ಮೀನುಗಾರರ ಮನೆಗೇ ಸಾಲ ಮನ್ನಾ ಆದೇಶ
ಬೈಂದೂರು : 387 ಕೋ.ರೂ. ವೆಚ್ಚದ ಕಾಮಗಾರಿಗಳಿಗೆ ಸಿಎಂ ಶಿಲಾನ್ಯಾಸ
Team Udayavani, Dec 29, 2019, 6:00 AM IST
ಕುಂದಾಪುರ: ರಾಜ್ಯದ ಮೀನುಗಾರರ ಸಾಲ ಮನ್ನಾ ಯೋಜನೆಯ ಗೊಂದಲ ನಿವಾರಿಸಲು ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಫಲಾನುಭವಿಗಳ ಮನೆ ಮನೆಗೆ ಆದೇಶ ಪತ್ರ ವನ್ನು ಕೆಲವೇ ದಿನಗಳಲ್ಲಿ ಕಳುಹಿಸಲು ಕ್ರಮ ಕೈಗೊಳ್ಳ ಲಾಗುವುದು. ಉಡುಪಿ ಜಿಲ್ಲೆಯ 20,197 ಮೀನು ಗಾರರ 55 ಕೋ.ರೂ. ಸಾಲ ಮನ್ನಾ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಶನಿವಾರ ವಂಡ್ಸೆ ಸಮೀಪದ ನೆಂಪುವಿನ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ರಾಜ್ಯ ಸರಕಾರ ಮತ್ತು¤ ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ದಲ್ಲಿ 387.31 ಕೋಟಿ ರೂ. ವೆಚ್ಚದ 392 ಕಾಮಗಾರಿ ಗಳಿಗೆ ಚಾಲನೆ ನೀಡಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಮಕ್ಕಳ ಶಿಕ್ಷಣ, ಮಹಿಳಾ ಸ್ವಾವಲಂಬನೆಗಾಗಿ ಸ್ತ್ರೀಶಕ್ತಿ ಸಂಘಟನೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ಸಲುವಾಗಿ ಮಹಿಳಾ ಸಶಕ್ತೀಕರಣಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅನೇಕ ಯೋಜನೆಯನ್ನು ರೂಪಿಸಲು ಚಿಂತನೆ ನಡೆಸಲಾಗಿದೆ ಎಂದರು.
12 ಕೋ.ರೂ. ಪ್ರಸ್ತಾವನೆ
ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮಾತ ನಾಡಿ, 8 ಗ್ರಾಮಗಳ ಕುಡಿಯುವ ನೀರು ಮತ್ತು 1,380 ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೌಕೂರು – ಸಿದ್ದಾಪುರ ಏತ ನೀರಾವರಿ ಯೋಜನೆಗೆ 73 ಕೋ.ರೂ. ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡ ಲಾಗಿದೆ. ಗಂಗೊಳ್ಳಿ ಜೆಟ್ಟಿಯು ಕಳಪೆ ಕಾಮಗಾರಿ ಯಿಂದ ಕುಸಿದಿದೆ. ಈ ಬಗ್ಗೆ ಡಿಸಿ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಮೀನುಗಾರಿಕಾ ಸಚಿವರ ಅಧ್ಯಕ್ಷತೆ ಯಲ್ಲಿ ಇತ್ತೀಚೆಗೆ ಸಭೆ ನಡೆಸಿ ಜೆಟ್ಟಿಯ ಪುನರ್ ನಿರ್ಮಾಣಕ್ಕಾಗಿ ಅಂದಾಜು 12 ಕೋ. ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮುಖ್ಯಮಂತ್ರಿ ಹಾಗೂ ಸಂಸದರ ಸಹಕಾರದಿಂದ 387 ಕೋ.ರೂ. ಅನುದಾನ ಬಿಡುಗಡೆಯಾಗಿದ್ದು, ಬೈಂದೂರು ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ, ಇನ್ನಷ್ಟು ಗ್ರಾಮೀಣ ಭಾಗದ, ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿ ಆಗಬೇಕಿದೆ ಎಂದವರು ಸಿಎಂಗೆ ಅಹವಾಲು ಸಲ್ಲಿಸಿದರು.
ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ, ಉಪವಿಭಾಗಾಧಿಕಾರಿ ಕೆ. ರಾಜು, ಪೊಲೀಸ್ ಸಹಾಯಕ ಅಧೀಕ್ಷಕ ಹರಿರಾಂ ಶಂಕರ, ಜಿ.ಪಂ. ಸದಸ್ಯರಾದ ಬಾಬು ಹೆಗ್ಡೆ ತಗ್ಗರ್ಸೆ, ಸುರೇಶ ಬಟವಾಡಿ, ಶಂಕರ ಪೂಜಾರಿ, ರೋಹಿತ್ ಕುಮಾರ್ ಶೆಟ್ಟಿ, ಶೋಭಾ ಜಿ. ಪುತ್ರನ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರ.ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಪುರುಷೋತ್ತಮ, ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಜ್ಯೋತಿಪ್ರಕಾಶ್, ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಹಿಳಾ ಮೊರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ಗ್ರಾ.ಪಂ. ಅಧ್ಯಕ್ಷ ರವಿದಾಸ್, ತಾ.ಪಂ. ಸದಸ್ಯರಾದ ಸತೀಶ್ ಪೂಜಾರಿ, ಉಮೇಶ್ ಶೆಟ್ಟಿ ಕಲ್ಗದ್ದೆ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಡಿಸಿ ಜಿ. ಜಗದೀಶ್ ಸ್ವಾಗತಿಸಿ, ಅಪರ ಡಿಸಿ ಸದಾಶಿವ ಪ್ರಭು ವಂದಿಸಿದರು. ಅಶೋಕ್ ಕಾಮತ್ ನಿರೂಪಿಸಿದರು.
392 ಕಾಮಗಾರಿಗೆ 387 ಕೋ.ರೂ.
ಬೈಂದೂರು ಕ್ಷೇತ್ರಕ್ಕೆ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 73.4 ಕೋ.ರೂ., ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 73.70 ಕೋ.ರೂ., ವಾರಾಹಿ ನೀರಾವರಿ (ಸೌಕೂರು – ಸಿದ್ಧಾಪುರ ಏತ ನೀರಾವರಿ) ಯೋಜನೆಗೆ 119.71 ಕೋ.ರೂ., ಪ್ರಧಾನಮಂತ್ರಿ ಗ್ರಾಮೀಣ ಸಡಕ್ ರಸ್ತೆ ಅಭಿವೃದ್ಧಿಗೆ 45 ಕೋ.ರೂ. ಸೇರಿದಂತೆ 392 ವಿವಿಧ ಕಾಮಗಾರಿಗಳಿಗೆ ಒಟ್ಟು 387.31 ಕೋ.ರೂ. ಮಂಜೂರಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ಬೈಂದೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿನ ನಿಸರ್ಗ ರಮಣೀಯ ಪ್ರದೇಶಗಳನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕಾರ್ಯಕ್ರಮ ರೂಪಿಸಲಾಗುವುದು.
– ಯಡಿಯೂರಪ್ಪ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.