ಪ್ರಕೃತಿಯಲ್ಲಿ ದೈವೀಕ ಶಕ್ತಿ ಕಾಣುವುದು ಭಾರತದ ಸಂಸ್ಕೃತಿ: ಶ್ಯಾಮಲಾ ಕುಂದರ್
Team Udayavani, Oct 18, 2021, 5:57 PM IST
ಶಿರ್ವ: ಭಾರತೀಯ ಮಹಿಳೆಯರಲ್ಲಿ ವಿಶೇಷ ಶಕ್ತಿಯಿದ್ದು ,ಪ್ರಕೃತಿಯಲ್ಲಿ ದೈವೀಕ ಶಕ್ತಿಯನ್ನು ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ನಮ್ಮ ದೇಶದ ಸಂಸðತಿಯನ್ನು ವಿದೇಶಿಗರು ಪಾಲಿಸುತ್ತಿದ್ದು ನಾವೇ ಅದನ್ನು ಪಾಲಿಸಿದಾಗ ವಿಶೇಷ ಶಕ್ತಿ ಬರುತ್ತದೆ.ಮಹಿಳೆಯರು ಭಾರತೀಯ ಸಂಸðತಿ,ಸಂಸ್ಕಾರಗಳನ್ನು ಪಾಲಿಸುವ ಮೂಲಕ ಸಿಕ್ಕ ಅಧಿಕಾರ,ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಸಾಧನೆ ಮಾಡಿ ತೋರಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದರು.
ಅವರು ಅ. 18 ರಂದು ಶಿರ್ವ ಗ್ರಾ.ಪಂ. ಸಭಾ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ಆಯೋಗ,ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ ಮತ್ತು ಜಿ.ಪಂ. ಉಡುಪಿ,ಜಿಲ್ಲಾ ಮಕ್ಕಳ ರಕ್ಷಣೆ ಘಟಕ ಮತ್ತು ಶಿರ್ವ ಗ್ರಾ.ಪಂ. ಆಶ್ರಯದಲ್ಲಿ ನಡೆದ ಮಹಿಳೆಯರಿಗೆ ಕಾನೂನು ಅರಿವು-ನೆರವು ಮಾಹಿತಿ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.
ಮುಖ್ಯ ಅತಿಥಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ .ಎಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿಅನೇಕ ಕಾನೂನುಗಳಿದ್ದು ಅನುಷ್ಠಾನಗೊಳ್ಳಬೇಕಿದೆ.ಕಾನೂನು ಮಹಿಳೆಯರ ಆತ್ಮರಕ್ಷಣೆ ಮತ್ತು ಸ್ವಾಭಿಮಾನ ರಕ್ಷಣೆಗೆ ಸದುಪಯೋಗವಾಗಬೇಕೇ ಹೊರತು ಸಂಸಾರದ ಸಂಬಂಧ ಬಿಗಡಾಯಿಸಬಾರದು ಎಂದು ಹೇಳಿದರು.
ಶಿರ್ವ ಪೊಲೀಸ್ ಠಾಣಾಧಿಕಾರಿ ಶ್ರೀಶೈಲ ಮುರಗೋಡ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿಯಾವುದೇ ಕಾನೂನು ಬಾಹಿರ ಚಟುವಟಿಕೆ,ಮನೆಗಳ್ಳತನ ,ಅಕ್ರಮ ಗೋಸಾಗಾಟ,ಬ್ಯಾಂಕ್ ವಂಚನೆ,ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಡೆದಲ್ಲಿ ಇಆರ್‌ವಿ 112 ಗೆ ಕರೆ ಮಾಡುವಂತೆ ಮತ್ತು ಬೀಟ್ ಸಿಬಂದಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್‌ಮಾತನಾಡಿದರು. ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್.ಪಾಟ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ನ್ಯಾಯವಾದಿ ವಾಣಿ ವಿ. ರಾವ್ ಮಹಿಳೆ ಮತ್ತು ಕಾನೂನು, ಹಾಗೂ ಮೇರಿ ರಂಜನಿ ಶ್ರೇಷ್ಠ ಮತ್ತು ಅಂಜಲಿನಾ ಶ್ರೇಷ್ಠ ಕೌಟುಂಬಿಕ ದೌರ್ಜನ್ಯದಿಂದ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವ ಕಾಯಿದೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ ,ಪಂಚಾಯತ್ ಕಾರ್ಯದರ್ಶಿ ಮಂಗಳಾ ಜೆ.ವಿ., ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು, ಸ್ತಿÅàಶಕ್ತಿ ಗುಂಪುಗಳ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್ ಕಾರ್ಯಕ್ರಮ ನಿರೂಪಿಸಿ, ಸಹನಾ ಕುಂದರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.