“ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸೋಣ’
Team Udayavani, Feb 27, 2019, 1:00 AM IST
ಕಟಪಾಡಿ: ದ್ವೇಷ, ಸೇಡಿನ ರಾಜಕಾರಣದ ಮೂಲಕ ಭಾರತದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ, ಏಕತೆ-ಅಖಂಡತೆ-ಸಮಗ್ರತೆ ಕಾನೂನು ಸುರಕ್ಷತೆ ಅಪಾಯದಲ್ಲಿದೆ. ದೇಶದ ಇತರೇ ಜ್ವಲಂತ ಸಮಸ್ಯೆಗಳನ್ನು ಸರಿಪಡಿಸುವ ಪ್ರಯತ್ನವು ಗಾಂಧೀಜಿ ಹಾಕಿಕೊಟ್ಟ ಚಳವಳಿ ಮಾರ್ಗದಿಂದ ಮಾಡಬೇಕಿದೆ. ಆ ನಿಟ್ಟಿನಲ್ಲಿ ಗಾಂಧಿಯಾನದ ಚಳವಳಿಗಳ ಮೂಲಕ ನಾವೆಲ್ಲರೂ ಸೇರಿಕೊಂಡು ತಕ್ಕ ಉತ್ತರ ನೀಡೋಣ. ಮತ್ತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕರೆ ನೀಡಿದರು.
ಆವರು ಫೆ.25ರಂದು ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜನಜಾಗೃತಿಗಾಗಿ ದೇಶ ಸಂಚಾರದ ಸಂದರ್ಭ ಕಟಪಾಡಿಯಿಂದ ಉದ್ಯಾವರ ಹೊಳೆಯನ್ನು ದೋಣಿಯ ಜಂಗಲಿನ ಮೂಲಕ ದಾಟಿದ ಉದ್ಯಾವರ ಕಡವಿನಬಾಗಿಲಿನಿಂದ ಉಡುಪಿಯ ಅಜ್ಜರಕಾಡು ಗಾಂಧಿ ಪ್ರತಿಮೆ ತನಕ ಪಾದಯಾತ್ರೆ-ಗಾಂಧಿ ಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವತ್ಛ ಭಾರತ್ ಮಹಾತ್ಮಾ ಗಾಂಧಿಯವರ ಕನಸು. ಕಾಂಗ್ರೆಸ್‌ನ ನಿರ್ಮಲ್ ಭಾರತ್ ಯೋಜನೆಯನ್ನು ಇದೀಗ ಬಿಜೆಪಿ ಸ್ವತ್ಛ ಭಾರತ್ ಮೂಲಕ ಹೈಜಾಕ್ ಮಾಡಿದೆ.
ದೇಶದ 6.5 ಲಕ್ಷ ಹಳ್ಳಿಗಳ ಅಭಿವೃದ್ಧಿಯಾದಲ್ಲಿ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ ಎಂದು ಮನಗಂಡಿದ್ದು, ಸ್ವರಾಜ್ ನಿರ್ಮಾಣಕ್ಕಾಗಿ ಗಾಂಧೀಜಿ ಕನಸು ಕಂಡಿದ್ದರು. ಅದಕ್ಕಾಗಿ ಕಾಂಗ್ರೆಸ್ ಪಂಚಾಯತ್ ರಾಜ್ ವಿಕೇಂದ್ರೀಕರಣದ ಮೂಲಕ ಮಹಿಳಾ ಮೀಸಲಾತಿ, ಮಹಿಳೆಯರ ರಕ್ಷಣೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಸ್ಥಳೀಯಾಡಳಿತದಲ್ಲೂ ಮೀಸಲಾತಿ ಇರಿಸಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ರೀತಿಯಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿದೆ ಎಂದರು.
ದೇಶದ್ರೋಹದ ಕೆಲಸ ಮಾಡುವ ಬಿಜೆಪಿಗರು ಪ್ರಿಯಾಂಕ ಗಾಂಧಿ ರಾಜಕೀಯಕ್ಕೆ ಬಂದ ತತ್‌ಕ್ಷಣ ದಿಗ್ಭ್ರಮೆಗೊಂಡಿದ್ದಾರೆ, ಕಾಳಧನ್ ತರಲಿಲ್ಲ, ರೈತರ ಆತ್ಮಹತ್ಯೆ ಜಾಸ್ತಿಯಾಗಿದೆ, ಫಸಲ್ ಭಿಮಾ ಯೋಜನೆಯ ಮೂಲ ಹಣ ಲೂಟಿಯಾಗಿದೆ. ಇದಕ್ಕೆ ಕಾರಣರು ಯಾರೆಂದು ಮತದಾರರಿಗೆ ಮುಟ್ಟಿಸಬೇಕಿದೆ. ಆ ಮೂಲಕ ಜನಜಾಗೃತಿ ಮೂಡಿಸೋಣ ಎಂದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಡುಪಿಯ ಪ್ರಮುಖರಾದ ರೋಶಿನಿ ಒಲಿವೆರಾ ಅವರಿಗೆ ಗಾಂಧಿ ಟೋಪಿ ತೊಡಿಸಿ, ಪಕ್ಷದ ಧ್ವಜ ನೀಡಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಉದ್ಯಾವರ- ಮಠದಂಗಡಿ, ಬಲಾಯಿಪಾದೆ, ಕಿನ್ನಿಮೂಲ್ಕಿ, ಹಳೆ ರಸ್ತೆಯಲ್ಲಿ ಈ ಪಾದಯಾತ್ರೆಯು ಸಾಗಿತ್ತು.
ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಭಂಡಾರಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕ ರಂಗಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವಾ, ಪಿ.ವಿ. ಮೋಹನ್, ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಮುರಳೀಧರ ಶೆಟ್ಟಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ಪ್ರವೀಣ್ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಗೀತಾ ವಾಗ್ಲೆ, ಗ್ರಾ.ಪಂ., ತಾ.ಪಂ., ಜಿ.ಪಂ. ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.