ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!
Team Udayavani, Aug 13, 2022, 8:43 AM IST
ಉಡುಪಿ : ಹೆರ್ಗ ಗ್ರಾಮದ ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿದ್ದ ಶ್ವಾನಕ್ಕೆ ಚಿರತೆ ಹೊಂಚು ಹಾಕಿಕೊಂಡು ಬಂದಿದ್ದು, ಅದೃಷ್ಟವಶಾತ್ ಶ್ವಾನ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಕುತ್ತಿಗೆಯ ಬೆಲ್ಟ್ ಸಹಿತ ಸಾಕು ನಾಯಿಯನ್ನು ಮನೆ ಎದುರು ಕಟ್ಟಲಾಗಿತ್ತು. ರಾತ್ರಿ ಸುಮಾರು 1 ಗಂಟೆ ವೇಳೆ ಚಿರತೆ ಆಗಮಿಸಿ ನಾಯಿಯನ್ನು ಕೊಲ್ಲಲು ಯತ್ನಿಸಿದೆ. ಈ ವೇಳೆ ನಾಯಿ ಜೋರಾಗಿ ಬೊಗಳಿ ಸತ್ತಂತೆ ನಟಿಸಿದ ಬಳಿಕ ಮನೆಯ ಮಾಲಕರು ಹೊರಭಾಗದ ಲೈಟ್‌ಹಾಕಿದ್ದು, ಈ ವೇಳೆ ಚಿರತೆ ಓಡಿ ಹೋಗಿದೆ.
ಘಟನೆಯ ದೃಶ್ಯಾವಳಿ ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ ಈ ಹಿಂದೆಯೂ ಚಿರತೆ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಣಸಿಕ್ಕಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆಯವರು ಆಯಕಟ್ಟಿನ ಸ್ಥಳದಲ್ಲಿ ಬೋನ್ ಇರಿಸಿದ್ದಾರೆ. ನಾಯಿಯ ಕುತ್ತಿಗೆ ಭಾಗದಲ್ಲಿ ಹಲವಾರು ತರಚಿದ ಗಾಯಗಳು ಉಂಟಾಗಿವೆ. ಸದ್ಯಕ್ಕೆ ನಾಯಿಗೆ ಮನೆಯ ಒಳಭಾಗದಲ್ಲಿ ಆರೈಕೆ ಮಾಡಲಾಗುತ್ತಿದೆ.
ಇದನ್ನೂ ಓದಿ : ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.