ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್
Team Udayavani, Jul 10, 2022, 8:58 AM IST
ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.
ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಬರುತ್ತಿದೆ.
ಇದನ್ನೂ ಓದಿ:ಕಾಣಿಯೂರು: ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು, ನೀರು ಪಾಲು ಶಂಕೆ
ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುವ ಬಸ್ಸು ಸೇರಿದಂತೆ ವಾಹನಗಳು ಮಾಹಿತಿ ಇಲ್ಲದೆ ತೆರಳಿ ಮರಳಿ ವಾಪಸ್ಸಾಗಿರುವ ಘಟನೆ ಕಂಡು ಬಂತು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ .
ಸುನೀಲ್ ಕುಮಾರ್ ಸೂಚನೆ: ಆಗುಂಬೆ ಘಾಟಿಯ ಭೂಕಸಿತ ಸಂಭವಿಸಿದ ಸ್ಥಳದಲ್ಲಿ ತಕ್ಷಣ ಪರಿಹಾರ ಕಾರ್ಯ ಪ್ರಾರಂಭಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅವರು, ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ರಾತ್ರಿಯಿಂದಲೇ ಈ ಭಾಗದಲ್ಲಿ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಸಂಜೆಯೊಳಗಾಗಿ ಯಥಾಸ್ಥಿತಿ ಕಾಪಾಡುವುದಕ್ಕೆ ಪ್ರಯತ್ನಿಸಿ ನಾಗರಿಕರಿಗೆ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ
Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು
Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.