ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ !
ಹದಿಮೂರು ವರ್ಷಗಳಿಂದ ನಡೆಯದ ನೇಮಕಾತಿ; ಕ್ರೀಡಾ ಚಟುವಟಿಕೆ, ಮಕ್ಕಳ ಸದೃಢತೆಗೆ ಪೆಟ್ಟು
Team Udayavani, Feb 28, 2020, 6:30 AM IST
ಸಾಂದರ್ಭಿಕ ಚಿತ್ರ
ಉಡುಪಿ: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ 13 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗದೆ ಮಕ್ಕಳ ಕ್ರೀಡಾ ಚಟುವಟಿಕೆ ಕುಂಠಿತ ಗೊಂಡಿದೆ. ವೃಂದ ನೇಮಕಾತಿ ಬದಲಾವಣೆಯಲ್ಲಿ ನಿರ್ಲಕ್ಷ್ಯ, ವೈದ್ಯನಾಥನ್ ವರದಿಯ ಶಿಫಾರಸುಗಳನ್ನು ಪೂರ್ಣ ಅನು ಷ್ಠಾನಕ್ಕೆ ತಾರದಿರುವುದೇ ನೇಮಕಾತಿಯಾಗದಿರಲು ಪ್ರಮುಖ ಕಾರಣ. ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವ ಸಿಪಿಎಡ್, ಡಿಪಿಎಡ್ ಅಭ್ಯರ್ಥಿಗಳ ಭವಿಷ್ಯವೂ ಕತ್ತಲಲ್ಲಿದೆ. ರಾಜ್ಯದಲ್ಲಿ 29 ಸಾವಿರ ಸರಕಾರಿ ಪ್ರಾ. ಶಾಲೆಗಳಿವೆ. ಅವುಗಳ ಪೈಕಿ 3,500 ಶಾಲೆಗಳಲ್ಲಿ ಮಾತ್ರ ದೈ.ಶಿ. ಶಿಕ್ಷಕರಿದ್ದಾರೆ. ಇದಕ್ಕೆ ಹೋಲಿಸಿದರೆ ಪ್ರೌಢ ಶಾಲೆಗಳ ಸ್ಥಿತಿ ಪರವಾಗಿಲ್ಲ; 4,350 ಶಾಲೆಗಳ ಪೈಕಿ 3,950ರಷ್ಟು ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿದ್ದಾರೆ.
ಮಕ್ಕಳಿಲ್ಲದಿರುವುದೂ ಅಡ್ಡಿ
ಸರಕಾರಿ ಶಾಲೆಗೆ ಮಕ್ಕಳ ದಾಖಲಾತಿ ಕಡಿಮೆಯಾದ ಹಿನ್ನೆಲೆ ಯಲ್ಲಿ 200ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಮಾತ್ರ ದೈಹಿಕ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈ.ಶಿ. ಶಿಕ್ಷಕರ ಕೊರತೆ ಗಣನೀಯವಾಗಿದೆ.
ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಒತ್ತು ನೀಡಬೇಕಾದ ಕ್ರೀಡಾ ಚಟುವಟಿಕೆಗಳು ನಿರ್ಲಕ್ಷ್ಯಕ್ಕೆ ಈಡಾಗುತ್ತಿವೆ ಎಂಬುದು ಪೋಷಕರ ಅಳಲು. ಮಕ್ಕಳು ಕಡಿಮೆ ಇದ್ದರೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಮಾಡಬೇಕು ಎಂಬುದು ಅವರ ಆಗ್ರಹ. ಸರಕಾರವು ಸರಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿರುವಂತೆ ದೈ.ಶಿ. ಶಿಕ್ಷಕರನ್ನು ನೇಮಿಸಬೇಕು ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯ.
– ಬಾಲಕೃಷ್ಣ ಭೀಮಗುಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.