ಜಾನುವಾರು ಸಾಗಾಟ: 4 ಪೊಲೀಸರ ಅಮಾನತು
Team Udayavani, Jul 19, 2019, 5:02 AM IST
ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್ ಬಳಿ ಜು. 12ರಂದು ಪತ್ತೆಯಾದ ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಆರೋಪಿ ಗಳಾಗಿರುವ 6 ಮಂದಿ ಪೊಲೀಸರ ಪೈಕಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಉಡುಪಿ ಎಸ್‌ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ.
ಕೋಟ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಾಘವೇಂದ್ರ, ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಸಹಾಯಕ ಉಪನಿರೀಕ್ಷಕ ಬಾಲಸುಬ್ರಹ್ಮಣ್ಯ, ಹೆಡ್ ಕಾನ್‌ಸ್ಟೆಬಲ್ ಪ್ರಶಾಂತ್ ಮತ್ತು ಕಾನ್‌ಸ್ಟೇಬಲ್ ಚಂದ್ರಶೇಖರ್ ಅಮಾನತು ಆದವರು. ಇವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಉ.ಕ. ಮಂಕಿ ಠಾಣೆಯ ವಿನೋದ್, ಕರಾವಳಿ ಕಾವಲು ಪಡೆಯ ಸಂತೋಷ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಆರೋಪಿಗಳಿಗೆ ಶೋಧ
ಕೋಟ: ಅಕ್ರಮ ಗೋ ಸಾಗಾಟಕ್ಕೆ ಸಹಕಾರ ನೀಡಿದ ಆರೋಪಿಗಳಾದ ಆರು ಮಂದಿ ಪೊಲೀಸ್ ಪೇದೆಗಳಲ್ಲಿ ಇಬ್ಬರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಲೆ ಮರೆಸಿಕೊಂಡ ನಾಲ್ವರಿಗೆ ಶೋಧ ನಡೆದಿದೆ.
ಕಾರ್ಯ ದಕ್ಷತೆಗೆ ಶ್ಲಾಘನೆ
ಪೊಲೀಸ್ ಇಲಾಖೆಯ ಸಿಬಂದಿ ಗೋಸಾಗಾಟ ಕೃತ್ಯಕ್ಕೆ ಸಹಕರಿಸುತ್ತಿದ್ದಾರೆ ಎಂದು ಗೊತ್ತಾದಾಗ ಮುಲಾಜಿಲ್ಲದೆ ಕ್ರಮಕ್ಕೆ ಮುಂದಾದ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.