ಪಾಳುಬಿದ್ದ ಬೀಡಿನಗುಡ್ಡೆ ಬಯಲು ರಂಗಮಂದಿರ


Team Udayavani, May 10, 2022, 12:31 PM IST

ranga-mandira

ಉಡುಪಿ: ನಗರಕ್ಕೊಂದು ಸುಸಜ್ಜಿತ ಬಯಲು ರಂಗ ಮಂದಿರದ ಬೇಡಿಕೆಯಂತೆ ನಿರ್ಮಾಣಗೊಂಡ ಬೀಡಿನಗುಡ್ಡೆ ಬಯಲು ರಂಗಮಂದಿರ ಇದೀಗ ನಿರ್ವಹಣೆ ಕೊರತೆಯಿಂದ ಸಂಪೂರ್ಣ ಪಾಳುಬಿದ್ದಿದೆ.

ಬೀಡಿನಗುಡ್ಡೆ ರಂಗಮಂದಿರವು ಸೌಲಭ್ಯ ಮತ್ತು ನಿರ್ವಹಣೆ ಕೊರತೆಯಿಂದ ಮಹತ್ವ ಕಳೆದುಕೊಳ್ಳುತ್ತಿದೆ. ಕ್ರೀಡೆ, ಉತ್ಸವ, ಸಾರ್ವಜನಿಕ ಸಭೆ, ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಪರಿಕಲ್ಪನೆಯಡಿ, ರಿಯಾಯತಿ ದರದಲ್ಲಿ ಸಭಾಂಗಣ ಒದಗಿಸುವ ಉದ್ದೇಶದಿಂದ ಬಯಲು ರಂಗಮಂದಿರ ನಿರ್ಮಿಸಲಾಗಿತ್ತು. ಸರಿಯಾಗಿ ನಿರ್ವಹಣೆ ಮಾಡದೆ, ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ರಂಗಮಂದಿರ ಈಗ ದುಃಸ್ಥಿತಿಗೆ ತಲುಪಿದೆ. ಪ್ರತೀ ವರ್ಷ ಜಿಲ್ಲಾಡಳಿತ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆಯ ಜತೆಗೆ ಕ್ರಿಕೆಟ್‌, ಕಲಾ ಚಟುವಟಿಕೆಗಳು, ಉತ್ಸವ, ಮೇಳಗಳನ್ನು ಇಲ್ಲಿ ಆಯೋಜಿಸಲಾಗುತ್ತಿತ್ತು. ಕೋವಿಡ್‌ಲಾಕ್‌ಡೌನ್‌ ಬಳಿಕ ಇಲ್ಲಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್‌ಬಿದ್ದಿದೆ. ಕೋವಿಡ್‌ ಲಾಕ್‌ಡೌನ್‌ ಸಂದರ್ಭ ಇಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಲಾರಿ, ಟೆಂಪೋ ಓಡಾಟದ ವೇಳೆ ಆವರಣ ಗೋಡೆಗೆ ಢಿಕ್ಕಿಯಾಗಿ ಹಾನಿ ಸಂಭವಿಸಿದೆ. ಬಳಿಕ ಮರು ನಿರ್ಮಾಣವಾಗಿಲ್ಲ.

ನಿರ್ವಹಣೆ ಕೊರತೆ

ಎರಡು ಕಡೆಗಳಲ್ಲಿ ಮಂದಿರದ ಆವರಣ ಗೋಡೆ ಕುಸಿದುಬಿದ್ದಿದೆ. ಇನ್ನೊಂದು ಬದಿಯಲ್ಲಿ ಗೋಡೆ ಕುಸಿದು ಬೀಳುವ ಹಂತದಲ್ಲಿದೆ. ಒಂದು ಗೋಡೆಯು ವಾಹನ ಢಿಕ್ಕಿಯಾಗಿ ಉರುಳಿದ್ದರೆ, ಇನ್ನೊಂದು ಎರಡು ವರ್ಷದ ಹಿಂದೆ ಮಳೆಗಾಲದ ಮಳೆ ರಭಸಕ್ಕೆ ಗೋಡೆ ಕುಸಿದಿದೆ. ಇದುವರೆಗೆ ಅದನ್ನು ಸರಿಪಡಿಸುವ ಕೆಲಸವಾಗಿಲ್ಲ. ಮೈದಾನದ ಒಳಗಿರುವ ಬೆಂಚ್‌ಗಳನ್ನು ಗಿಡಗಂಟಿಗಳು ಆವರಿಸಿಕೊಂಡಿವೆ.

