು ರಾ.ಹೆ. 66ಕ್ಕೆ ಆವರಿಸಿಕೊಂಡಿವೆ. ಇದರಿಂದ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ದೇಗುಲ ಒಮ್ಮೆಗೆ ಗೋಚರವಾಗುತ್ತಿಲ್ಲ. ಮುಂದಕ್ಕೆ ಸಾಗಿ ತದನಂತರ ಅದೇ ಹೆದ್ದಾರಿಯಲ್ಲಿ ಹಿಮ್ಮುಖವಾಗಿ ವಾಹನಗಳನ್ನು ಚಲಾಯಿಸಿಕೊಂಡು ಬರುತ್ತಾರೆ. ಇದರಿಂದ ಅವಘಡಗಳು ಸಂಭವಿಸುತ್ತಿವೆ. ಮಾತ್ರವಲ್ಲದೆ ದೇಗುಲದ ಸಮೀಪದಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.