“ಇನ್ನೊಬ್ಬರನ್ನು ಗೆಲ್ಲಿಸಿ ನೀವೂ ಗೆಲ್ಲಿ ‘
Team Udayavani, Mar 29, 2018, 8:25 AM IST
ಕುಂದಾಪುರ: ಜೀವನದಲ್ಲಿ ನಾವು ಗೆಲ್ಲಬೇಕು. ಆದರೆ ಪೈಪೋಟಿ ಯುಗದಲ್ಲಿ ಇನ್ನೊಬ್ಬರನ್ನು ಸೋಲಿಸಿ, ನಾವು ಗೆಲ್ಲುವುದು ದೊಡ್ಡ ಸಾಧನೆಯಲ್ಲ. ಇನ್ನೊಬ್ಬರನ್ನು ಗೆಲ್ಲಿಸಿ ನಾವು ಗೆಲ್ಲುವುದು ನಿಜವಾದ ನಮ್ಮ ಗೆಲುವು ಎನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಹೇಳಿದರು.
ಅವರು ಬುಧವಾರ ಭಂಡಾರ್‌ಕಾರ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಆಡಳಿತ ಮಂಡಳಿಯ ಅಧ್ಯಕ್ಷ ಡಾ| ಎಚ್. ಶಾಂತಾರಾಮ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವಸ್ತ ಮಂಡಳಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ರಾಜೇಂದ್ರ ತೋಳಾರ್, ಕೆ. ಪ್ರಜ್ಞೆàಶ್ ಪ್ರಭು, ಕೆ. ದೇವದಾಸ್ ಕಾಮತ್ ಉಪಸ್ಥಿತರಿದ್ದರು.
ರ್‍ಯಾಂಕ್ ವಿಜೇತರಿಗೆ ಸಮ್ಮಾನ
ಕಾಲೇಜನ್ನು ಪ್ರತಿನಿಧಿಸಿ, ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ್‍ಯಾಂಕ್ ವಿಜೇತರಾದ ಶಾಂಭವಿ, ಸಂಧ್ಯಾ, ಸಂಗೀತಾ ಯು.ಎಸ್. ಶೆಣೈ, ರಜನಿ, ಕಾರ್ತಿಕ್ ಕಾಮತ್ ಅವರನ್ನು ಸಮ್ಮಾನಿಸಲಾಯಿತು.
ವಿಶ್ವಸ್ಥ ಮಂಡಳಿಯ ಸದಸ್ಯ ಸದಾನಂದ ಛಾತ್ರ ಸ್ವಾಗತಿಸಿದರು. ಪ್ರಾಂಶುಪಾಲ ಡಾ| ಎನ್. ಪಿ. ನಾರಾಯಣ ಶೆಟ್ಟಿ ವರದಿ ವಾಚಿಸಿದರು. ಉಪನ್ಯಾಸಕ ಹಯವದನ ಉಪಾಧ್ಯಾಯ ಸಮ್ಮಾನಿತರ ವಿವರ ನೀಡಿದರು. ಉಪನ್ಯಾಸಕಿ ರೋಹಿಣಿ ವಂದಿಸಿದರು. ವಿದ್ಯಾರ್ಥಿನಿಯರಾದ ವಿನಯಾ ಶೆಟ್ಟಿ ಪರಿಚಯಿಸಿದರು. ಮಹಾಲಕ್ಷ್ಮಿ ನಿರ್ವಹಿಸಿದರು.
ಸಮ್ಮಾನ
ಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿಗೊಂಡ ಪ್ರಾಧ್ಯಾಪಕರಾದ ಪ್ರೊ| ಉದಯ ಕುಮಾರ್, ನಾರಾಯಣ ತಂತ್ರಿ, ಜಿ.ಎಸ್. ಹೆಗಡೆ, ಡಾ| ಪಾರ್ವತಿ ಜಿ. ಐತಾಳ್ ಹಾಗೂ ಬೋಧಕೇತರ ಸಿಬಂದಿ ಸರಸ್ವತಿ ಬಾಯಿ ಅವರನ್ನು ಸಮ್ಮಾನಿಸಲಾಯಿತು.
ಆಟ, ಪಾಠಗಳಲ್ಲಿ ತೊಡಗಿಸಿ
ಆಟ, ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳೆಲ್ಲದರಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಜೀವನ ಸುಖಮಯವಾಗಿಸಿಕೊಳ್ಳಲು ಸಾಧ್ಯ. ಕಾಲೇಜು ಎನ್ನುವುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಅದನ್ನು ಸಾಧ್ಯವಾದ ಮಟ್ಟಿಗೆ ಆಸ್ವಾದಿಸಿ ಎಂದು ಭಂಡಾರ್‌ಕಾರ್ ಕಾಲೇಜಿನ ಹಳೆ ವಿದ್ಯಾರ್ಥಿ ಮಹಾಬಲೇಶ್ವರ ಎಂ.ಎಸ್. ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.