ಕಾಪು ಪುರಸಭಾ ವ್ಯಾಪ್ತಿಯ ಲೇ ಔಟ್‌ ಖಾತಾ ಸಮಸ್ಯೆ ಒಂದು ತಿಂಗಳೊಳಗೆ ನಿವಾರಣೆ: ಸೊರಕೆ

ಕಾಂಗ್ರೆಸ್‌ ಪಕ್ಷದ ಅಭಿವೃದ್ಧಿ ಪಟ್ಟಿಯನ್ನು ಮುಂದಿಟ್ಟುಕೊಂಡು ಬಿಜೆಪಿಯಿಂದ ಮತಯಾಚನೆ 

Team Udayavani, May 5, 2023, 5:49 PM IST

1-sorke

ಕಾಪು : ಕಾಪು ಪುರಸಭೆ ಆದ ಬಳಿಕ ಪುರಸಭೆ ವ್ಯಾಪ್ತಿಯ ಮಲ್ಲಾರು ಸನ್‌ ಶೆ„ನ್‌ ಬಡಾವಣೆಯೂ ಸೇರಿದಂತೆ ವಿವಿಧೆಡೆಯಲ್ಲಿ ಪ್ರಾಧಿಕಾರದ ಮೂಲಕ ಪಡೆಯುವ ಖಾತಾ ಸಮಸ್ಯೆ ನಿವಾರಣೆಗೆ ಶಾಸಕನಾಗಿ ಆಯ್ಕೆಯಾದ ಕೂಡಲೇ ಜನಸ್ನೇಹಿಯಾದ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ಸನ್‌ ಸೆ„ನ್‌ ಬಡಾವಣೆಗೆ ಭೇಟಿ ನೀಡಿ, ಮತಯಾಚನೆ ನಡೆಸಿ ನಿವಾಸಿಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು ಕಾಪು ಪುರಸಭೆ ಮತ್ತು ಪ್ರಾಧಿಕಾರ ರಚನೆಯ ಸಂದರ್ಭ ಜನರು ಎದುರಿಸ ಬಹುದಾದ ಸಮಸ್ಯೆಗಳ ಪಟ್ಟಿ ಮಾಡಿಕೊಂಡು, ಅವುಗಳ ನಿವಾರಣೆಗೆ ಅಗತ್ಯವಿರುವ ಎಲ್ಲಾ ಕಾಯ್ದೆ-ಕಾನೂನುಗಳ ಬಗ್ಗೆ ಅರಿತುಕೊಂಡು, ಬೈಲಾ ತಿದ್ಧಪಡಿಗೆ ಬಗ್ಗೆ ನಾವು ಸಿದ್ಧತೆ ನಡೆಸಿದ್ದೆವು. ಆದರೆ ಚುನಾವಣೆಯಲ್ಲಿ ಸೋತ ಬಳಿಕ ಅದನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾಗಿರುವುದೇ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದರು.

ಪ್ರಾಧಿಕಾರದ ಬೈಲಾದಲ್ಲಿ ತುಸು ಬದಲಾವಣೆ ತಂದು ತಿಂಗಳೊಳಗೆ ಸಮಸ್ಯೆಗೆ ಪರಿಹಾರ
ಕಾಪು, ಮಲ್ಲಾರು, ಉಳಿಯಾರಗೋಳಿ ಗ್ರಾಮ ಪಂಚಾಯತ್‌ ವ್ಯವಸ್ಥೆ ಇರುವಾಗ ವಿವಿಧ ಲೇಔಟ್‌ಗಳಲ್ಲಿ ಜಾಗ ಖರೀದಿಸಿದ ಜನರು ಕಾಪು ಪುರಸಭೆಯಾದ ನಂತರ ಪ್ರಾಧಿಕಾರದ ಮೂಲಕ ಖಾತಾ ಮಾಡಿಸಿಕೊಳ್ಳಲು ಬಹಳಷ್ಟು ಹೆಣಗಾಡುವಂತಾಗಿದೆ. ಬಿಜೆಪಿಯವರು ಈ ಬಗ್ಗೆ ನನ್ನ ಮೇಲೆ ಸುಳ್ಳು ಆಪಾದನೆ ಹೊರಿಸಿ, ತಾವು ಅಧಿಕಾರಕ್ಕೆ ಬಂದಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆ ಮೂಲಕ ಕಳೆದ ಬಾರಿ ಚುನಾವಣೆಯಲ್ಲಿ ನಾನು ಸೋಲುವಂತೆ ಮಾಡಿದ್ದರು. ನಾನು ಚುನಾವಣೆಯಲ್ಲಿ ಸೋತ ಮೇಲೂ ಕಾಪುವಿನ ಜನತೆಯನ್ನು ಕಾಡುತ್ತಿದ್ದ ಪ್ರಾಧಿಕಾರದ ಖಾತಾ ಬೆ„ಲಾದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ತಂದು ಮಾಸ್ಟರ್‌ ಪ್ಲಾನ್‌ ರೂಪಿಸಿ ಬದಲಾವಣೆ ತರಲು ಪ್ರಾಧಿಕಾರಕ್ಕೆ ತಿಳಿಸಿದ್ದು ನನಗೆ ಅಧಿಕಾರವಿಲ್ಲದ ಕಾರಣ ಅಧಿಕಾರಿಗಳು ನನ್ನ ಮಾತನ್ನು ಪುರಸ್ಕರಿಸಿಲ್ಲ. ಈ ಬಾರಿ ಪುರಸಭೆ ವ್ಯಾಪ್ತಿಯ ಜನತೆ ನನ್ನನ್ನು ಮತ್ತೂಮ್ಮೆ ಶಾಸಕನನ್ನಾಗಿ ಆಯ್ಕೆ ಮಾಡಿದರೆ ಒಂದು ತಿಂಗಳೊಳಗೆ ಈ ಸಮಸ್ಯೆಗೆ ಪರಿಹಾರ ರೂಪಿಸುವುದಾಗಿ ಭರವಸೆ ನೀಡಿದ್ದಾರೆ.

