December ತಿಂಗಳಲ್ಲಿ ಮದ್ಯ ಮಾರಾಟ; ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು

Team Udayavani, Jan 11, 2024, 7:20 AM IST

December ತಿಂಗಳಲ್ಲಿ ಮದ್ಯ ಮಾರಾಟ;  ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು

ಉಡುಪಿ: ಜಿಲ್ಲೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವು ದಾಖಲೆ ಪ್ರಮಾಣದಲ್ಲಿ ಮದ್ಯ ವಹಿವಾಟು ನಡೆದಿದ್ದು, ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಅಬಕಾರಿ ಅದಾಯ ಜಿಲ್ಲೆಯಿಂದ ಜಮೆಯಾಗಿದೆ.

ಡಿಸೆಂಬರ್‌ 20ರ ಅನಂತರ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಕ್ರಿಸ್ಮಸ್‌ ರಜೆ ಸಹಿತ ಡಿ. 31 ರಾತ್ರಿಯ ಮೋಜಿನ ಕೂಟವನ್ನು ಸಂಭ್ರಮದಿಂದ ಆಚರಿಸಿದ್ದರು. ವರ್ಷಾಂತ್ಯದಲ್ಲಿ ಮದ್ಯ ಮಾರಾಟ ಪ್ರಮಾಣ ಗಣನೀಯ ಏರಿಕೆ ಕಂಡಿದ್ದು, ಈ ವರ್ಷ ಡಿಸೆಂಬರ್‌ನಲ್ಲಿ 1,45,358 ಬಾಕ್ಸ್‌ ಮದ್ಯ ಮಾರಾಟವಾಗಿದ್ದು, 1,58,658 ಬಾಕ್ಸ್‌ ಬಿಯರ್‌ ಸೇರಿದಂತೆ ಒಟ್ಟು 3.4 ಲಕ್ಷ ಬಾಕ್ಸ್‌ ಮದ್ಯ ಮಾರಾಟವಾಗಿದೆ.

ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ 1,45,290 ಬಾಕ್ಸ್‌ ಮದ್ಯ, 1,38,681 ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು. ಹೊಸ ವರ್ಷ ಆಚರಣೆಗಾಗಿ ಒಂದು ದಿನದ ಪರವಾನಿಗೆ (ಸಿಎಲ್‌-5 ಸನ್ನದು) 9 ಕಡೆಗಳಿಗೆ ನೀಡಲಾಗಿದೆ. ಕಳೆದ ವರ್ಷ ಮೂರು ಪರವಾನಿಗೆ ನೀಡಲಾಗಿತ್ತು ಎಂದು ಜಿಲ್ಲೆಯ ಅಬಕಾರಿ ಇಲಾಖೆ ಡಿಸಿ ಬಿಂದುಶ್ರೀ ತಿಳಿಸಿದ್ದಾರೆ.

32 ಬಾಟಲಿ ಗೋವಾ ಮದ್ಯ ವಶಕ್ಕೆ
ವರ್ಷಾಂತ್ಯ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆ ತಡೆಗಟ್ಟುವ ಸಲುವಾಗಿ ಬೈಂದೂರು ಶಿರೂರು ಟೋಲ್‌ಗೇಟ್‌ನಲ್ಲಿ ವಾಹನ ತಪಾಸಣೆ ನಡೆಸಿದಾಗ ಗೂಡ್ಸ್‌ ವಾಹನದಲ್ಲಿ ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಲೀ. ಮದ್ಯ ಪತ್ತೆಯಾಗಿದೆ. 750 ಎಂಎಲ್‌ನ 32 ಮದ್ಯದ ಬಾಟಲಿಯನ್ನು ಗಸ್ತಿನಲ್ಲಿದ್ದ ಅಬಕಾರಿ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ದ.ಕ.: ಶೇ. 4ರಷ್ಟು ಕುಸಿತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಡಿಸೆಂಬರ್‌ ತಿಂಗಳಲ್ಲಿ ಮದ್ಯಮಾರಾಟ ಕುಸಿತ ಕಂಡಿದೆ. 2022ರ ಡಿಸೆಂಬರ್‌ ತಿಂಗಳಿಗೆ ಹೋಲಿಕೆ ಮಾಡಿದರೆ 9,857 (ಶೇ.4) ಬಾಕ್ಸ್‌ ಮದ್ಯ ಕಡಿಮೆ ಮಾರಾಟವಾಗಿದೆ ಎಂದು ಅಬಕಾರಿ ಇಲಾಖಾ ಅಂಕಿ ಅಂಶ ತಿಳಿಸಿದೆ. ಇದೇ ವೇಳೆ ಬಿಯರ್‌ ಮಾರಾಟದಲ್ಲಿ ಶೇ.12.7ರಷ್ಟು ಹೆಚ್ಚಳವಾಗಿದ್ದು, 2,58,663 ಬಾಕ್ಸ್‌ ಮಾರಾಟವಾಗಿದೆ.

2022ರ ಡಿಸೆಂಬರ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 2,50,891 ಬಾಕ್ಸ್‌ ಮದ್ಯ ಮಾರಾಟವಾಗಿತ್ತು. ಈ ಬಾರಿ 2,41,034 ಬಾಕ್ಸ್‌ ಮಾತ್ರ ಮಾರಾಟವಾಗಿದೆ, ಇದರ ಪ್ರಮಾಣ 84,770 ಲೀ. ಹೊಸ ವರ್ಷದ ಪಾರ್ಟಿಗಳಿಗೆ ಕಡ್ಡಾಯ ನಿಯಮಾವಳಿ, ಕೆಲವೊಂದು ವರ್ಗದ ಕಾರ್ಮಿಕರು ವಲಸೆಗೆ ಹೋಗಿರುವುದು, ಮದ್ಯದ ಬೆಲೆ ಏರಿಕೆ ಮೊದಲಾದವುಗಳು ಮಾರಾಟ ಕಡಿಮೆಯಾಗಲು ಕಾರಣವಾಗಿದೆ ಎಂದು ಅಬಕಾರಿ ಇಲಾಖೆ ಡಿಸಿ ಟಿ.ಎಂ. ಶ್ರೀನಿವಾಸ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.