ಕುಂದೇಶ್ವರ ದೇವಸ್ಥಾನ: ಲಕ್ಷದೀಪೋತ್ಸವ ಸಂಭ್ರಮ
Team Udayavani, Dec 7, 2018, 1:45 AM IST
ಕುಂದಾಪುರ: ಇಲ್ಲಿನ ಪ್ರಸಿದ್ಧ ಶ್ರೀ ಕುಂದೇಶ್ವರ ದೇವಾಲಯದಲ್ಲಿ ಗುರುವಾರ ಲಕ್ಷದೀಪೋತ್ಸವ ಮತ್ತು ರಥೋತ್ಸವಕ್ಕಾಗಿ ನಾಡಿನ ಬೇರೆ ಬೇರೆ ಕಡೆಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ, ಮಹಾಪೂಜೆ, ಮಹಾ ಮಂಗಳಾರತಿ ನಡೆದು ಬೆಳಗ್ಗೆಯಿಂದ ಸಂಜೆವರೆಗೆ ತಾಲೂಕಿನ ವಿವಿಧ ಭಜನ ಮಂಡಳಿಗಳಿಂದ ಶ್ರೀ ದೇವರ ನಾಮ ಸಂಕೀರ್ತನೆ, ಭಜನೆ ನಡೆಯಿತು. ನೃತ್ಯವಿದುಷಿ ಪ್ರವಿತಾ ಅಶೋಕ್ ಅವರ ನಿರ್ದೇಶನದಲ್ಲಿ ನೃತ್ಯವಸಂತ ನಾಟ್ಯಾಲಯದ ಕಲಾವಿದೆಯರಿಂದ ನೃತ್ಯಸಿಂಚನ ನಡೆಯಿತು.
ಕುಂದಾಪುರ ಹೆಸರು ಬರಲು ಮೂಲಕಾರಣನಾದ ಊರಿನ ಅಧಿದೇವತೆ ಶ್ರೀ ಕುಂದೇಶ್ವರ. ಶತ-ಶತಮಾನಗಳ ಇತಿಹಾಸವುಳ್ಳ ಶ್ರೀ ಕುಂದೇಶ್ವರ ಸಹಸ್ರ ಸಹಸ್ರ ಭಕ್ತಾದಿಗಳ ಹೃದಯದಲ್ಲಿ ನೆಲೆ ನಿಂತಿದ್ದಾನೆ. ಹಾಗಾಗಿ ಇಲ್ಲಿನ ದೀಪೋತ್ಸವ, ರಥೋತ್ಸವ ಭಕ್ತರಿಗೆ ಅಪೂರ್ವವಾಗಿದೆ. ಈಚೆಗೆ ಕೆಲವು ವರ್ಷಗಳಿಂದ ದೀಪೋತ್ಸವ ಹಾಗೂ ರಥೋತ್ಸವ ವೈಭವದಿಂದ ನಡೆಯುತ್ತಿದೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವವಾಗಿದೆ. ನಗರದ ಬೀದಿಗಳ ಬದಿ ತಾತ್ಕಾಲಿಕ ಅಂಗಡಿಗಳ ಸಾಲಿನಿಂದ ತುಂಬಿವೆ. ಈ ಬಾರಿಯ ವಿಶೇಷ ಆಕರ್ಷಣೆ ಎಂಬಂತೆ ಕೋಟೇಶ್ವರ ಕೊಡಿ ಹಬ್ಬದಿಂದ ನೇರ ಇಲ್ಲಿಗೆ ಮನೋರಂಜನಾ ತೊಟ್ಟಿಲು ಸೇರ್ಪಡೆಯಾಗಿವೆ. ಸುಮಾರು 10 ಸಾವಿರ ಹೂವುಗಳಿಂದ ತಯಾರಿಸಲಾದ ಅಯ್ಯಪ್ಪನ ವಿಗ್ರಹ ಜನರನ್ನು ಆಕರ್ಷಿಸಿತು. ಮಧ್ಯಾಹ್ನದ ಅನ್ನಪ್ರಸಾದ ಭೋಜನಕ್ಕೂ ಭಕ್ತರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.