ಅಸಭ್ಯವರ್ತನೆ ತೋರಿದಾತನ ಕೊಲೆ: ದಂಪತಿಗೆ ಜೀವಾವಧಿ ಸಜೆ
Team Udayavani, Aug 2, 2017, 8:50 AM IST
ಉಡುಪಿ: ಆರು ವರ್ಷಗಳ ಹಿಂದೆ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯು ಅಸಭ್ಯವಾಗಿ ವರ್ತಿಸಿದ್ದರು ಎಂದು ಆರೋಪಿಸಿ ಅವರನ್ನು ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕಾಂತಾವರ ಗ್ರಾಮದ ಬಾರಾಡಿಯ ಶೇಖರ ದೂಜ ಮೂಲ್ಯ (53) ಹಾಗೂ ಅವರ ಪತ್ನಿ ಮಾಲತಿ ಮೂಲ್ಯ (46) ಶಿಕ್ಷೆಗೊಳಪಟ್ಟವರು. ಬಾರಾಡಿ ನಿವಾಸಿ ರಾಮ ಮೂಲ್ಯ (65) ಕೊಲೆಯಾಗಿದ್ದವರು.
2011ರ ಸೆ. 16ರ ರಾತ್ರಿ 11 ಗಂಟೆಗೆ ಕಾಂತಾವರ ಗ್ರಾಮದ ಬಾರಾಡಿ ದರ್ಕಾಸು ಮನೆಯಲ್ಲಿ ಶೇಖರ ಮತ್ತವರ ಪತ್ನಿ ಮಾಲತಿ ಇದ್ದಾಗ ಅಲ್ಲಿಗೆ ಬಂದಿದ್ದ ರಾಮ ಮೂಲ್ಯ ಅವರು ಅಸಭ್ಯವಾಗಿ ವರ್ತಿಸಿದ್ದರು. ಅದರಿಂದ ಕೋಪಗೊಂಡ ದಂಪತಿ ಮನೆಯ ಮುಂಭಾಗದ ಪಂಚಾಂಗದಲ್ಲಿ ಹಾರೆಯ ಹಿಡಿಯಿಂದ ತಲೆ, ಮುಖಕ್ಕೆ ಹೊಡೆದು, ಕತ್ತಿಯಿಂದ ಕಡಿದು ಕಟ್ಟಿ ಹಾಕಿ ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಗಳ ಬಂಧನವಾಗಿತ್ತು. ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ ಪ್ರಸಾದ್ ಎಸ್. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ಆ. 1ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 5,000 ರೂ. ದಂಡ ಹಾಗೆಯೇ ದಂಡದ ಮೊತ್ತವನ್ನು ನೊಂದವರಿಗೆ ಪರಿಹಾರವಾಗಿ ನೀಡಬೇಕು ಎಂದು ಪ್ರಕಟಿಸಿದ್ದಾರೆ. ಅಭಿಯೋಜನೆಯ ಪರ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.