ವೇದಿಕೆಯೂ ನಿರ್ವಹಣೆಯಿಲ್ಲದ ಶಿಥಿಲಾವಸ್ಥೆಗೆ ತಲುಪಿದೆ. ಮದ್ಯದ ಬಾಟಲಿ, ಪ್ಲಾಸ್ಟಿಕ್‌ ತ್ಯಾಜ್ಯ ರಾಶಿ ಪರಿಸರದ ಅಂದವನ್ನು ಕೆಡಿಸಿದೆ. ರಾತ್ರಿ ಅಕ್ರಮ ಚಟುವಟಿಕೆಗಳ ಜತೆಗೆ ಮದ್ಯ ಪಾರ್ಟಿ, ಜೂಜಾಟದ ಕೇಂದ್ರವಾಗಿ ಮಾರ್ಪಟ್ಟಿದೆ.

ನಗರಸಭೆಗೆ ಹಸ್ತಾಂತರಿಸಲು ಕೋರಿಕೆ

ಬಯಲು ರಂಗಮಂದಿರ ಜಿಲ್ಲಾಡಳಿತಕ್ಕೆ ಒಳಪಟ್ಟಿದ್ದು, ನಿರ್ವಹಣೆ ನಗರಸಭೆಗೆ ವಹಿಸಲಾಗಿದೆ. ಇಲ್ಲಿನ ಕಾವಲು ಸಿಬಂದಿಗೆ ವೇತನವನ್ನು ನಗರಸಭೆ ಪಾವತಿಸಬೇಕು. ಅಲ್ಲದೆ ಈ ಹಿಂದೆ ಕ್ರೀಡೆ, ಕಲಾ ಚಟುವಟಿಕೆ, ಉತ್ಸವಕ್ಕೆ ಹೆಚ್ಚು ದರವನ್ನು ವಿಧಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಬೇಸರಕ್ಕೆ ಕಾರಣವಾಗಿದೆ. ಬಯಲು ರಂಗಮಂದಿರ ಸಂಪೂರ್ಣವಾಗಿ ನಗರಸಭೆಗೆ ಬಿಟ್ಟುಕೊಡಬೇಕು ಎಂಬ ಆಗ್ರಹವಿದೆ. ಮುಂದಿನ ದಿನಗಳಲ್ಲಿ ರಂಗಮಂದಿರಕ್ಕೆ ಕಾಯಕಲ್ಪ ನೀಡುವುದಿದ್ದರೆ ಸೂಕ್ತ ಬಸ್‌ ಸೌಕರ್ಯ ಮತ್ತು ಪಾರ್ಕಿಂಗ್‌ ವ್ಯವಸ್ಥೆಯನ್ನು ಅನುಕೂಲವಾಗಿಸಬೇಕಿದೆ.

ಡಿಸಿಗೆ ಮನವಿ

ಬೀಡಿನಗುಡ್ಡೆ ರಂಗಮಂದಿರ ಸಂಪೂರ್ಣ ನಗರಸಭೆಗೆ ವಹಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ನಗರಸಭೆಗೆ ಹಸ್ತಾಂತರವಾದ ಬಳಿಕ ವ್ಯವಸ್ಥಿತ ಅಭಿವೃದ್ಧಿ ಮತ್ತು ನಿರ್ವಹಣೆ ನಗರಸಭೆಯಿಂದ ಮಾಡಲಾಗುತ್ತದೆ. ನಗರದ ಮಾದರಿ ಬಯಲು ರಂಗಮಂದಿರವಾಗಿ ರೂಪಿಸುತ್ತೇವೆ. -ಸುಮಿತ್ರಾ ನಾಯಕ್‌, ಅಧ್ಯಕ್ಷೆ, ಉಡುಪಿ ನಗರಸಭೆ

ಶೀಘ್ರ ಕ್ರಮ

ಬಯಲು ರಂಗ ಮಂದಿರವನ್ನು ಯಾವ ಮಾದರಿಯಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಮಾಡಬೇಕು ಎಂಬುದನ್ನು ಸ್ಥಳ ಪರಿಶೀಲನೆಯ ಅನಂತರ ನಿರ್ಧರಿಸಲಾಗುವುದು. ನಗರಸಭೆಯ ಬೇಡಿಕೆಯನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಕೂರ್ಮಾ ರಾವ್‌, ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.