ಕಾಪು ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಂತಲತಾ ಶೇಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ರಮೀಝ್ ಹುಸೇನ್‌, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್‌ ಶೇಖ್‌, ಪಕ್ಷ ಮುಖಂಡರಾದ ಅಮೀರ್‌ ಕಾಪು, ಮಹಮ್ಮದ್‌ ಸಾಧಿಕ್‌, ದೀಪ್ತಿ, ನಯೀಮ್‌, ಬಾಶು ಸಾಹೇಬ್‌, ಶುಭಾ, ಅನಿಲ್‌ ಶೆಟ್ಟಿ, ಬಡಾವಣೆ ನಿವಾಸಿ ರವಿ ಆಚಾರ್ಯ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಪಕ್ಷ ಅಭಿವೃದ್ಧಿ ಪಟ್ಟಿಯನ್ನು ಮುಂದಿಟ್ಟುಕೊಂಡು ಬಿಜೆಪಿಯಿಂದ ಮತಯಾಚನೆ
2013ರಿಂದ 2018ರಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ನಡೆಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮತದಾರರ ಬಳಿ ಓಟು ಕೇಳುತ್ತಿದೆ ಎಂದು ವಿನಯ್‌ ಕುಮಾರ್‌ ಸೊರಕೆ ಲೇವಡಿ ಮಾಡಿದ್ದಾರೆ.

ಶಿರ್ವ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮನೆ ಮನೆ ಮತಯಾಚನೆ ನಡೆಸಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸ್ವಂತಿಕೆ ಅನ್ನೋದು ಇಲ್ಲ. ಕಳೆದ ಬಾರಿ ನಾನು ಶಾಸಕನಾಗಿದ್ದಾಗ ಮಾಡಿದ ಶೇ. 75 ರಷ್ಟು ಕಾಮಗಾರಿಗಳನ್ನು ತಮ್ಮ ಕಾಲದ ಅಭಿವೃದ್ಧಿ ಕೆಲಸಗಳು ಎಂದು ಮತದಾರರ ಮುಂದೆ ಸುಳ್ಳು ಹೇಳಿ ಓಟು ಕೇಳುವ ಗಿಮಿಕ್‌ ಮಾಡುತ್ತಿದ್ದಾರೆ. ಈ ಬಾರಿಯ ಬಿಜೆಪಿ ಪ್ರಣಾಳಿಕೆಯು ಕಳೆದ ಬಾರಿಯ ನನ್ನ ಪ್ರಣಾಳಿಕೆ ಕಾಪಿ ಆಗಿದೆ. ಬಿಜೆಪಿಗೆ ಕಾಂಗ್ರೆಸ್‌ನ ಅವದಿಯಲ್ಲಿ ಆದ ಅಭಿವೃದ್ಧಿ ಕಾಮಗಾರಿಗಳು ಮತ್ತು ಕಾಂಗ್ರೆಸ್‌ ಪ್ರಣಾಳಿಕೆಯೇ ದಾರಿದೀಪವೇ ಎಂಬ ಪ್ರಶ್ನೆಯನ್ನು ಮತದಾರರು ನಮ್ಮಲ್ಲಿ ಕೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್‌ ಶೆಟ್ಟಿ, ಕಾಂಗ್ರೆಸ್‌ ಮುಖಂಡರಾದ ಪ್ರಶಾಂತ್‌ ಜತ್ತನ್ನ, ಮೆಲ್ವಿನ್‌ ಡಿಸೋಜ, ಹಸನಬ್ಬ ಶೇಖ್‌, ಜೆಸಿಂತಾ, ಲ್ಯಾನ್ಸಿ ಕಾರ್ಡೊಜಾ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.