ಅಂಗವಿಕಲರಿಗಾಗಿ ನಿರ್ಮಿಸಿದ ಶೌಚಾಲಯಕ್ಕೆ ಬೀಗ
ಬಳಕೆಗೆ ಅವಕಾಶವಿಲ್ಲ; ರಸ್ತೆಯಲ್ಲೇ ಮೂತ್ರ ವಿಸರ್ಜನೆ
Team Udayavani, Feb 11, 2020, 5:30 AM IST
ಉಡುಪಿ: ನಗರಸಭೆ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ನಾರ್ತ್ ಶಾಲೆ ಬಳಿ ವಿಶೇಷವಾಗಿ ಅಂಗವಿಕಲರಿಗಾಗಿ ನಿರ್ಮಿಸಲಾದ ಶೌಚಾಲಯ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಲಾಗಿದೆ.
4.30 ಲಕ್ಷ ರೂ. ವೆಚ್ಚದ ಶೌಚಾಲಯ
2013-14ನೇ ಸಾಲಿನ ಎಸ್‌ಎಫ್ಸಿ ಶೇ. 3ರಷ್ಟು ನಿಧಿ ಬಳಸಿಕೊಂಡು ಸುಮಾರು 4.30 ಲ.ರೂ ವೆಚ್ಚದಲ್ಲಿ ಒಂದೇ ಕಟ್ಟಡದಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿತ್ತು. ಅದರೆ ಈ ಶೌಚಾಲಯ ಯಾರಿಗಾಗಿ ನಿರ್ಮಿಸಲಾಗಿತ್ತೋ ಅವರಿಗೆ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂಗವಿಕಲರು ಬೀಗ ಕಂಡು ಹಿಂದಿರುಗುತ್ತಿದ್ದಾರೆ.
ರಸ್ತೆಯಲ್ಲಿ ಮೂತ್ರ ವಿಸರ್ಜನೆ
ಶ್ರೀಕೃಷ್ಣ ಮಠ ಹಾಗೂ ಉಡುಪಿ ನಗರ ಸಂಪರ್ಕಿಸುವ ಮಧ್ಯ ಭಾಗದಲ್ಲಿ ಅಂಗವಿಕಲರಿಗೆ 2018ರಲ್ಲಿ ಶೌಚಾಲಯ ನಿರ್ಮಿಸಲಾಗಿತ್ತು. ಆದರೆ ಕಟ್ಟಡ ಉದ್ಘಾಟನೆಯಾದ ತಿಂಗಳಲ್ಲಿ ಬೀಗ ಹಾಕಿದ್ದು, ಶೌಚಾಲಯದ ಪಹರೆ ಕಾಯುವ ಸಿಬಂದಿ ನಿತ್ಯ ಬಳಕೆಯ ವಸ್ತುಗಳನ್ನು ಕೊಠಡಿಯಲ್ಲಿ ಇಟ್ಟಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೀಗ ಹಾಕಿದ್ದರಿಂದ ಹಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.
ಮದ್ಯ ವ್ಯಸನಿ ಸಿಬಂದಿ
ಶೌಚಾಲಯ ಉಸ್ತುವಾರಿಗೆ ಗುತ್ತಿಗೆದಾರಿಂದ ನೇಮಕಗೊಂಡ ವ್ಯಕ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳಿವೆ. ಅಂಗವಿಕಲರು ಏನಾದರೂ ಬಂದರೆ ಅವರನ್ನು 5ರಿಂದ 10 ನಿಮಿಷ ಕಾಯಿಸುತ್ತಿರುವ ಬಗ್ಗೆಯೂ ದೂರುಗಳಿವೆ. ಸಿಬಂದಿ ಮದ್ಯ ಸೇವನೆ ಮಾಡುವುದರಿಂದ ರಾತ್ರಿ ವೇಳೆ ಶೌಚಾಲಯಕ್ಕೆ ಹೋಗಲು ಜನರು ಭಯಪಡುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ.
ನೀರಿನ ಸಮಸ್ಯೆ- ದುರ್ನಾತ
ಕಟ್ಟಡಕ್ಕೆ ಅಗತ್ಯವಿರುವ ನೀರು ಸರಬರಾಜು ಸರಿಯಾಗಿ ಆಗದೆ ಇರುವುದರಿಂದ ದುರ್ನಾತ ದಿಂದ ಶೌಚಾಲಯ ಕಟ್ಟಡ ಸಮೀಪ ತೆರಳಲು ಸಾಧ್ಯವಾಗುತ್ತಿಲ್ಲ. ಈ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ತೆರಳುವ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗಬೇಕಾಗಿದೆ. ಪರಿಸರ ಸುತ್ತಮುತ್ತಲಿನಲ್ಲಿ ಸ್ವತ್ಛತೆಯ ಕೊರತೆಯಿಂದ ಸೊಳ್ಳೆ ಉತ್ಪಾದನ ಕೇಂದ್ರವಾಗಿ ಪರಿವರ್ತನೆಯಾಗಿದೆ.
ಅಧಿಕಾರಿಗಳು ಕ್ರಮ ಕೈಗೊಳ್ಳಿ
ಅಂಗವಿಕಲರಿಗಾಗಿ ನಿರ್ಮಾಣವಾದ ಶೌಚಾಲಯ ಇದೀಗ ಅವರ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಿರುವುದು ಸರಿಯಲ್ಲ. ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು.
-ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ನಗರಸಭೆ ಅಧ್ಯಕ್ಷೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.