ಕುಂದಾಪುರ: ತೆರಾಲಿ ಪೂರ್ವಭಾವಿ ಭಾತೃತ್ವ ಬಾಂಧವ್ಯ ದಿನ

Team Udayavani, Nov 26, 2019, 5:18 AM IST

bandavya-dina

ಕುಂದಾಪುರ: ಉಡುಪಿ ಧರ್ಮ ಪ್ರಾಂತ್ಯದಲ್ಲೆ ಅತ್ಯಂತ ಪುರಾತನವಾದ ಈ ವರ್ಷ 450 ವರ್ಷದ ಸಂಭ್ರಮಾಚರಣೆಯ ಪವಿತ್ರ ರೋಜರಿ ಮಾತೆಗೆ ಸಮರ್ಪಿಸಲ್ಪಟ್ಟ ಕುಂದಾಪುರದ ಇಗರ್ಜಿಯಲ್ಲಿ ಈ ವರ್ಷದ ತೆರಾಲಿ ಹಬ್ಬದ ಅಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ನಡೆಯುವ ಕೊಂಪ್ರಿ ಆಯ್ತಾರ್‌ ಭಾತೃ ಬಾಂಧವ್ಯ ದಿನವನ್ನು ವಿಶ್ವಾಸದ ಯಾತ್ರೆಯಲ್ಲಿ ಯೇಸು ಪ್ರಭುವಿನ ಜತೆ ಎಂಬ ಧ್ಯೇಯದೊಂದಿಗೆ ಪರಮ ಪ್ರಸಾದದ ಆರಾಧನೆ ರವಿವಾರದಂದು ನಡೆಯಿತು.

ರೋಜರಿ ಮಾತಾ ದೇವಾಲಯದಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿದ ಅಪಾರ ಭಕ್ತರು ಮತ್ತು ಅನೇಕ ಧರ್ಮದ ಭಗಿನಿಯರು ಬಣ್ಣದ ಮೇಣದ ಬತ್ತಿಗಳನ್ನು ಬೆಳಗಿಸಿದರು. ಪರಮ ಪ್ರಸಾದದ ಪುರಮೆರವಣಿಗೆಯು ಭಕ್ತಿ ಗಾಯನ, ಸಂಗೀತ, ಬ್ಯಾಂಡ್‌, ಬಣ್ಣ ಬಣ್ಣದ ಕೊಡೆಗಳ ಜತೆ ಕುಂದಾಪುರದ ಮುಖ್ಯ ರಸ್ತೆಗಳಲ್ಲಿ ವೈಭವದೊಂದಿಗೆ ನೆರವೇರಿತು. ಸಂತ ಮೇರಿಸ್‌ ವಿದ್ಯಾ ಸಂಸ್ಥೆಯ ಮೈದಾನದಲ್ಲಿ ಪರಮ ಪ್ರಸಾದದ ಆರಾಧನೆ ಕನ್ನಡದಲ್ಲಿ ನಡೆಯಿತು.

ಧಾರ್ಮಿಕ ವಿಧಿಯನ್ನು ನಡೆಸಿದ ಶಿವಮೊಗ್ಗ ಧರ್ಮಪ್ರಾಂತ್ಯದ ಕಬ್ಳೆ ಚರ್ಚ್‌ನ ಧರ್ಮಗುರು ಫಾ| ರಿಚಾರ್ಡ್‌ ಪಾಯ್ಸ , ದ್ರವ್ಯ ಮತ್ತು ಯೇಸು ಸ್ವಾಮಿಗೆ ಜತೆ ಜತೆಯಾಗಿ ನಾವು ಸೇವೆ ಮಾಡಲು ಸಾಧ್ಯವಿಲ್ಲ. ಪ್ರಾಪಂಚಿಕ ಸುಖದ ಜತೆ ಯೇಸುವಿನ ಭಕ್ತಿ ಆಚರಿಸಲು ಅಸಾಧ್ಯ. ಅಲ್ಲಿ ಪರಿಶುದ್ಧ ವಿಶ್ವಾಸ ಇರುವುದಿಲ್ಲ. ನಮ್ಮ ಪರಿಶುದ್ಧ ವಿಶ್ವಾಸಕ್ಕಾಗಿ ಯೇಸು ಸ್ವಾಮಿ ಕಾಯುತ್ತಿದ್ದಾರೆ. ನಾವು ನಮ್ಮ ಜೀವಿತದಲ್ಲಿ ಯೇಸುವಿಗೆ ಮೊದಲ ಆದ್ಯತೆ ನೀಡಬೇಕು. ಜೀವ-ಮರಣ, ನ್ಯಾಯ-ಅನ್ಯಾಯ, ನೀತಿ-ಅನೀತಿ ಇದರಲ್ಲಿ ಯಾವುದು ಉತ್ತಮವೆಂದು ಆಯ್ಕೆ ಮಾಡಿಕೊಳ್ಳುವುದು ನಿಮ್ಮದಾಗಿದೆ ಎಂದು ಸಂದೇಶ ನೀಡಿದರು.

