ಮಸೀದಿಗೆ ಭೂಮಿ: ಸು.ಕೋರ್ಟ್‌ ತೀರ್ಪಿಗೆ ಪುರಿ ಶ್ರೀಗಳ ಆಕ್ಷೇಪ


Team Udayavani, Nov 28, 2019, 5:15 AM IST

aa-36

ಉಡುಪಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ವಿಷಯದಲ್ಲಿ ಮಸೀದಿ ನಿರ್ಮಿಸಲು ಭೂಮಿ ಹಂಚಿಕೆ ಮಾಡಿಕೊಟ್ಟ ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ವೀಕಾರಾರ್ಹವಲ್ಲ ಎಂದು ಶ್ರೀಪುರಿ ಗೋವರ್ಧನ ಪೀಠದ ಶ್ರೀ ನಿಶ್ಚಲಾನಂದಸರಸ್ವತೀ ಸ್ವಾಮೀಜಿ ಹೇಳಿದರು.

ಪೇಜಾವರ ಮಠಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭ ಮಾತನಾಡಿದ ಅವರು, ಭಾರತದಲ್ಲಿ ಬಾಬರ್‌ ಹೆಸರಿನಲ್ಲಿ ಯಾವುದೇ ಮಸೀದಿ ರಚನೆಯಾಗುವುದು ಬೇಡ . ನಮ್ಮ ಔದಾರ್ಯವನ್ನು ದೌರ್ಬಲ್ಯವಲ್ಲ. ಪಾಕಿಸ್ಥಾನ, ಬಾಂಗ್ಲಾದೇಶ ಕೊಟ್ಟ ಬಳಿಕ ಇನ್ನು ಮಸೀದಿಗಾಗಿ ಜಾಗವೇಕೆ? ಭಾರತದಲ್ಲಿ ಮೂರು ರಾಷ್ಟ್ರಪತಿಗಳು, ಒಬ್ಬರು ಗೃಹ ಸಚಿವರು, ಒಬ್ಬರು ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರನ್ನಾಗಿ ಮುಸ್ಲಿಮರನ್ನು ಮಾಡಲಿಲ್ಲವೆ? ರಾಜಕಾರಣಿಗಳು ಯಾವತ್ತೂ ಅಧಿಕಾರಕ್ಕಾಗಿಯೇ ವ್ಯವಹರಿಸುತ್ತಾರೆ ಎಂದರು.

ಸಂತರಿಗೆ ರಾಜಕೀಯ ಬೇಡ
ಈ ಹಿಂದೆ ಪಿ.ವಿ. ನರಸಿಂಹ ರಾವ್‌ ಸರಕಾರವಿದ್ದಾಗ ಇಂತಹುದೇ ರಾಜೀ ಸೂತ್ರಕ್ಕೆ ನೀವು ಸಹಿ ಮಾಡಿದ್ದೀರಿ. ನಾನು ಅದಕ್ಕೆ ಸಹಿ ಮಾಡಿರಲಿಲ್ಲ ಎಂದು ಪೇಜಾವರ ಶ್ರೀಗಳಿಗೆ ತಿಳಿಸಿದರು. ಯೋಗಿ ಆದಿತ್ಯನಾಥ್‌ ಅವರ ಕುರಿತು ಕೇಳಿದಾಗ, ಅವರು ಯಾರು? ಸಂತರು ಯಾವತ್ತೂ ರಾಜಕೀಯವನ್ನು ಪ್ರವೇಶಿಸಬಾರದು ಎಂದರು.

ಶ್ರೀಕೃಷ್ಣ ಮಠಕ್ಕೆ ಭೇಟಿ
ಶ್ರೀ ನಿಶ್ಚಲಾನಂದಸರಸ್ವತೀ ಸ್ವಾಮೀಜಿ ಯವರು ಪೇಜಾವರ ಮಠದಿಂದ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪುರಿ ಸ್ವಾಮೀಜಿಯವರನ್ನು ಸ್ವಾಗತಿಸಿ, ಗೌರವಿಸಿದರು. ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥರು ಪುರಿ ಶ್ರೀಗಳನ್ನು ಗೌರವಿಸಿದರು. ಪುರಿ ಸ್ವಾಮೀಜಿಯವರ ಶಿಷ್ಯ ಶ್ರೀ ನಿರ್ವಿಕಲ್ಪಾನಂದಸರಸ್ವತೀ ಸ್ವಾಮೀಜಿ, ಆಪ್ತ ಕಾರ್ಯದರ್ಶಿ ಪ್ರೇಮಚಂದ್ರ ಝಾ, ಶಾಸಕ ಕೆ. ರಘುಪತಿ ಭಟ್‌ ಉಪಸ್ಥಿತರಿದ್ದರು.

ಸಂತರ ನಿರ್ಧಾರವೇ ಅಂತಿಮ
ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆಯಲ್ಲವೆ ಎಂದು ಪೇಜಾವರ ಶ್ರೀಗಳು ತಿಳಿಸಿದಾಗ, ಸರ್ವೋಚ್ಚ ನ್ಯಾಯಾಲಯಕ್ಕಿಂತ ಸಂಸತ್‌ ದೊಡ್ಡದಲ್ಲವೆ? ಧಾರ್ಮಿಕ ವಿಷಯದಲ್ಲಿ ಸಂತರ ನಿರ್ಧಾರವೇ ಅಂತಿಮ. ಕೋರ್ಟ್‌ ಇದರಲ್ಲಿ ಹಸ್ತಕ್ಷೇಪ ನಡೆಸುವುದು ತರವಲ್ಲ. ಬಾಬರ್‌ ಹೆಸರು ಭಾರತದಲ್ಲಿ ಇರಲೇಬಾರದು. ಒಂದು ಇಂಚು ಭೂಮಿಯೂ ಕೊಡಬಾರದು ಎಂದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.