ಕುಂದಾಪುರ: ಭಿನ್ನಮತ ಶಮನಕ್ಕೆ ಹಿರಿಯ ನಾಯಕರ ಪ್ರಯತ್ನ
Team Udayavani, Apr 22, 2018, 11:34 AM IST
ಕುಂದಾಪುರ: ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಪಕ್ಷದೊಳಗೆ ಉದ್ಭವಿಸಿದೆ ಎನ್ನಲಾದ ಭಿನ್ನಮತವನ್ನು ಶಮನಗೊಳಿಸಲು ಹಿರಿಯ ನಾಯಕರು ಪ್ರಯತ್ನಿಸಿದ್ದಾರೆ.
ಕಳೆದ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಕಿಶೋರ್ ಕುಮಾರ್ ಅವರ ಮನೆಯಲ್ಲಿ ಶನಿವಾರ ಭಿನ್ನಮತೀಯರ ಸಭೆ ನಡೆದಿದ್ದು, ಇದರಲ್ಲಿ ಮಾಜಿ ಸಚಿವ ಜಯಪ್ರಕಾಶ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕ ಎ.ಜಿ. ಕೊಡ್ಗಿ ಪಾಲ್ಗೊಂಡು ಅತೃಪ್ತರನ್ನು ಸಮಾಧಾನಪಡಿಸಿದ್ದಾರೆ, ಭಿನ್ನಮತ ಕೈಬಿಟ್ಟು ಬಿಜೆಪಿಯ ಪರವಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಅವರು ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಸಭೆಗೆ ಕರೆದಿದ್ದರು, ಹೋಗಿದ್ದೇನೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಭಿನ್ನಮತ ಸರಿಯಲ್ಲ, ಪಕ್ಷದ ಗೆಲುವಿಗಾಗಿ ಒಟ್ಟಾಗಿ ಕೆಲಸ ಮಾಡೋಣ ಎಂಬುದಾಗಿ ಸಲಹೆ ನೀಡಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.