ಉಡುಪಿ ಜಿಲ್ಲೆ: 6 ಮಂಗಗಳ ಶವ ಪತ್ತೆ 

Team Udayavani, Jan 20, 2019, 4:11 AM IST

kyas.jpg

ಉಡುಪಿ/ಕುಂದಾಪುರ/ಸಿದ್ದಾಪುರ: ಜಿಲ್ಲೆಯಲ್ಲಿ ಶನಿವಾರ ಒಟ್ಟು ಆರು ಮಂಗಗಳ ಮೃತ ದೇಹ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಬೆಳ್ವೆ, ಮಡಾಮಕ್ಕಿ, ವಂಡ್ಸೆ, ನಾಡ, ಸಿದ್ದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕೆಂಜೂರು, ಕಾರ್ಕಳ ತಾಲೂಕಿನ ಕಡ್ತಲ ದೊಡೇರಂಗಡಿಯಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾದವು. ಇದರಲ್ಲಿ ಮಡಾಮಕ್ಕಿ ಮತ್ತು ಕಡ್ತಲದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ಕೊಳೆತ ಸ್ಥಿತಿಯಲ್ಲಿತ್ತು. ಸಿದ್ದಾಪುರ, ವಂಡ್ಸೆ ಪ್ರದೇಶದಲ್ಲಿ ಈಗಾಗಲೇ ಸಿಕ್ಕಿದ ಮಂಗಗಳಿಗೆ ಕಾಯಿಲೆ ಇರುವುದು ದೃಢಪಟ್ಟ ಕಾರಣ ಮತ್ತೆ ಪರೀಕ್ಷೆಗೆ ಕಳುಹಿಸಿಲ್ಲ. 

ಜ್ವರ ಬಂದ ಮೂವರ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇವರಾರಿಗೂ ಮಂಗನ ಕಾಯಿಲೆ ಇಲ್ಲ ಎಂದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಕಮಲಶಿಲೆ ದೇವಸ್ಥಾನದಿಂದ 25,000 ರೂ. ಮೌಲ್ಯದ ಡಿಎಂಪಿ ತೈಲಕ್ಕೆ ಬೇಡಿಕೆ ಬಂದಿದೆ.

ಕೆಎಂಸಿ: ಮತ್ತೆ ಮೂವರು ದಾಖಲು
ಉಡುಪಿ: ಶಂಕಿತ ಮಂಗನಕಾಯಿಲೆ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಮೂವರು ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ ಕೆಎಂಸಿಯಲ್ಲಿ 101 ಮಂದಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗೆ ದಾಖಲಾಗಿ 65 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.

ಕಡಬ: ಮತ್ತೆ 3 ಶವ ಪತ್ತೆ
ಕಡಬ ಕುಟ್ರಾಪ್ಪಾಡಿ ಗ್ರಾಮದಲ್ಲಿ ಇನ್ನೂ 3 ಮಂಗಗಳ ಶವಗಳು ಪತ್ತೆಯಾಗಿವೆ. ಈ ವರೆಗೆ ತಾಲೂಕಿನಲ್ಲಿ ಒಟ್ಟು 5 ಶವಗಳು ಪತ್ತೆಯಾಗುವುದರೊಂದಿಗೆ ಜನರಲ್ಲಿ ಮಂಗನಕಾಯಿಲೆಯ ಭೀತಿ ಮನೆಮಾಡಿದೆ.ರಾಮಕುಂಜ ಗ್ರಾ.ಪಂ. ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಅವರಿಗೆ ಸೇರಿದ ತೋಟದಲ್ಲಿ ಜ. 16ರಂದು 1 ಮಂಗನ ಶವ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕುಟ್ರಾಪ್ಪಾಡಿ ಗ್ರಾಮದ ಉಳಿಪ್ಪು ಅರಣ್ಯ ಪ್ರದೇಶದಲ್ಲಿ ಸಂಪೂರ್ಣ ಕೊಳೆತುಹೋಗಿದ್ದ ಶವ ಪತ್ತೆಯಾಗಿತ್ತು. ಆದ್ದರಿಂದ  ಶವದ ಭಾಗಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲು ಸಾಧ್ಯವಾಗಿರಲಿಲ್ಲ.  ಈ ಮಧ್ಯೆ ವಾರದ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಕುಂಟೋಡಿ ಜಯಚಂದ್ರ ರೈ ಅವರಿಗೆ ಸೇರಿದ ತೋಟದಲ್ಲಿ ಪತ್ತೆಯಾಗಿದ್ದ ಮಂಗನ ಶವವನ್ನು ಸ್ಥಳೀಯರು ಮಣ್ಣಿನಲ್ಲಿ ಹೂತು ಬಳಿಕ ಕಡಬ ಸರಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿಯ ಕ್ಯಾಸನೂರು ಕಾಡಿನ ಕಾಯಿಲೆ (ಕೆಎಫ್‌ಡಿ) ಘಟಕದ ವೈದ್ಯಾಧಿಕಾರಿಗಳು ಪರಿಸರದಲ್ಲಿ ಕಂಡುಬಂದ ಉಣುಗುಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಕುಟ್ರಾಪ್ಪಾಡಿ ಗ್ರಾಮದ ಉರುಂಬಿಯ ಶೇಖರ ಗೌಡ ಅವರ ತೋಟದಲ್ಲಿ ಮತ್ತು ಮೀನಾಡಿಯಲ್ಲಿ  ಹಲವು ದಿನಗಳ ಹಿಂದೆ ಮಂಗ ಸತ್ತಿರುವ ವಿಚಾರ ಶನಿವಾರ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.