ಫೆಬ್ರವರಿಯಿಂದ ಪೊಲೀಸರಿಗೆ 2,000 ರೂ. ಭತ್ತೆ : ಪರಮೇಶ್ವರ್‌


Team Udayavani, Jan 14, 2017, 3:45 AM IST

Parameshwar-13-1.jpg

ಕುಂದಾಪುರ: ಪೊಲೀಸ್‌ ಸಿಬಂದಿಗೆ ಡಿಸೆಂಬರ್‌ನಿಂದ ನೀಡಬೇಕಿದ್ದ ಭತ್ತೆಯನ್ನು ತಾಂತ್ರಿಕ ಕಾರಣಗಳಿಂದ ನೀಡಲಸಾಧ್ಯವಾಗಿದ್ದು, ಮುಂದಿನ ತಿಂಗಳ ವೇತನದೊಂದಿಗೆ ನೀಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು. ಅವರು ಗಂಗೊಳ್ಳಿ ಮೀನುಗಾರಿಕಾ ಬಂದರಿನ ಬಳಿ ನಿರ್ಮಿಸಿರುವ ಕರಾವಳಿ ಕಾವಲು ಪೊಲೀಸ್‌ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ವೇತನ ಹೆಚ್ಚಿಸುವಂತೆ ಪೊಲೀಸರಿಂದ ಬಂದ ಬೇಡಿಕೆಯ ಹಿನ್ನೆಲೆಯಲ್ಲಿ ರಚಿಸಿದ್ದ ಔರಾದ್ಕರ್‌ ನೇತೃತ್ವದ ಸಮಿತಿ ನೀಡಿದ ವರದಿ ಆಧರಿಸಿ ಈ ಭತ್ತೆ ಕಲ್ಪಿಸ‌ಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿಯನ್ನು ಹೊಸ ವೇತನ ಆಯೋಗದ ಮುಂದಿ ಡಲಾಗುವುದಲ್ಲದೇ ಆಯೋಗದ ನಿರ್ಧಾರದಂತೆ ಸರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆೆ ಎಂದರು. ಪೊಲೀಸರಿಗೆ ಪ್ರತಿ ಹತ್ತು ವರ್ಷಕ್ಕೊಮ್ಮೆ ಮುಂಭಡ್ತಿ ನೀಡಲಾಗುವುದು. ಪೊಲೀಸರಲ್ಲಿ ಅಶಿಸ್ತಿನ ನಡೆ ಕಂಡುಬಂದಲ್ಲಿ ಸರಕಾರ ಗಂಭೀರವಾಗಿ ತೆಗೆದುಕೊಳ್ಳುವುದು ಎಂದರು. ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇದ್ದ ಸುಮಾರು 25,000 ಸಿಬಂದಿಯಲ್ಲಿ ಈಗಾಗಲೇ 20,000 ಸಿಬಂದಿ ನೇಮಕಾತಿ ಮೂಲಕ ಸಿಬಂದಿ ಕೊರತೆಯನ್ನು ಪರಿಹ‌ರಿಸಲು ಇಲಾಖೆ ಗಮನಾರ್ಹ ಹೆಜ್ಜೆ ಇಟ್ಟಿದೆ ಎಂದು ಡಾ| ಪರಮೇಶ್ವರ್‌ ಹೇಳಿದರು. ಕರಾವಳಿ ಕಾವಲು ಪೊಲೀಸರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ಉಡುಪಿ ಜಿಲ್ಲೆಯಲ್ಲಿ ಮೆರೈನ್‌ ಟ್ರೈನಿಂಗ್‌ ಸೆಂಟರ್‌ ತೆರೆಯುವ ಚಿಂತನೆ ಸರಕಾರದ ಮುಂದಿದೆ ಎಂದರು.

ಅಂತರಿಕಾ ಭದ್ರತಾ ವಿಬಾಗದ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು ಪ್ರಸ್ತಾವನೆಗೈದರು. ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದಾನಪರಿಷತ್‌ ಸದಸ್ಯ ಕೆ. ಪ್ರತಾಪ್‌ಚಂದ್ರ ಶೆಟ್ಟಿ, ಕರ್ನಾಟಕ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಎಂ.ಎ., ಗಫೂರ್‌, ಪಶ್ಚಿಮ ವಲಯ ಪೊಲೀಸ್‌ ಮಹಾನಿರೀಕ್ಷಕ ಹರಿಶೇಖರನ್‌ ಪಿ., ನಿರ್ಮಿತಿ ಕೇಂದ್ರದ ಯೋಜನಾ ನಿರ್ದೆಶಕ ಅರುಣ್‌ ಕುಮಾರ್‌, ಗಂಗೊಳ್ಳಿ ಗ್ರಾ.ಪಂ. ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಬಾಲಕೃಷ್ಣ ಕೆ.ಟಿ. ಸ್ವಾಗತಿಸಿದರು. ಕರಾವಳಿ ಕಾವಲು ಪಡೆಯ ಪೊಲೀಸ್‌ ಉಪಾಧೀಕ್ಷಕ ಟಿ.ಆರ್‌. ಜೈಶಂಕರ್‌ ವಂದಿಸಿದರು. ಬಿ. ಮನಮೋಹನ್‌ ರಾವ್‌ ಕಾರ್ಯಕ್ರಮ ನಿರ್ವಹಿಸಿದರು. 

ಕುಂದಾಪುರಕ್ಕೆ ಮಹಿಳಾ ಠಾಣೆೆ: ಪರಿಶೀಲನೆ
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಠಾಣೆ ಇರಬೇಕು ಎನ್ನುವ ಸರಕಾರದ ನಿರ್ಧಾರದಂತೆ ಕುಂದಾಪುರದಲ್ಲಿ ಕಾರ್ಯಾಚರಿಸುತ್ತಿದ್ದ ಮಹಿಳಾ ಠಾಣೆಯನ್ನು ಉಡುಪಿಗೆ ವರ್ಗಾಯಿಸಲಾಗಿದೆ. ಆದರೆ ಈಗಾಗಲೇ ಇಲ್ಲಿನ ಮಹಿಳಾ ಸಂಘಟನೆಯವರಿಂದ ಬಹಳಷ್ಟು ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಕುಂದಾಪುರದಲ್ಲೂ ಮಹಿಳಾ ಠಾಣೆ ಒದಗಿಸುವ ಬಗ್ಗೆ ಮರುಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಗ್ರಾಮ ಆಡಳಿತ ಅಧಿಕಾರಿ: ನೇರ ನೇಮಕಕ್ಕೆ ಅರ್ಜಿ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

1-kalla

Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್

suicide

Shirva: ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಸಾವು

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.