“ಪತ್ರಕರ್ತರಲ್ಲಿ ಸಾಮಾಜಿಕ ಚಿಂತನೆ ಇರಲಿ’
Team Udayavani, Jul 24, 2017, 7:10 AM IST
ಬ್ರಹ್ಮಾವರ: ಸಮಾಜ, ಕೋರ್ಟ್, ಅಸೆಂಬ್ಲಿಗಳು ಮಾಧ್ಯಮದವರನ್ನು ರಕ್ಷಿಸುವಾಗ, ಜನಸಾಮಾನ್ಯರ ಹಕ್ಕನ್ನು ರಕ್ಷಿಸುವ ಹೊಣೆ ಮಾಧ್ಯಮಗಳದ್ದು. ಸಮಾಜದ ಬಗ್ಗೆ ಚಿಂತನೆ ಮಾಧ್ಯಮದವರಿಗೆ ಇರಬೇಕು ಎಂದು ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಹೇಳಿದರು.
ಬ್ರಹ್ಮಾವರ ಬಂಟರ ಭವನದಲ್ಲಿ ರವಿವಾರ ನಡೆದ ಹಿರಿಯ ಪತ್ರಕರ್ತ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರಸ್ ಕ್ಲಬ್ ಕೊಡಮಾಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರುವ ಮೂರು ಅಂಗಗಳ ಜತೆಗೆ ಮಾಧ್ಯಮ ಕ್ಷೇತ್ರವೂ ಸಮಾನವಾಗಿ ಬೆಳೆದಿದೆ. ಪತ್ರಿಕೆ
ಒಳ್ಳೆಯ ವಿಚಾರಗಳನ್ನು ಪ್ರಕಟಿಸಿದಲ್ಲಿ ಸಮಾಜದಲ್ಲಿ ಸ್ಥಾನಮಾನ, ಗೌರವ ಸಿಗುತ್ತಿದೆ. ಕೆಟ್ಟದ್ದನ್ನು ಬರೆದಲ್ಲಿ ಸಮಾಜದ ಜನತೆಯೇ ಶಿಕ್ಷೆ ನೀಡುವುದನ್ನು ನಾವು ನೋಡುತ್ತಾ ಇದ್ದೇವೆ. ಮಾಧ್ಯಮದವರ ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು ಎಂದ ಅವರು ಒಳ್ಳೆಯ ಲೇಖನದೊಂದಿಗೆ ಜನಮನ ಗೆದ್ದ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಕೊಡುಗೆ ಮಾಧ್ಯಮ ಕ್ಷೇತ್ರಕ್ಕೆ ಅಪಾರ ಎಂದು ಹೇಳಿದರು.
ರವಿ ಬೆಳಗೆರೆಗೆ ಪ್ರಶಸ್ತಿ ಸಮಾರಂಭದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಅವರ ಪರವಾಗಿ ಹಾಯ್ ಬೆಂಗಳೂರು ಆಡಳಿತ ಮಂಡಳಿಯ ಆಡಳಿತಾಧಿಕಾರಿ ಉಮೇಶ್ ಹೆಗ್ಡೆ ಅವರು ಸ್ವೀಕರಿಸಿದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿಯೂ ಜವಾಬ್ದಾರಿ ಇದೆ. ಆತ್ಮಸಾಕ್ಷಿ ಶುದ್ಧವಾಗಿದಲ್ಲಿ ಯಾವ ಕ್ಷೇತ್ರದಲ್ಲಿಯೂ ಭಯವಿಲ್ಲ ಎಂದು ಹೇಳಿದರು.
ಬ್ರಹ್ಮಾವರ ಪ್ರಸ್ ಕ್ಲಬ್ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ
ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿಗಳಾದ ಆನಂದ ಸಿ. ಕುಂದರ್, ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಸಮಾಜ
ಸೇವಕ ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಉಪಸ್ಥಿತರಿದ್ದರು. ವಸಂತ ಗಿಳಿಯಾರ್ ಪ್ರಸ್ತಾವನೆಗೈದರು. ಹರೀಶ್ ಕಿರಣ್ ತುಂಗ ವಂದಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.