ಚಿಟ್ಟಾಣಿ ಪರಂಪರೆ ಮುಂದುವರಿಯಲಿ
Team Udayavani, Oct 29, 2017, 3:15 PM IST
ಉಡುಪಿ, ಅ. 28: ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಯಕ್ಷಗಾನಕ್ಕೆ ಜೀವಮಾನವಿಡೀ
ಸೇವೆ ಸಲ್ಲಿಸಿರುವುದು ಮಾತ್ರವಲ್ಲ, ಹಲವಾರು ಮೇರು ಕಲಾವಿದರನ್ನು ಬೆಳೆಸಿ ಅವರ ಪರಂಪರೆ ಮುಂದುವರಿಯುವಂತೆ ಮಾಡಿದ್ದಾರೆ.
ಯಕ್ಷಗಾನ ಅಳಿಯುವುದಿಲ್ಲ ಎಂಬ ಮಾತನ್ನು ಇಂತಹ ಕಲಾವಿದರು ನಿಜಗೊಳಿಸಲಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಅವರು ಶನಿವಾರ ರಾಜಾಂಗಣದಲ್ಲಿ ಜರಗಿದ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಚಿಟ್ಟಾಣಿ ಶೈಲಿಯಂತೆಯೇ ಇತರ ಕಲಾವಿದರೂ ಪ್ರದರ್ಶನ ನೀಡಿದಾಗ ಚಿಟ್ಟಾಣಿ ಅಮರರಾಗುತ್ತಿದ್ದಾರೆ. ಹೃದಯದಲ್ಲಿ ಸದಾ ಕುಣಿಯುತ್ತಿದ್ದಾರೆ ಎಂಬಂತೆ ಭಾಸವಾಗುತ್ತಿದೆ. ಶ್ರೀಕೃಷ್ಣನಿಗೆ ಕಾರ್ತಿಕ ಮಾಸದವರೆಗೆ ಉತ್ಸವ ಇಲ್ಲ. ಆದರೆ ರಾಜಾಂಗಣದಲ್ಲಿ ಜರಗಿದ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹದಿಂದಾಗಿ ಯಕ್ಷಗಾನ ಕಲೆಯ ಸಪೊ¤àತ್ಸವ ನಡೆದಂತಾಗಿದೆ ಎಂದರು. ಪೇಜಾವರ ಕಿರಿಯ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಪ್ರಶಸ್ತಿ ಪ್ರದಾನ ಹಿರಿಯ ಸ್ತ್ರೀ ವೇಷಧಾರಿ ಶಿರಳಗಿ
ಭಾಸ್ಕರ ಜೋಶಿ ಅವರಿಗೆ “ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ’ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದ ಕೃಷ್ಣ ಕುಮಾರ್ ರಾವ್ ಮಟ್ಟು ಅವರಿಗೆ “ಟಿ.ವಿ. ರಾವ್ ಪ್ರಶಸ್ತಿ’ಯನ್ನು ಪೇಜಾವರ ಶ್ರೀಗಳು ಪ್ರದಾನ ಮಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಣೇಶ್ ರಾವ್, ಡಾ| ಟಿ.ಎಸ್. ರಾವ್, ಉದ್ಯಮಿ ಗೋಪಾಲ ಬಂಗೇರ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.