ಕುಂದಾಪುರ ಉಪ ವಿಭಾಗ : ಶತ ಪ್ರತಿಶತಕ್ಕಿಂತ ಹೆಚ್ಚು ಗುರಿ ಸಾಧನೆ, ಇಲಾಖೆಯಿಂದ ಮೆಚ್ಚುಗೆ
Team Udayavani, May 6, 2022, 7:03 AM IST
ಉಡುಪಿ : ಕುಂದಾಪುರ ಉಪ ವಿಭಾಗವು 2021ರ ನವಂಬರ್‌ನಿಂದ 2022ರ ಮಾರ್ಚ್‌ವರೆಗೆ ನ್ಯಾಯಾಲಯದ ವಿವಾದಾಸ್ಪದ ಪ್ರಕರಣಗಳ ವಿಲೇವಾರಿಯಲ್ಲಿ ಶತ ಪ್ರತಿಶತಕ್ಕಿಂತ ಹೆಚ್ಚು ಗುರಿ ಸಾಧನೆ ಮಾಡಿದೆ. ಕುಂದಾಪುರ ಉಪವಿಭಾಗದ ಈ ವಿಶೇಷ ಸಾಧನೆಗಾಗಿ ಉಪ ವಿಭಾಗಾಧಿಕಾರಿ ಕೆ. ರಾಜು ಮತ್ತು ಕಚೇರಿ ಅಧಿಕಾರಿ, ಸಿಬಂದಿ ವರ್ಗಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಶ್ಲಾಘನೆ ವ್ಯಕ್ತಪಡಿಸಿ ಅಭಿನಂದನ ಪತ್ರ ಕಳುಹಿಸಿದ್ದಾರೆ.
ಕುಂದಾಪುರ ಎಸಿ ಕೋರ್ಟ್‌ನಲ್ಲಿ ಪಹಣಿ ತಿದ್ದುಪಡಿ, ಖಾತಾ ಬದಲಾವಣೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತಾದ ಕರ್ನಾಟಕ ಭೂ ಕಂದಾಯ 1964ರ ಕಲಂ 49 ಮತ್ತು 136/2ರಂತೆ ಮೇಲ್ಮನವಿ ಸಲ್ಲಿಸಿದ ಪ್ರಕರಣಗಳಲ್ಲಿ 1,953 ಹಳೆ ಪ್ರಕರಣಗಳು ಬಾಕಿ ಇವೆ. ಎಪ್ರಿಲ್‌ನಲ್ಲಿ 215 ಅರ್ಜಿಗಳು ಸ್ವೀಕಾರವಾಗಿದ್ದು, ಒಟ್ಟು 2,168 ಪ್ರಕರಣಗಳಾಗಿವೆ.
ಮಾರ್ಚ್‌ನಲ್ಲಿ 200, ಎಪ್ರಿಲ್‌ನಲ್ಲಿ 200 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 1,968 ಅರ್ಜಿಗಳು ವಿಲೇಗೆ ಬಾಕಿ ಇವೆ. ಎಸಿ ಕೋರ್ಟ್ ಅರ್ಜಿ ವಿಲೇಗೆ ಕಂದಾಯ ಇಲಾಖೆ ತಿಂಗಳಿಗೆ 100 ಅರ್ಜಿಗಳನ್ನು ವಿಲೇ ಮಾಡಲು ಗುರಿ ನೀಡಿದ್ದು, ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಯ ಕುಂದಾಪುರ ಉಪ ವಿಭಾಗವು ಗರಿಷ್ಠ ಅರ್ಜಿಗಳನ್ನು ವಿಲೇವಾರಿ ಮಾಡಿದೆ.
ಇತರ ಜಿಲ್ಲೆಗಳಲ್ಲಿ 2 ಉಪ ವಿಭಾಗ ಕಚೇರಿಗಳಿದ್ದರೂ ಗರಿಷ್ಠ ಪ್ರಮಾಣದಲ್ಲಿ ಅರ್ಜಿ ವಿಲೇ ಮಾಡಲು ಸಾಧ್ಯವಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಉಪ ವಿಭಾಗ ಒಂದೆ ಇದ್ದರೂ ಉತ್ತಮ ಸಾಧನೆ ತೋರಿದ್ದಕ್ಕೆ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.