ನವೆಂಬರ್‌ ನಾಲ್ಕನೇ ರವಿವಾರ ಪ್ರಪಂಚಾದ್ಯಂತ ಯೇಸುವನ್ನು ಕ್ರಿಸ್ತ ರಾಜನೆಂಬ ಹಬ್ಬ ಆಚರಿಸಲು ಪರಮ ಪ್ರಸಾದದ ಸಂಭ್ರಮ ಆಚರಿಸಲು ಆರಂಭವಾಗಿ ಕೆಲವು ದಶಕಗಳಾದವು. ಆದರೆ 450 ವರ್ಷ ಇತಿಹಾಸ ಇರುವ ಕುಂದಾಪುರ ಕ್ರೈಸ್ತ ಪವಿತ್ರ ಸಭೆ ಇದಕ್ಕಿಂತ ಹಿಂದೆಯೇ ಹಲವಾರು ವರ್ಷಗಳ ಮೊದಲೇ ನವೆಂಬರ್‌ ನಾಲ್ಕನೆ ರವಿವಾರ ಕುಂದಾಪುರ ಪವಿತ್ರ ರೋಜರಿ ಮಾತಾ ಇಗರ್ಜಿ ತೆರಾಲಿಯ ಪೂರ್ವಭಾವಿಯಾಗಿ ಭಾÅತೃ ಬಾಂಧವ್ಯದ ರವಿವಾರ ಹಾಗೂ ಪರಮಪ್ರಸಾದದ ಸಂಭ್ರಮ ಆಚರಿಸುವುದು ನಡೆಯುತ್ತ ಬಂದಿದೆ.

ಈ ಧಾರ್ಮಿಕ ವಿಧಿಯ ನೆರವೇರಿಕೆಯಲ್ಲಿ ಕುಂದಾಪುರ ರೋಜರಿ ಮಾತೆ ಇಗರ್ಜಿಯ ಪ್ರಧಾನ ಧರ್ಮಗುರು ಫಾ| ಸ್ಟ್ಯಾನಿ ತಾವ್ರೊ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡು ವಂದಿಸಿದರು. ಸಹಾಯಕ ಧರ್ಮಗುರು ಫಾ| ವಿಜಯ್‌ ಡಿ’ಸೋಜಾ ದಿನದ ಮಹತ್ವ ತಿಳಿಸಿದರು. ಸಂತ ಮೇರಿಸ್‌ ಜೂ.ಕಾಲೇಜಿನ ಪ್ರಾಂಶುಪಾಲ ಧರ್ಮಗುರು ಫಾ| ಪ್ರವೀಣ್‌ ಅಮೃತ್‌ ಮಾರ್ಟಿಸ್‌ ಸಹಕರಿಸಿದರು.

ಈ ಪ್ರಾರ್ಥನ ವಿಧಿಯಲ್ಲಿ ಹಲವು ಧರ್ಮಭಗಿನಿಯರು, ಪಾಲನ ಮಂಡಳಿ ಉಪಾಧ್ಯಕ್ಷ ಜೇಕಬ್‌ ಡಿ’ಸೋಜಾ, ಕಾರ್ಯದರ್ಶಿ ಫೆಲ್ಸಿಯಾನ್‌ ಡಿ’ಸೋಜಾ, ಆಯೋಗಗಳ ಸಂಚಾಲಕಿ ಪ್ರೇಮಾ ಡಿ’ಕುನ್ಹಾ, ವಾಳೆಯ ಗುರಿಕಾರರು, ಪಾಲನ ಮಂಡಳಿ ಸದಸ್ಯರು, ಇಗರ್ಜಿಯ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.