ಇಂದಿನಿಂದ ಲಕ್ಷದೀಪೋತ್ಸವ ಸಡಗರ

ಶ್ರೀಕೃಷ್ಣಮಠದಲ್ಲಿ ತಪ್ತಮುದ್ರಾಧಾರಣೆ

Team Udayavani, Nov 16, 2021, 5:15 AM IST

ಇಂದಿನಿಂದ ಲಕ್ಷದೀಪೋತ್ಸವ ಸಡಗರ

ಉಡುಪಿ: ಶ್ರೀಕೃಷ್ಣಮಠದಲ್ಲಿ ಸೋಮವಾರ ಚಾತುರ್ಮಾಸ್ಯವ್ರತದ ಕೊನೆಯ ಏಕಾದಶಿಯಾದ ದೇವಪ್ರಬೋಧಿನಿ ಏಕಾದಶಿಯಂದು ಭಕ್ತರಿಗೆ ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ತಪ್ತಮುದ್ರಾಧಾರಣೆ ನಡೆಸಿದರು.

ಇದಕ್ಕೂ ಮುನ್ನ ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ಸಲ್ಲಿಸಿದರು ಮತ್ತು ಪುರೋಹಿತರಾದ ವೇ| ಮೂ| ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮ ನಡೆಸಿದರು. ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಸ್ವತಃ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ನಡೆಸಿದರು. ಅ ಬಳಿಕ ಭಕ್ತರಿಗೆ ಮುದ್ರಾಧಾರಣೆ ನಡೆಸಲಾಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಗ್ಗೆ 11ರಿಂದ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀತೀರ್ಥ ಶ್ರೀಪಾದರಿಂದ ತಪ್ತ ಮುದ್ರಾಧಾರಣೆ ನಡೆಯಿತು.ನಾಲ್ಕು ದಿನ ದೀಪೋತ್ಸವ ಮಂಗಳವಾರ ಉತ್ಥಾನದ್ವಾದಶಿಯಂದು ಮೊದಲ ದಿನದ ಲಕ್ಷದೀಪೋತ್ಸವ ಜರಗಲಿದೆ.

ನ. 19ರ ವರೆಗೆ ನಾಲ್ಕು ದಿನಗಳ ಕಾಲ ದೀಪೋತ್ಸವ ನಡೆಯಲಿದ್ದು ಭಕ್ತರೂ ಈ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭ ಸುಮಾರು 35,000 ಮಣ್ಣಿನ ಹಣತೆ ದೀಪಗಳನ್ನು ರಥಬೀದಿ ಸುತ್ತಲೂ ಬೆಳಗಿಸಲಾಗುವುದು. ಇದಲ್ಲದೆ ಮಧ್ವಸರೋವರ, ಶ್ರೀಕೃಷ್ಣಮಠದೊಳಗೆ ದೀಪಗಳನ್ನು ಬೆಳಗಿಸಲಾಗುತ್ತದೆ.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ: ವಿಚಾರಣೆ ಮುಂದಕ್ಕೆ

ರಥಬೀದಿ ಸುತ್ತ ಸುಮಾರು 400 ಗೂಡುದೀಪಗಳನ್ನು ಅಳವಡಿಸಲಾಗುತ್ತಿದೆ. ನಾಲ್ಕೂ ದಿನಗಳಲ್ಲದೆ ವರ್ಷಪೂರ್ತಿ ಶುದ್ಧ ಎಳ್ಳೆಣ್ಣೆಯಿಂದ ದೀಪಗಳನ್ನು ಉರಿಸಲಾಗುತ್ತಿದೆ. ಲಕ್ಷದೀಪೋತ್ಸವಕ್ಕಾಗಿ ಸುಮಾರು 600 ಲೀಟರ್‌ ಶುದ್ಧ ಎಳ್ಳೆಣ್ಣೆಯನ್ನು ಸಂಗ್ರಹಿಸಲಾಗಿದೆ.

ಮಂಗಳವಾರ ಅಪರಾಹ್ನ 2.50ಕ್ಕೆ ರಥಬೀದಿಯಲ್ಲಿ ಸ್ವಾಮೀಜಿಯವರು ಹಣತೆಗಳನ್ನಿಟ್ಟು ಮುಹೂರ್ತ ನಡೆಸಲಿದ್ದು ಭಕ್ತರು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಪರಾಹ್ನ 4ಕ್ಕೆ ತುಳಸೀಪೂಜೆ ಮುಕ್ತಾಯಗೊಳ್ಳಲಿದ್ದು ಕ್ಷೀರಾಬ್ದಿ ಪೂಜೆ ಮಧ್ವಸರೋವರದಲ್ಲಿ ನಡೆಯಲಿದೆ. ಚಾತುರ್ಮಾಸ್ಯವ್ರತದ ಕಾಲ ಮುಗಿದು ಉತ್ಸವ ಆರಂಭವಾಗುವುದು ಇದೇ ದಿನ. ಕ್ಷೀರಾಬ್ದಿ ಪೂಜೆ ಬಳಿಕ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ ಮತ್ತು ಚಂದ್ರಮೌಳೀಶ್ವರನ ಉತ್ಸವ ಮೂರ್ತಿಗಳು ಎರಡು ರಥಗಳಲ್ಲಿ ಪಾಲ್ಗೊಳ್ಳುತ್ತವೆ.

ರಥೋತ್ಸವವು ಸಂಜೆ 6.45ಕ್ಕೆ ಆರಂಭವಾಗಲಿದ್ದು ಆ ಬಳಿಕವೇ ರಥಬೀದಿಯಲ್ಲಿ ಭಕ್ತರು ದೀಪವನ್ನು ಬೆಳಗಿಸಬೇಕು ಎಂದು ಮಠದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.